Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನೋಟು ರದ್ಧತಿಯಿಂದ ಭ್ರಷ್ಟಾಚಾರಕ್ಕೆ...

ನೋಟು ರದ್ಧತಿಯಿಂದ ಭ್ರಷ್ಟಾಚಾರಕ್ಕೆ ಕಡಿವಾಣ: ಕೇಂದ್ರ ಸಚಿವ ಸದಾನಂದಗೌಡ

ವಾರ್ತಾಭಾರತಿವಾರ್ತಾಭಾರತಿ22 Feb 2020 5:34 PM IST
share
ನೋಟು ರದ್ಧತಿಯಿಂದ ಭ್ರಷ್ಟಾಚಾರಕ್ಕೆ ಕಡಿವಾಣ: ಕೇಂದ್ರ ಸಚಿವ ಸದಾನಂದಗೌಡ

ಬೆಂಗಳೂರು, ಫೆ. 22: ಗರಿಷ್ಠ ಮೊತ್ತದ ನೋಟು ರದ್ಧತಿಯ ಬಳಿಕ ದೇಶದಲ್ಲಿ ಭ್ರಷ್ಟಾಚಾರ ಕಡಿಮೆಯಾಗಿದ್ದು, ಕಪ್ಪು ಹಣದ ವಹಿವಾಟು ನಿಯಂತ್ರಣದಲ್ಲಿದೆ ಎಂದು ಕೇಂದ್ರ ರಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ಇಂದಿಲ್ಲಿ ತಿಳಿಸಿದ್ದಾರೆ.

ಶನಿವಾರ ನಗರದ ಎಫ್‌ಕೆಸಿಸಿಐನಲ್ಲಿ ಭಾರತ ವೆಚ್ಚ ಲೆಕ್ಕಿಗರ ಸಂಸ್ಥೆ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ಐದು ಟ್ರಿಲಿಯನ್ ಆರ್ಥಿಕತೆಯ ಗುರಿಯೊಂದಿಗೆ ಮುನ್ನುಗ್ಗುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಆರ್ಥಿಕತೆಯ ಶಿಸ್ತು ತಹಬದಿಗೆ ಬರುತ್ತಿದೆ ಎಂದರು.

ನೂರ ಮೂವತ್ತು ಕೋಟಿ ಜನಸಂಖ್ಯೆ ಇರುವ ಭಾರತದಲ್ಲಿ ನೋಟ್ ಬ್ಯಾನ್ ಸುಲಭದ ಮಾತಲ್ಲ. ಅಂತಹ ದಿಟ್ಟ ನಿರ್ಧಾರ ತೆಗೆದುಕೊಂಡ ಮೋದಿ ಅವರು ದೇಶದ ಆರ್ಥಿಕತೆಗೆ ಹೊಸ ಆಯಾಮ ನೀಡಿದರು ಎಂದು ಅವರು ನೋಟು ಅಮಾನ್ಯೀಕರಣವನ್ನು ಸಮರ್ಥಿಸಿದರು.

ಐದೂವರೆ ವರ್ಷದಲ್ಲಿ ನಮ್ಮ ಸರಕಾರದಲ್ಲಿ ಒಂದೇ ಒಂದು ಭ್ರಷ್ಟಾಚಾರ ಪ್ರಕರಣ ನಡೆದಿಲ್ಲ. ಇದಕ್ಕೆ ಕಾರಣ ಮೋದಿಯವರ ದಿಟ್ಟ ನಡವಳಿಕೆ. ಹಲವು ಸವಾಲುಗಳು ಎದುರಿಸಿ ದೇಶದ ಆರ್ಥಿಕತೆಯನ್ನು ಶಿಸ್ತಿನ ಪಥಕ್ಕೆ ತರುವಲ್ಲಿ ನಮ್ಮ ಸರಕಾರ ಯಶಸ್ವಿಯಾಗಿದೆ ಎಂದರು.

ಜಿಎಸ್ಪಿ ಜಾರಿಗೊಳಿಸಿದ ನಂತರವಂತೂ ವ್ಯಾಪಾರಿಗಳಿಗೂ ಅನುಕೂಲವಾಗಿದೆ. ತೆರಿಗೆ ಸಂಗ್ರಹವೂ ಸುಧಾರಣೆಗೊಂಡಿದೆ. ವ್ಯಾಪಾರಿಗಳಿಗೆ ಈ ಮೊದಲು ಇದ್ದ ಅಡೆತಡೆಗಳು ನಿವಾರಣೆಗೊಂಡಿವೆ. ನಿಯಮಾವಳಿಗಳು ಸಡಿಲವಾಗಿವೆ. ಇದರಿಂದ ಪರೋಕ್ಷ ಹಾಗೂ ಪ್ರತ್ಯಕ್ಷವಾಗಿ ವ್ಯಾಪಾರೋದ್ಯಮಕ್ಕೆ ಸಾಕಷ್ಟು ಸಹಕಾರವಾಗಿದೆ ಎಂದರು.

ಡಿಜಿಟಲ್ ಇಂಡಿಯಾ ಭಾರತದ ಅಭಿವೃದ್ಧಿಯ ದಿಕ್ಕನ್ನೇ ಬದಲಾವಣೆ ಮಾಡಿದೆ. ದಿನೇ ದಿನೇ ಆಧುನಿಕ ತಂತ್ರಜ್ಞಾನದ ಬಳಕೆ ಹೆಚ್ಚಾಗುತ್ತಿದೆ. ವಿಶ್ವದಲ್ಲಿಂದು ಭಾರತಕ್ಕೆ ತನ್ನದೇ ಆದ ಸ್ಥಾನಮಾನಗಳಿವೆ. ಐದೂವರೆ ವರ್ಷದಲ್ಲಿ ಸರಕಾರ ತೆಗೆದುಕೊಂಡ ಕ್ರಮಗಳಿಂದಾಗಿ ದೇಶದಲ್ಲಿ ಸಾಕಷ್ಟು ಬದಲಾವಣೆಯಾಗಿದೆ ಎಂದು ಹೇಳಿದರು.

ಭಾರತೀಯ ವೆಚ್ಚ ಲೆಕ್ಕಿಗರ ಸಂಸ್ಥೆ ಅಧ್ಯಕ್ಷ ಎಚ್.ಆರ್.ಶಿವಪಾಲ್, ಮೈಸೂರು ಘಟಕದ ಅಧ್ಯಕ್ಷ ಎಂ.ಅಶೋಕ್ ಕುಮಾರ್, ವಿಶ್ವನಾಥ್ ಆರ್.ಭಟ್, ಎಫ್‌ಕೆಸಿಸಿಐ ಅಧ್ಯಕ್ಷ ಜನಾರ್ಧನ್ ಸೇರಿದಂತೆ ಇನ್ನಿತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X