Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ...

ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ21 Feb 2020 4:16 PM IST
share
ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ಸನ್ಮಾನ

ಮಂಗಳೂರು, ಫೆ. 21: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರನ್ನು ರಾಜ್ಯ ಪಶುಸಂಗೋಪನೆ, ಮೀನುಗಾರಿಕೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಎ.ಬಿ.‌ ಇಬ್ರಾಹೀಂ ಅವರು ನಗರದ ಪಾಂಡೇಶ್ವರದಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಿದರು.

ಬಳಿಕ ಮಾತನಾಡಿದ ಅವರು ಎಲೆಮರೆ ಕಾಯಿಯಂತಿದ್ದ ಹಾಜಬ್ಬ ಅವರ ನಿಸ್ವಾರ್ಥ ಸೇವೆಯನ್ನು ಕೇಂದ್ರ ಸರಕಾರ ಗುರುತಿಸಿರುವುದು ಶ್ಲಾಘನೀಯ. ಹಾಜಬ್ಬರಿಗೆ ಈ ಪ್ರಶಸ್ತಿ ಲಭಿಸಿರುವುದು ಜಿಲ್ಲೆಗೆ ಸಂದ ಗೌರವ ಮತ್ತು ಹೆಮ್ಮೆಯ ವಿಚಾರವಾಗಿದೆ ಎಂದರು.

ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಶಿಕ್ಷಣಕ್ಕಾಗಿ ತನ್ನ ಬದುಕನ್ನೇ ಮುಡಿಪಾಗಿಟ್ಟಿರುವ ಹಾಜಬ್ಬರು ಪದವಿಪೂರ್ವ ಕಾಲೇಜು ಮತ್ತು ಒಂದನೆ ತರಗತಿಯಿಂದಲೇ ಆಂಗ್ಲಮಾಧ್ಯಮ ಆರಂಭಿಸಲು ಬಹುಕಾಲದಿಂದ ಬೇಡಿಕೆ ಸಲ್ಲಿಸುತ್ತಿದ್ದರು. ಆ ಪೈಕಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಆಂಗ್ಲಮಾಧ್ಯಮ ಆರಂಭಿಸುವ ಬಗ್ಗೆ ಶಿಕ್ಷಣ ಸಚಿವರು ಮತ್ತು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಯ ಜೊತೆ ಚರ್ಚಿಸಿದ್ದೇವೆ. ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಇನ್ನು ಪದವಿಪೂರ್ವ ಕಾಲೇಜು ಆರಂಭಿಸುವ ಬಗ್ಗೆ ಮುಂದಿನ ದಿನಗಳಲ್ಲಿ ಸರಕಾರ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಎಬಿ ಇಬ್ರಾಹೀಂ ನುಡಿದರು.

ಸನ್ಮಾನ  ಸ್ವೀಕರಿಸಿ ಮಾತನಾಡಿದ ಹರೇಕಳ ಹಾಜಬ್ಬ ‌2015ರಲ್ಲಿ ಎಬಿ ಇಬ್ರಾಹೀಂ  ಜಿಲ್ಲಾಧಿಕಾರಿಯಾಗಿದ್ದಾಗ ನನ್ನ ಹೆಸರನ್ನು ಈ ಪ್ರಶಸ್ತಿಗೆ ಶಿಫಾರಸು ಮಾಡಿದ್ದರು. ಆದರೆ ನಾನು ಪ್ರಶಸ್ತಿಯನ್ನು‌ ನಿರೀಕ್ಷೆ ಮಾಡಿದವನಲ್ಲ.‌ ನಿಮ್ಮೆಲ್ಲರ ಸಹಕಾರದಿಂದ ನಾನು ಈ ಮಟ್ಟಕ್ಕೆ ಬೆಳೆಯಲು ಸಾಧ್ಯವಾಯಿತು ಎಂದರು.

ಈ ಸಂದರ್ಭ ಜಿಲ್ಲಾಧಿಕಾರಿ ಸಿಂಧೂ ರೂಪೇಶ್, ವಾರ್ತಾಧಿಕಾರಿ ಖಾದರ್ ಶಾ, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಉಸ್ಮಾನ್, ವಕ್ಫ್ ಅಧಿಕಾರಿ ಅಬೂಬಕರ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X