Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಫೆ.24ರಿಂದ ಸುಮನಸಾ ಕೊಡವೂರು ನಾಟಕೋತ್ಸವ...

ಫೆ.24ರಿಂದ ಸುಮನಸಾ ಕೊಡವೂರು ನಾಟಕೋತ್ಸವ ‘ರಂಗಹಬ್ಬ-8’

ವಾರ್ತಾಭಾರತಿವಾರ್ತಾಭಾರತಿ21 Feb 2020 10:20 PM IST
share

ಉಡುಪಿ, ಫೆ.21: ನಾಟಕ, ಸಾಹಿತ್ಯ, ಯಕ್ಷಗಾನ, ಶೈಕ್ಷಣಿಕ ಕ್ಷೇತ್ರಗಳಲ್ಲಿ ನಿರಂತರ ಚಟುವಟಿಕೆಗಳನ್ನು ಮಾಡುತ್ತಿರುವ ಸುಮನಸಾ ಕೊಡವೂರು ಇದೇ ಫೆ.24ರಿಂದ ಮಾ.1ರವರೆಗೆ ‘ರಂಗಹಬ್ಬ-8’ ನಾಟಕೋತ್ಸವವನ್ನು ಉಡುಪಿಯ ಭುಜಂಗ ಪಾರ್ಕ್‌ನ ಬಯಲು ರಂಗಮಂದಿರ ದಲ್ಲಿ ಆಯೋಜಿಸಿದೆ ಎಂದು ಸುಮನಸಾದ ಗೌರವಾಧ್ಯಕ್ಷ ಎಂ.ಎಸ್.ಭಟ್ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ನಗರಸಭೆ ಉಡುಪಿ, ಸಂಸ್ಕೃತಿ ನಿದೇಶನಾಲಯ ಹೊಸದಿಲ್ಲಿ ಹಾಗೂ ಶ್ರೀಪೇಜಾವರ ಅಧೋಕ್ಷಜ ಮಠಗಳ ಸಹಯೋಗದೊಂದಿಗೆ ಈ ಬಾರಿಯ ನಾಟಕೋತ್ಸವ ನಡೆಯಲಿದೆ ಎಂದರು.

ನಾಟಕೋತ್ಸವವನ್ನು ಫೆ.24ರ ಸೋಮವಾರ ಸಂಜೆ 6:30ಕ್ಕೆ ಮೂಡಬಿದರೆ ಆಳ್ವಾಸ್ ಎಜ್ಯುಕೇಷನ್ ಫೌಂಡೇಷನ್‌ನ ಅಧ್ಯಕ್ಷ ಡಾ.ಮೋಹನ ಆಳ್ವ ಉದ್ಘಾಟಿಸಲಿದ್ದಾರೆ. ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಾ.1ರಂದು ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಜಿ.ಜಗದೀಶ್ ವಹಿಸಲಿದ್ದಾರೆ. ಪ್ರತಿದಿನ ರಂಗಸಾಧಕರಿಗೆ ಸನ್ಮಾನ ಹಾಗೂ ಅದೃಷ್ಟವಂತ ಪ್ರೇಕ್ಷಕರಿಗೆ ಉಡುಗೊರೆಯನ್ನು ನೀಡಲಾಗುವುದು ಎಂದರು.

ಪ್ರತಿದಿನ ಸಂಜೆ 6:30ಕ್ಕೆ ನಾಟಕ ಪ್ರದರ್ಶನ ಆರಂಭಗೊಳ್ಳಲಿದೆ. ಮೊದಲ ದಿನ ಲಾವಣ್ಯ ಬೈಂದೂರು ಇವರಿಂದ ‘ಮುದ್ದಣ ಪ್ರಮೋಷನ್ ಪ್ರಸಂಗ’, ಬಳಿಕ ಕ್ರಮವಾಗಿ ಸುಮನಸಾ ಕೊಡವೂರು ಇವರಿಂದ ಬಾಲಕೃಷ್ಣ ಶಿಬಾರ್ಲರ ರಚನೆ ‘ಕಾಪ’, ಮಂದಾರ ಬೈಕಾಡಿ ಇವರಿಂದ ‘ಕೊಳ್ಳಿ’, ಸುಮನಸಾ ಕೊಡವೂರು ಇವರಿಂದ ‘ಗದಾಯುದ್ಧ’, ಧಾರವಾಡ ಟೂರಿಂಗ್ ಟಾಕೀಸ್ ಇವರಿಂದ ‘ಹುಚ್ಚರ ಸಂತೆ’, ಮಂಗಳೂರಿನ ಜರ್ನಿ ಥೇಟರ್ ಗ್ರೂಪ್‌ನಿಂದ ತುಳು ನಾಟಕ ‘ಗೋಂದೋಳು’ ಹಾಗೂ ಕೊನೆಯ ದಿನದಂದು ಸುಮನಸಾ ಕೊಡವೂರು ಇವರಿಂದ ‘ಪುಟಗೋಸಿ ಮನುಷ್ಯ’ ನಾಟಕ ಪ್ರದರ್ಶನಗೊಳ್ಳಲಿದೆ.

ಪ್ರತಿದಿನದ ಕಾರ್ಯಕ್ರಮದಲ್ಲಿ ಜಿಲ್ಲೆಯ ರಂಗಸಾಧಕರಿಗೆ ಸನ್ಮಾನ ನಡೆಯಲಿದೆ. ಮೊದಲ ಆರು ದಿನಗಳಂದು ಕ್ರಮವಾಗಿ ನಟರಾಜ್ ದೀಕ್ಷಿತ್, ಕೃಷ್ಣರಾಜ್ ವಡಬಾಂಡೇಶ್ವರ, ರತ್ನಾಕರ ಕಲ್ಯಾಣಿ, ಕೇಶವರಾವ್ ಬಡಾನಿಡಿಯೂರು, ಕಾಪು ಲೀಲಾಧರ ಶೆಟ್ಟಿ, ಅಶೋಕ ಸುವರ್ಣರನ್ನು ಸನ್ಮಾನಿಸಲಾಗುವುದು.

ಕೊನೆಯ ದಿನದಂದು ಯಕ್ಷಗುರು ಯು.ದುಗ್ಗಪ್ಪರ ಸ್ಮರಣೆಯಲ್ಲಿ ನೀಡುವ ‘ಯಕ್ಷ ಸುಮ’ ಪ್ರಶಸ್ತಿಯನ್ನು ಈ ಬಾರಿ ಯಕ್ಷಗಾನ ಗುರುವ ಕೆ.ನಾರಾಯಣ ಬನ್ನಂಜೆ ಅವರಿಗೆ ನೀಡಿ ಗೌರವಿಸಲಾಗುವುದು. ಅಲ್ಲದೇ ಸಮಾರೋಪ ಸಮಾರಂಭದಲ್ಲಿ ರಂಗನಿರ್ದೇಶಕ, ಸಾಹಿತಿ ಗುರುರಾಜ್ ಮಾರ್ಪಳ್ಳಿ ಇವರ ‘ಲಹರಿಯ ಕಡಲು’ ಕವನ ಸಂಕಲನವನ್ನು ಹಿರಿಯ ಚಿಂತಕ ಲಕ್ಷ್ಮಿಶ ತೋಳ್ಪಾಡಿ ಬಿಡುಗಡೆಗೊಳಿಸಲಿದ್ದಾರೆ ಎಂದೂ ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸುಮನಸಾದ ಅಧ್ಯಕ್ಷ ಪ್ರಕಾಶ್ ಜಿ.ಕೊಡವೂರು, ಉಪಾಧ್ಯಕ್ಷ ವಿನಯ್‌ಕುಮಾರ್, ಗಣೇಶ್ ಎಲ್ಲೂರು, ಕಾರ್ಯದರ್ಶಿ ಜೀವನ್ ಕುಮಾರ್ ಹಾಗೂ ಕೋಶಾಧಿಕಾರಿ ಚಂದ್ರಕಾಂತ್ ಕುಂದರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X