ಮಾದಕ ವಸ್ತು ಮಾರಾಟ ಆರೋಪ: ಇಬ್ಬರ ಬಂಧನ
ಬೆಂಗಳೂರು, ಫೆ.22: ಮಾದಕ ವಸ್ತು ಮಾರಾಟ ಆರೋಪದಡಿ ಇಬ್ಬರನ್ನು ಇಲ್ಲಿನ ಯಶವಂತಪುರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪಶ್ಚಿಮ ಬಂಗಾಳ ಮೂಲದ ನಿಶ್ಯಲ್ ಭಾರತಿ(42) ಮತ್ತು ರೋಹಿತ್(40) ಬಂಧಿತ ಆರೋಪಿಗಳೆಂದು ಪೊಲೀಸರು ಹೇಳಿದ್ದಾರೆ.
ಯಶವಂತಪುರ ವ್ಯಾಪ್ತಿಯ ಮತ್ತಿಕೆರೆ ಬಳಿ ಮೇಲ್ಸೇತುವೆ ಕೆಳಗೆ ಇಬ್ಬರು ವ್ಯಕ್ತಿಗಳು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾರೆಂಬ ಮಾಹಿತಿ ಸಂಗ್ರಹಿಸಿ ಕಾರ್ಯಾಚರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಬಂಧಿತರಿಂದ 2.27 ಕೆಜಿ ಗಾಂಜಾ ಜಪ್ತಿ ಮಾಡಲಾಗಿದ್ದು, ಈ ಸಂಬಂಧ ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story