Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳ: ನ್ಯೂ ಶಮ್ಸ್ ಶಾಲೆಯಲ್ಲಿ...

ಭಟ್ಕಳ: ನ್ಯೂ ಶಮ್ಸ್ ಶಾಲೆಯಲ್ಲಿ ಅಂತರಾಷ್ಟ್ರೀಯ ಮಾತೃಭಾಷಾ ದಿನ

ಕನ್ನಡ ಬಾಷಾ ಕಲಿಕೆ ಒತ್ತು ನೀಡಲು ಸಲಹೆ

ವಾರ್ತಾಭಾರತಿವಾರ್ತಾಭಾರತಿ20 Feb 2020 11:13 PM IST
share
ಭಟ್ಕಳ: ನ್ಯೂ ಶಮ್ಸ್ ಶಾಲೆಯಲ್ಲಿ ಅಂತರಾಷ್ಟ್ರೀಯ ಮಾತೃಭಾಷಾ ದಿನ

ಭಟ್ಕಳ: ಇಲ್ಲಿನ ಪ್ರತಿಷ್ಠಿತ ತರಬಿಯತ್ ಎಜ್ಯುಕೇಶನ್ ಸೊಸೈಟಿಯ ನ್ಯೂ ಶಮ್ಸ್ ಶಾಲೆಯ ಡಾ. ಎಂ.ಟಿ.ಹಸನ್ ಬಾಪಾ ಸಭಾಂಗಣದಲ್ಲಿ ಗುರುವಾರ ಅಂತರಾಷ್ಟ್ರೀಯ ಮಾತೃಭಾಷಾ ದಿನಾಚರಣೆ ಆಯೋಜಿಸಲಾಗಿತ್ತು.

ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು, ಮಾತನಾಡಿದ ಪ್ರಾರ್ಥನಾ ಪ್ರತಿಷ್ಠಾನದ ಅಧ್ಯಕ್ಷ ಗಂಗಾಧರ್ ನಾಯ್ಕ, ಮಾತೃಭಾಷೆ  ಹುಟ್ಟಿನಿಂದ ಕೊನೆಯವರೆಗೂ ವ್ಯಕ್ತಿಯ ಒಡನಾಡಿಯಾಗಿ ಅವನ ಸರ್ವಾಂಗೀಣ ಪ್ರಗತಿಗೆ ಕಾರಣ. ಭಾರತ ಒಂದು ಬಹುಸಂಸ್ಕೃತಿಯ ದೇಶ. ಇಲ್ಲಿ ಅನೇಕ ಭಾಷೆಗಳನ್ನಾಡುವ ಜನರಿದ್ದಾರೆ. ಒಂದೊಂದು ಭಾಷೆಯೂ ಒಂದೊಂದು ಸಂಸ್ಕೃತಿಯನ್ನು ಪ್ರತಿನಿಧಿಸುತ್ತದೆ. ಹೆಚ್ಚು ಭಾಷೆಯನ್ನು ಕಲಿತಷ್ಟೂ ನಾವು ಆ ಭಾಷೆಯ ಮೂಲಕ ಜನರೊಂದಿಗೆ ಬೆಸೆದುಕೊಳ್ಳಬಹುದು. ಭಾಷೆಗೆ ಎಲ್ಲರನ್ನು ಒಗ್ಗೂಡಿಸುವ ಶಕ್ತಿಯಿದೆ. ಉರ್ದು  ಮಾತೃಭಾಷೆಯಾಗಿ ಹೊಂದಿರುವ ಮಕ್ಕಳು ಕನ್ನಡವನ್ನು ಹೆಚ್ಚು ಹೆಚ್ಚು  ಬಳಸುವ ಮೂಲಕ ಆ ಭಾಷೆಯನ್ನು ಕಲಿಯಬೇಕು ಎಂದು ಕರೆ ನೀಡಿದ ಅವರು, ಈ ನೆಲೆಯಲ್ಲಿ ಅಂತರಾಷ್ಟ್ರೀಯ ಮಾತೃಭಾಷೆ ದಿನಾಚರಣೆಯು ನಮ್ಮ ಮಾತೃಭಾಷೆಯ ಬಗೆಗೆ ಅಭಿಮಾನದ ಜೊತೆಗೆ ಉಳಿದೆಲ್ಲ ಭಾಷೆಯನ್ನೂ ಗೌರವಿಸುವ ಭಾವನೆಯನ್ನು ಮೂಡಿಸುವಂತಾಗಲಿ ಎಂದರು.

ನಂತರ ಮಾತನಾಡಿದ ಅಂಜುಮನ್ ಪದವಿ ಪೂರ್ವ ಕಾಲೇಜಿನ ಉರ್ದು ವಿಭಾಗದ ಮುಖ್ಯಸ್ಥ ಪ್ರೊ.ರವೂಫ್ ಆಹ್ಮದ್ ಸವಣೂರು, ಬದುಕಲು ಭಾಷೆಗಳ ಅಗತ್ಯವಿಲ್ಲ. ಆದರೆ ಒಬ್ಬರು ಇನ್ನೊಬ್ಬರನ್ನು ಅರ್ಥೈಸಿಕೊಳ್ಳಲು, ಭಾವನೆಗಳು ಹಂಚಿಕೊಳ್ಳಲು ಭಾಷೆಗಳನ್ನು ಮಾಧ್ಯಮವನ್ನಾಗಿ ಬಳಸಿಕೊಳ್ಳಲಾಗುತ್ತದೆ. ಭಾಷೆಗಳ ಮೂಲಕ ಸಮಾಜದಲ್ಲಿ ಸೌಹಾರ್ದತೆ ನಿರ್ಮಾಣವಾಗುತ್ತದೆ. ರಾಜ್ಯ ಭಾಷೆ ಕನ್ನಡ ಅತ್ಯಂತ ಶ್ರೀಮಂತ ಭಾಷೆಯಾಗಿದ್ದು ಕುವೆಂಪು, ತೇಜಸ್ವಿ, ಬೇಂದ್ರೆ ಸೇರಿದಂತೆ ಅನೇಕಾರು ಕನ್ನಡದ ದಿಗ್ಗಜರು ತಮ್ಮ ಚಿಂತನೆಗಳ ಮೂಲಕ ಈ ನಾಡಿನ ಭಾಷೆಯನ್ನು ಶ್ರೀಮಂತಗೊಳಿಸಿದ್ದು ನಾವು ನಮ್ಮ ಮಾತೃಭಾಷೆಯೊಂದಿಗೆ ಕನ್ನಡವನ್ನು ಕಲಿತು ಆ ಭಾಷೆಯ ಸಾಹಿತ್ಯದ ರಸವನ್ನು ಸವಿಯಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಮುಹಮ್ಮದ್ ಇಸ್ಮಾಯಿಲ್ ಮೊಹತೆಶಮ್, ಶಾಲೆಯಲ್ಲಿ ನಡೆಯುವ ಇಂತಹ ಅನೂನ್ಯ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳು ಭಾಷಾ ಕಲಿಕೆಗೆ ಒತ್ತು ನೀಡಿ ಪ್ರಾದೇಶಿಕ ಭಾಷೆಯಾದ ಕನ್ನಡವನ್ನು ಕಲಿಯುವುದರ ಕಡೆಗೆ ಹೆಚ್ಚಿನ ಗಮನವನ್ನು ಕೇಂದ್ರೀಕರಿಸಬೇಕೆಂದು ಅವರು ಕರೆ ನೀಡಿದರು.

ಶಾಲೆಯ ಪ್ರಾಂಶುಪಾಲೆ ಫಹಮಿದಾ ಮುಲ್ಲಾ ಪ್ರಸ್ತಾವಿಕವಾಗಿ ಮಾತನಾಡಿದರು. ಹಿರಿಯ ಶಿಕ್ಷಕ ಮುಹಮ್ಮದ್ ರಝಾ ಮಾನ್ವಿ ಸ್ವಾಗತಿ ಅತಿಥಿಗಳನ್ನು ಪರಿಚಯಿಸಿದರು. ಶಿಕ್ಷಕಿ ಮಾಹೆ ಜಬೀನ್ ಕಾರ್ಯಕ್ರಮ ನಿರೂಪಿಸಿದರೆ ಅಬ್ದುಲ್ಲಾ ರಬಿ ಧನ್ಯವಾದ ಅರ್ಪಿಸಿದರು.  

ಆಡಳಿತ ಮಂಡಳಿ ಸದಸ್ಯ ಸೈಯ್ಯದ್ ಗುಫ್ರಾನ್ ಲಂಕಾ, ಕಾರ್ಯದರ್ಶಿ ಅನಮ್ ಆಲಾ ಎಂ.ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X