‘ಪಾಕಿಸ್ತಾನ ಝಿಂದಾಬಾದ್’ ಘೋಷಣೆ: ಫೆ.25ರ ಸಿಎಎ ಕುರಿತ ಅಮೂಲ್ಯ ಆಹ್ವಾನ ರದ್ದು
ಮಂಗಳೂರು, ಫೆ.20: ಬೆಂಗಳೂರಿನಲ್ಲಿ ಸಿಎಎ ವಿರುದ್ಧದ ಸಮಾವೇಶದಲ್ಲಿ ‘ಪಾಕಿಸ್ತಾನ ಝಿಂದಾಬಾದ್’ ಘೋಷಣೆ ಕೂಗಿರುವುದು ಸರಿಯಲ್ಲ ಎಂದು ಮುಸ್ಲಿಂ ಐಕ್ಯತಾ ವೇದಿಕೆಯ ಅಧ್ಯಕ್ಷ, ಮಾಜಿ ಮೇಯರ್ ಕೆ.ಅಶ್ರಫ್ ಖಂಡನೆ ವ್ಯಕ್ತಪಡಿಸಿದ್ದಾರೆ.
ಪ್ರತಿಯೊಬ್ಬರೂ ತಾವಿರುವ ನೆಲವನ್ನು ಪ್ರೀತಿಸಬೇಕು. ದೇಶಕ್ಕೆ ಗೌರವ ಕೊಡುವುದು ಎಲ್ಲರ ಆದ್ಯ ಕರ್ತವ್ಯವಾಗಿದೆ. ಫೆ.25ಕ್ಕೆ ಅಮೂಲ್ಯ ಅವರನ್ನು ಮುಸ್ಲಿಂ ಐಕ್ಯತಾ ವೇದಿಕೆ ಪ್ರತಿಭಟನೆಗೆ ಆಹ್ವಾನಿಸಿದನ್ನು ರದ್ದು ಪಡಿಸಲಾಗಿದೆ ಎಂದು ಕೆ.ಅಶ್ರಫ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





