ಸಿದ್ದರಾಮಯ್ಯರನ್ನು ಭೇಟಿಯಾದ ಬಿಎಸ್ವೈ ಪುತ್ರ ವಿಜಯೇಂದ್ರ
ಬೆಂಗಳೂರು, ಫೆ.21: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರನ್ನು ಶುಕ್ರವಾರ ಅವರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.
ಫೆ.27ರಂದು ನಗರದ ಅರಮನೆ ಮೈದಾನದ ವೈಟ್ಪೆಟಲ್ಸ್ನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ 78ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಆಯೋಜಿಸಲಾಗಿರುವ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಸಿದ್ದರಾಮಯ್ಯಗೆ ಇದೇ ವೇಳೆ ವಿಜಯೇಂದ್ರ ಆಹ್ವಾನ ನೀಡಿದರು.
Next Story