Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಾಲನಾ ಕೇಂದ್ರಗಳ ಸಮಗ್ರ ವಿವರ...

ಪಾಲನಾ ಕೇಂದ್ರಗಳ ಸಮಗ್ರ ವಿವರ ಸಂಗ್ರಹಿಸಿ: ಡಿಸಿ ಸಿಂಧೂ ಬಿ. ರೂಪೇಶ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ20 Feb 2020 8:35 PM IST
share
ಪಾಲನಾ ಕೇಂದ್ರಗಳ ಸಮಗ್ರ ವಿವರ ಸಂಗ್ರಹಿಸಿ: ಡಿಸಿ ಸಿಂಧೂ ಬಿ. ರೂಪೇಶ್ ಸೂಚನೆ

ಮಂಗಳೂರು, ಫೆ.20: ದ.ಕ. ಜಿಲ್ಲೆಯಲ್ಲಿರುವ ಅನಾಥಾಲಯ, ನಿರ್ಗತಿಕರ ಮಂದಿರ ಸೇರಿದಂತೆ ಮಕ್ಕಳಿಗೆ ಆಶ್ರಯ ನೀಡುತ್ತಿರುವ ಎಲ್ಲ ಕೇಂದ್ರಗಳ ಸಮಗ್ರ ವಿವರ ಸಂಗ್ರಹಿಸಲು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಸೂಚನೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್‌ಹಾಲ್‌ನಲ್ಲಿ ಗುರುವಾರ ನಡೆದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮಕ್ಕಳ ಪಾಲನಾ ಸಂಸ್ಥೆಗಳ ಜಿಲ್ಲಾ ತನಿಖಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿರುವ ಎಲ್ಲ ಮಕ್ಕಳ ಪಾಲನಾ ಕೇಂದ್ರಗಳನ್ನು ಬಾಲನ್ಯಾಯ ಕಾಯ್ದೆ ಅನ್ವಯ ನೋಂದಾಯಿಸಿಕೊಳ್ಳಬೇಕು. ಆಗಿಂದಾಗ್ಗೆ ಪಾಲನಾ ಕೇಂದ್ರಗಳಿಗೆ ಭೇಟಿ ನೀಡಿ, ಪರೀಶಿಲನೆ ನಡೆಸುವಂತೆ ಆದೇಶಿಸಿದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವೆಂಕಪ್ಪ ಎಂ. ಮಾತನಾಡಿ, ಮಕ್ಕಳ ಪಾಲನಾ ಸಂಸ್ಥೆಯಲ್ಲಿ ನಿಯೋಜಿಸಲ್ಪಡುವ ಸಿಬ್ಬಂದಿಗೆ ಪೊಲೀಸ್ ಪರಿಶೀಲನೆ ಮಾಡದೇ ನೇಮಿಸಬಾರದು. ಈಗಾಗಲೇ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯ ಹಿನ್ನೆಲೆಯನ್ನು ಪೊಲೀಸ್ ಪರಿಶೀಲನೆ ಮುಖಾಂತರ ಖಚಿತಪಡಿಸಿಕೊಳ್ಳಬೇಕು. ಸಿಬ್ಬಂದಿಯ ಪೊಲೀಸ್ ಪರಿಶೀಲನೆಯನ್ನು ಶುಲ್ಕ ರಹಿತವಾಗಿ ನಡೆಸಿಕೊಡುವಂತೆ ಇಲಾಖೆಗೆ ಸೂಚಿಸಿದೆ ಎಂದು ಹೇಳಿದರು.

ಮಕ್ಕಳ ಸ್ನೇಹಿ ನ್ಯಾಯಾಲಯವನ್ನಾಗಿ ಪರಿವರ್ತಿಸಲು ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ಮಕ್ಕಳ ಸ್ನೇಹಿ ವಿಶ್ರಾಂತಿ ಕೊಠಡಿಯನ್ನಾಗಿ ಪರಿವರ್ತಿಸುವ ಕಾಮಗಾರಿ ಬಾಕಿ ಇದೆ. ಭಿಕ್ಷಾಟನೆ ನಿರತ ಮಕ್ಕಳು ಕಂಡು ಬಂದಾಗ ಸಮಾಜ ಕಲ್ಯಾಣ ಇಲಾಖೆಯ ಸಹಾಯ ಪಡೆದು ಮಕ್ಕಳನ್ನು ಪುರ್ನವಸತಿ ಕೇಂದ್ರಗಳಿಗೆ ದಾಖಲಿಸಲಾಗುತ್ತಿದೆ ಎಂದು ಹೇಳಿದರು. ವಿಶೇಷ ಪಾಲನಾ ಯೋಜನೆ: ಎಚ್‌ಐವಿ ಸೋಂಕಿತ, ಬಾಧಿತ ಮಕ್ಕಳು ಹಾಗೂ ಈ ಕಾಯಿಲೆಯಿಂದ ಪಾಲಕರನ್ನು ಕಳೆದುಕೊಂಡ ಮಕ್ಕಳ ಪಾಲನೆ ನಿಮಿತ್ತ ವಿಶೇಷ ಪಾಲನಾ ಯೋಜನೆಯ ಅನುಷ್ಠಾನ ಗೊಳಿಸುವ ಕಾರ್ಯಕ್ರಮದ ಪ್ರಗತಿ ಪರಿಶೀಲನೆಯನ್ನು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ನಡೆಸಿದರು. ಬಳಿಕ ಹೆಚ್ಚುವರಿ ಮಕ್ಕಳಿಗೆ ಸೌಲಭ್ಯ ಕೊಡುವ ಬಗ್ಗೆಯೂ ಸೂಚಿಸಿದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವೆಂಕಪ್ಪ ಎಂ. ಮಾತನಾಡಿ, ವಿಶೇಷ ಪಾಲನಾ ಯೋಜನೆಯ ಅನ್ವಯ ಜಿಲ್ಲೆಯಲ್ಲಿ 2019-20ನೇ ಸಾಲಿನಲ್ಲಿ 537 ಫಲಾನುಭವಿಗಳಿಗೆ ಘೋಷಣಾ ವೆಚ್ಚವಾಗಿ 21.48 ಲಕ್ಷ ರೂ. ಜಮೆ ಮಾಡಲಾಗಿದೆ ಎಂದರು.

ವಕ್ಫ್ ಇಲಾಖೆಯಲ್ಲಿರುವ ಮದ್ರಸಗಳಲ್ಲಿ ಮುಖ್ಯೋಪಾಧ್ಯಾಯರು, ಆಡಳಿತ ಸಮಿತಿಯ ಸದಸ್ಯರು ಮತ್ತು ಮಕ್ಕಳ ರಕ್ಷಕರು ಸೇರಿ ಮಕ್ಕಳ ಸುರಕ್ಷತಾ ಸಮಿತಿ ರಚಿಸಿದ್ದಾರೆ. ಎರಡು ತಿಂಗಳಿಗೊಮ್ಮೆ ಸಭೆ ಸೇರಿ ಕುಂದು-ಕೊರತೆಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಮದ್ರಸಗಳಲ್ಲಿ ಮಕ್ಕಳ ಹಕ್ಕು ಉಲ್ಲಂಘನೆಯಾದ ಬಗ್ಗೆ ದೂರು ಬಂದಿಲ್ಲ ಎಂದು ವೆಂಕಪ್ಪ ಹೇಳಿದರು.

ಸಭೆಯಲ್ಲಿ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಶಿಲ್ಪಾ ಎ.ಜೆ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಮಕೃಷ್ಣ ರಾವ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಉಸ್ಮಾನ್, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ರೆನ್ನಿ ಡಿಸೋಜ, ಶಾಂತಿ ಸಂದೇಶ ಟ್ರಸ್ಟ್ ನಿರ್ದೇಶಕಿ ಸಿಸ್ಟರ್ ದುಲ್‌ಸಿನ್ ಕ್ರಾಸ್ಟಾ, ವಕ್ಫ್ ಅಧಿಕಾರಿ ಎಂ.ಅಬೂಬಕರ್, ಬಾಲನ್ಯಾಯ ಮಂಡಳಿಯ ಸದಸ್ಯೆ ಗೌರಿ ಕೆ.ಎಸ್., ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಆಪ್ತ ಸಮಾಲೋಚಕ ಆನಂದ್ ಎನ್. ಉಪಸ್ಥಿತರಿದ್ದರು.

ಬಾಕ್ಸ್:
ಎಲ್ಲ ಶಾಲೆಯಲ್ಲಿ ‘1098’ ಫಲಕ
ದ.ಕ. ಜಿಲ್ಲೆಯಲ್ಲಿರುವ ಎಲ್ಲ ಶಾಲೆಗಳಲ್ಲಿ ‘1098’ ಸಂಖ್ಯೆಯ ಫಲಕವನ್ನು ಅಳವಡಿಸಲಾಗಿದೆ. ಜಿಲ್ಲೆಯ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ನೋಡಲ್ ಶಿಕ್ಷಕರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವೆಂಕಪ್ಪ ಎಂ. ತಿಳಿಸಿದ್ದಾರೆ.
ಮಕ್ಕಳ ಸುರಕ್ಷತೆ, ಆಪ್ತ ಸಮಾಲೋಚನೆ ಮತ್ತು ಆತ್ಮ ರಕ್ಷಣೆಯ ಬಗ್ಗೆ ತರಬೇತಿ ನೀಡಲಾಗುತ್ತಿದೆ. ಶಾಲೆಗಳಲ್ಲಿ ಅಗತ್ಯ ಸಂದರ್ಭ ಈ ಬಗ್ಗೆ ವಿದ್ಯಾರ್ಥಿಗಳಿಗೆ ಪೋಷಕರಿಗೆ ಮಾಹಿತಿಯನ್ನು ನೀಡುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಎಲ್ಲ ಶಾಲೆಗಳಲ್ಲಿ ಮುಖ್ಯ ಶಿಕ್ಷಕರಿಗೆ ರಕ್ಷಣಾ ಸಮಿತಿ ರೂಪಿಸುವ ಬಗ್ಗೆ ಮಾಹಿತಿ ನೀಡಿ ಸಿಆರ್‌ಪಿಗಳ ಮೂಲಕ ತರಬೇತಿ ನೀಡಲಾಗಿದೆ ಎಂದು ಹೇಳಿದರು.
***

share
ವಾರ್ತಾಭಾರತಿ
ವಾರ್ತಾಭಾರತಿ
Next Story
X