Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಒಡ್ಡೂರು ಧರ್ಮಚಾವಡಿಯಲ್ಲಿ ಫೆ.24ರಿಂದ...

ಒಡ್ಡೂರು ಧರ್ಮಚಾವಡಿಯಲ್ಲಿ ಫೆ.24ರಿಂದ ಶತಚಂಡಿಕಾಯಾಗ, ಧರ್ಮ ನೇಮೋತ್ಸವ

ವಾರ್ತಾಭಾರತಿವಾರ್ತಾಭಾರತಿ21 Feb 2020 8:29 PM IST
share
ಒಡ್ಡೂರು ಧರ್ಮಚಾವಡಿಯಲ್ಲಿ ಫೆ.24ರಿಂದ ಶತಚಂಡಿಕಾಯಾಗ, ಧರ್ಮ ನೇಮೋತ್ಸವ

ಬಂಟ್ವಾಳ, ಫೆ.21: ಒಡ್ಡೂರು ಧರ್ಮಚಾವಡಿಯಲ್ಲಿ ಶ್ರೀ ಕೊಡಮಣಿತ್ತಾಯ ಧರ್ಮದೈವದ ಪ್ರತಿಷ್ಠೆ, ಶತಚಂಡಿಕಾಯಾಗ ಹಾಗೂ ಧರ್ಮ ನೇಮೋತ್ಸವವು ಫೆ.24ರಿಂದ 29 ರವರೆಗೆ ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆಯಲಿದೆ ಎಂದು ಬಂಟ್ಬಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು  ಹೇಳಿದ್ದಾರೆ.

ಒಡ್ಡೂರು ತಮ್ಮ ನಿವಾಸದಲ್ಲಿ ಶುಕ್ರವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಕುಟುಂಬಿಕರು ಆರಾಧಿಸಿಕೊಂಡು ಬಂಧಿರುವ ಕೊಡಮಣಿತ್ತಾಯ ದೈವಕ್ಕೆ ಈ ಬಾರಿ ಒಡ್ಡೂರು ಧರ್ಮಚಾವಡಿಯನ್ನು  ನಿರ್ಮಿಸಲಾಗಿದ್ದು ಫೆ.24 ರಿಂದ ಪ್ರತಿನಿತ್ಯ ಧಾರ್ಮಿಕ ವಿಧಿವಿಧಾನಗಳು ನಡೆಯಲಿದೆ ಎಂದರು.

ಫೆ.28ರಂದು ಪೂರ್ವಾಹ್ನ ಧರ್ಮ ದೈವದ ಪ್ರತಿಷ್ಠೆ ಸಹಿತ ವಿವಿಧ ಧಾರ್ಮಿಕ‌ ಕಾರ್ಯಗಳ ಜೊತೆಯಲ್ಲಿ ಸೂರ್ಯೋದಯದಿಂದಲೇ ವಿವಿಧ ಭಜನಾ ತಂಡಗಳ ಭಜನಾ ಕಾರ್ಯ ಆರಂಭವಾಗಲಿದ್ದು ಮಾರನೇ ದಿನದ ಸೂರ್ಯೋದಯದ‌ ತನಕ‌ ನಿರಂತರವಾಗಿ 23 ಭಜನಾ ತಂಡಗಳು ಭಾಗಿಯಾಗಲಿವೆ ಎಂದರು.

ಫೆ.29ರಂದು ಪೂರ್ವಾಹ್ನ ಶತ ಚಂಡಿಕಾಯಾಗ ಆರಂಭವಾಗಿ 11 ಗಂಟೆಗೆ ಪೂರ್ಣಾಹುತಿಯಾಗಲಿದೆ. ಬಳಿಕ 11:30ಕ್ಕೆ ಕೊಡಮಣಿತ್ತಾಯ ದೈವದ ಭಂಡಾರ ಏರಿ, ಪಲ್ಲ ಪೂಜೆಯ ಬಳಿಕ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಮಧ್ಯಾಹ್ಮ 2ರಿಂದ ರಾತ್ರಿ 9 ಗಂಟೆಯ ತನಕ ಯಕ್ಷಗಾನ ವೈಭವ, ಪ್ರಶಂಸ ತಂಡದ ಹಾಸ್ಯ, ಜಾನಪದ ಕಾರ್ಯಕ್ರಮಗಳ ಸಹಿತ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ರಾತ್ರಿ 9 ಗಂಟೆಯಿಂದ ಶ್ರೀ ಕೊಡಮಣಿತ್ತಾಯ ದೈವಕ್ಕೆ ಧರ್ಮ ನೇಮೋತ್ಸವ ನಡೆಯಲಿದೆ ಎಂದು ರಾಜೇಶ್ ನಾಯ್ಕ್‌ ವಿವರಿಸಿದರು.

ಕಾರ್ಯಕ್ರಮಕ್ಕೆ ಸಿಎಂ ಸಹಿತ ಮಂತ್ರಿ, ಶಾಸಕರ‌ ದಂಡು

ಶತಚಂಡಿಕಾಯಾಗ ಹಾಗೂ ಧರ್ಮ ನೇಮೋತ್ಸವ ಕ್ಕೆ ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ  ಆಗಮಿಸಲಿದ್ದಾರೆ. ಶತಚಂಡಿಕಾಯಾಗ ಪೂರ್ಣಾಹುತಿಯ ಸಂದರ್ಭ ಅವರು ಧರ್ಮ ಚಾವಡಿಗೆ ಭೇಟಿ‌ ನೀಡಲಿದ್ದಾರೆ. ಸಿಎಂ ಜೊತೆ ಉಪ ಮುಖ್ಯಮಂತ್ರಿಗಳು, ಹತ್ತಕ್ಕೂ ಅಧಿಕ ಮಂತ್ರಿಗಳು, ಉಭಯ ಸದನಗಳ ಸಭಾಧ್ಯಕ್ಷರು, 40ಕ್ಕೂ ಅಧಿಕ ಶಾಸಕರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

50 ಸಾವಿರಕ್ಕೂ ಅಧಿಕ ಜನಸ್ತೋಮದ‌ ನಿರೀಕ್ಷೆ

ಧರ್ಮ ನೇಮೋತ್ಸವದ ದಿನದ ಕಾರ್ಯಕ್ರಮಕ್ಕೆ ತಾಲೂಕು ಸಹಿತ ಜಿಲ್ಲೆಯ ವಿವಿಧೆಡೆಯಿಂದ 50 ಸಾವಿರಕ್ಕೂ ಅಧಿಕ ಜನರು ಭಾಗವಹಿಸುವ ನಿರೀಕ್ಷೆ ಇದ್ದು ಸೂಕ್ತ ಸಿದ್ಧತೆಗಳನ್ನು ನಡೆಸಲಾಗಿದೆ.  ಒಡ್ಡೂರು ಗ್ರಾಮದ ಆಸುಪಾಸಿನ ಊರುಗಳಿಂದ ಹಾಗೂ ಬಂಟ್ವಾಳ ತಾಲೂಕಿನಿಂದ ಸುಮಾರು 3 ಸಾವಿರಕ್ಕೂ ಅಧಿಕ ಸ್ವಯಂ ಸೇವಕರನ್ನು‌ ನಿಯೋಜಿಸಲಾಗಿದ್ದು ಅನ್ನ ವಿತರಣೆ ಕಾರ್ಯಗಳು ಫೆ.24ರಿಂದಲೇ ಆರಂಭವಾಗಲಿದೆ ಎಂದರು.

ಶತಚಂಡಿಕಾಯಾಗ ಹಾಗೂ ಧರ್ಮನೇಮೋತ್ಸವದ ದಿನ ಒಡ್ಡೂರು ಧರ್ಮ ಚಾವಡಿಗೆ ಆಗಮಿಸುವ ಭಕ್ತಾಧಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಬಿ.ಸಿ.ರೋಡು ರಕ್ತೇಶ್ವರಿ ದೇವಸ್ಥಾನ ಹಾಗೂ  ಪೊಳಲಿ‌ ಸಮೀಪದ ಕೈಕಂಬದಿಂದ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಸಾರ್ವಜನಿಕರು‌ ಇದರ ಸದುಪಯೋಗ ಪಡೆದುಕೊಳ್ಳುವಂತೆ ಅವರು ಮನವಿ ಮಾಡಿದರು.

ಭಂಡಾರ ಮನೆಯ ನಿರ್ಮಾಣದ ಮೇಲುಸ್ತುವಾರಿ ಮುರಳೀಧರ  ಶೆಟ್ಟಿ, ಪ್ರಮುಖರಾದ ದೇವದಾಸ್ ಶೆಟ್ಟಿ, ಪ್ರಭಾಕರ ಪ್ರಭು, ಪುಷ್ಪರಾಜ ಚೌಟ, ಪುರುಷೋತ್ತಮ ಶೆಟ್ಟಿ, ಸದಾನಂದ ನಾವೂರ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X