Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗಾಂಜಾ ಸಾಗಾಟ ಆರೋಪ: ಸುಂಟಿಕೊಪ್ಪದ...

ಗಾಂಜಾ ಸಾಗಾಟ ಆರೋಪ: ಸುಂಟಿಕೊಪ್ಪದ ನಾಲ್ವರ ಬಂಧನ

1.50 ಲಕ್ಷ ರೂ. ಮೌಲ್ಯದ ಮಾಲು ಜಪ್ತಿ

ವಾರ್ತಾಭಾರತಿವಾರ್ತಾಭಾರತಿ21 Feb 2020 6:13 PM IST
share
ಗಾಂಜಾ ಸಾಗಾಟ ಆರೋಪ: ಸುಂಟಿಕೊಪ್ಪದ ನಾಲ್ವರ ಬಂಧನ

ಮಡಿಕೇರಿ ಫೆ.21: ಮೈಸೂರಿನ ಮಂಡಿ ಮೊಹಲ್ಲಾದಿಂದ ಗಾಂಜಾವನ್ನು ತಂದು ಕೊಡಗು ಜಿಲ್ಲೆಯ ವಿವಿಧ ಭಾಗಗಳಿಗೆ ಸರಬರಾಜು ಮಾಡುತ್ತಿದ್ದ ನಾಲ್ವರನ್ನು ಬಂಧಿಸುವಲ್ಲಿ ಕುಶಾಲನಗರ ಪೊಲೀಸರು ಯಶಸ್ವಿಯಾಗಿದ್ದಾರೆ. 

ಸುಂಟಿಕೊಪ್ಪದ ಕೆ.ಇ.ಬಿ ಬಳಿಯ ನಿವಾಸಿ, ಪೈಂಟಿಂಗ್ ಕೆಲಸ ಮಾಡುವ ಅಮ್ಜದ್ ಶರೀಫ್(31), ಚೆಟ್ಟಳ್ಳಿ ರಸ್ತೆ ನಿವಾಸಿ, ಕೂಲಿ ಕೆಲಸ ಮಾಡುವ ಸಮೀರ್(30), ಅಪ್ಪಾರಂಡ ಬಡಾವಣೆ ನಿವಾಸಿ, ಪೈಟಿಂಗ್ ಕೆಲಸ ಮಾಡುತ್ತಿದ್ದ ಅಫ್ರಿದ್(27), ಕೆ.ಇ.ಬಿ ಬಳಿಯ ನಿವಾಸಿ ಪೈಂಟಿಂಗ್ ಕೆಲಸ ಮಾಡುವ ರವಿ(27) ಬಂಧನಕ್ಕೆ ಒಳಗಾದ ಆರೋಪಿಗಳಾಗಿದ್ದಾರೆ. ಬಂಧಿತರಿಂದ 1.50 ಲಕ್ಷ ರೂ.ಮೌಲ್ಯದ 6 ಕೆ.ಜಿ. ಒಣಗಿದ ಗಾಂಜಾ, ಕೃತ್ಯಕ್ಕೆ ಬಳಸಿದ ಮಾರುತಿ 800 ಕಾರನ್ನು ವಶಕ್ಕೆ ಪಡೆಯಲಾಗಿದೆ. 

ಕೊಡಗು ಜಿಲ್ಲೆಗೆ ನೆರೆಯ ಮೈಸೂರು ಜಿಲ್ಲೆಯಿಂದ ಮಾದಕ ವಸ್ತು ಗಾಂಜಾ ಸರಬರಾಜಾಗುತ್ತಿರುವ ಬಗ್ಗೆ ಮತ್ತು ಯುವಕರು ಗಾಂಜಾ ವ್ಯಸನಿಗಳಾಗುತ್ತಿರುವ ಬಗ್ಗೆ ಪೊಲೀಸ್ ಇಲಾಖೆಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಸಲ್ಲಿಕೆಯಾಗಿದ್ದವು. ಇದನ್ನು ಗಂಭೀರವಾಗಿ ಪರಿಣಮಿಸಿದ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ. ಸುಮನ್ ಅವರು ಜಿಲ್ಲಾ ಪೊಲೀಸ್ ಅಧಿಕಾರಿಗಳಿಗೆ ಕಾರ್ಯಾಗಾರಗಳನ್ನು ನಡೆಸಿ ಜಿಲ್ಲೆಯಲ್ಲಿ ಮಾದಕ ವಸ್ತು ಗಾಂಜಾವನ್ನು ಹತ್ತಿಕ್ಕುವ ಬಗ್ಗೆ ಸ್ಪಷ್ಟ ನಿರ್ದೇಶನ ನೀಡಿದ್ದರು. ಅದರಂತೆ ಪೊಲೀಸರು ಜಿಲ್ಲೆಯಲ್ಲಿ ಗಾಂಜಾ ಸರಬರಾಜು ಮತ್ತು ಮಾರಾಟದ ಬಗ್ಗೆ ನಿಗಾ ವಹಿಸಿದ್ದರು. ಮಾತ್ರವಲ್ಲದೇ, ಕುಶಾಲನಗರ ಪೊಲೀಸರು ಜಿಲ್ಲೆಗೆ ಮೈಸೂರಿನಿಂದ ಗಾಂಜಾವನ್ನು ತರಲಾಗುತ್ತಿರುವ ಬಗ್ಗೆ ಖಚಿತ ಮಾಹಿತಿ ಕಲೆ ಹಾಕಿದ್ದರು. 

ಅದರಂತೆ ಫೆ.20ರಂದು ರಾತ್ರಿ ವೇಳೆಯಲ್ಲಿ 4 ಮಂದಿ ಆರೋಪಿಗಳು ಕೆಂಪು ಬಣ್ಣದ ಮಾರುತಿ 800 ಕಾರಿನಲ್ಲಿ ಮೈಸೂರಿನಿಂದ ಸುಂಟಿಕೊಪ್ಪದ ಕಡೆಗೆ ಬರುತ್ತಿದ್ದಾಗ ಕುಶಾಲನಗರ ಮಡಿಕೇರಿ ರಾಷ್ಟ್ರೀಯ ಹೆದ್ದಾರಿ 275ರ ಬಸವನಹಳ್ಳಿ ಬಳಿ ಪೊಲೀಸರು ಮತ್ತು ಎಸಿಎಫ್ ನೆಹರು ಅವರನ್ನೊಳಗೊಂಡ ತಂಡ ಕಾರನ್ನು ತಪಾಸಣೆಗೆ ಒಳಪಡಿಸಿದರು. ಈ ಸಂದರ್ಭ ಕಾರಿನ ಡಿಕ್ಕಿಯಲ್ಲಿ ಒಂದು ಕಿಟ್ ಬ್ಯಾಗ್‍ನಲ್ಲಿ ಖಾಕಿ ಬಣ್ಣದ ಟೇಪ್ ಸುತ್ತಿದ್ದ 3 ಬಂಡಲ್‍ಗಳು ಇರುವುದು ಕಂಡು ಬಂದಿತ್ತು. ಅವುಗಳನ್ನು ತೆರೆದು ನೋಡಿದಾಗ 6 ಕೆ.ಜಿ. 70 ಗ್ರಾಂ ಒಣ ಗಾಂಜಾ ಪತ್ತೆಯಾಗಿದೆ. 

ಸ್ಥಳದಲ್ಲೇ ಆರೋಪಿಗಳನ್ನು ವಶಕ್ಕೆ ಪಡೆದು ಕೂಲಂಕುಶವಾಗಿ ವಿಚಾರಣೆ ನಡೆಸಿದ ಸಂದರ್ಭ, ಹಣ ಸಂಪಾದನೆ ಮಾಡುವ ಉದ್ದೇಶದಿಂದ ಮೈಸೂರಿನ ಮಂಡಿ ಮಾರ್ಕೆಟ್‍ನಿಂದ ಗಾಂಜಾ ಖರೀದಿಸಿ ಕಳೆದ 3 ವರ್ಷಗಳಿಂದ ಜಿಲ್ಲೆಯಲ್ಲಿ ಗಾಂಜಾ ಸರಬರಾಜು ಮಾಡುತ್ತಿರುವುದಾಗಿ ಬಾಯ್ಬಿಟ್ಟಿದ್ದಾರೆ. ಹೀಗೆ ತರುವ ಗಾಂಜಾವನ್ನು ಸಣ್ಣ ಪೊಟ್ಟಣವನ್ನಾಗಿಸಿ 300 ರಿಂದ 400 ರೂ.ಗಳಿಗೆ ಮಾರಾಟ ಮಾಡುತ್ತಿದ್ದುದಾಗಿಯೂ ಆರೋಪಿಗಳು ಹೇಳಿದ್ದಾರೆ. ಇದರಿಂದ ಬಂದ ಹಣದಿಂದ ಕೆಂಪು ಬಣ್ಣದ ಮಾರುತಿ 800 ಕಾರನ್ನು ಖರೀದಿ ಮಾಡಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಸೋಮವಾರಪೇಟೆ ಉಪ ವಿಭಾಗದ ಪೊಲೀಸ್ ಉಪ ಅಧೀಕ್ಷಕ ಹೆಚ್.ಎಂ. ಶೈಲೇಂದ್ರ ಮಾರ್ಗದರ್ಶನದಲ್ಲಿ ಕುಶಾಲನಗರ ವೃತ್ತ ನಿರೀಕ್ಷಕ ಎಂ. ಮಹೇಶ್, ಕುಶಾಲನಗರ ಗ್ರಾಮಾಂತರ ಠಾಣಾಧಿಕಾರಿ ನಂದೀಶ್, ಕುಶಾಲನಗರ ಪಟ್ಟಣ ಪೊಲೀಸ್ ಠಾಣೆಯ ಪಿಎಸ್‍ಐ ವೆಂಕಟರಮಣ, ಎಎಸ್‍ಐ ಗೋಪಾಲ್, ಸಿಬ್ಬಂದಿಗಳಾದ ಪ್ರಕಾಶ್, ದಯಾನಂದ, ಸಂದೇಶ್, ಸಂಪತ್, ಲೋಕೇಶ್, ಅಜಿತ್, ರವೀಂದ್ರ, ನಾಗರಾಜ್, ವಿವೇಕ್, ಸಿಡಿಆರ್ ಶೆಲ್‍ನ ರಾಜೇಶ್, ಗಿರೀಶ್, ಚಾಲಕರಾದ ಗಣೇಶ್, ಪ್ರವೀಣ್, ರಾಜು ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X