Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಆನ್‌ಲೈನ್ ಮೂಲಕ ಕಟ್ಟಡ ನಿರ್ಮಾಣಕ್ಕೆ...

ಆನ್‌ಲೈನ್ ಮೂಲಕ ಕಟ್ಟಡ ನಿರ್ಮಾಣಕ್ಕೆ ಅನುಮತಿ: ವಾರದೊಳಗೆ ಮುಖ್ಯಮಂತ್ರಿಗಳಿಂದ ಲೋಕಾರ್ಪಣೆ

ಯುವರಾಜ್ ಮಾಳಗಿಯುವರಾಜ್ ಮಾಳಗಿ22 Feb 2020 10:23 PM IST
share
ಆನ್‌ಲೈನ್ ಮೂಲಕ ಕಟ್ಟಡ ನಿರ್ಮಾಣಕ್ಕೆ ಅನುಮತಿ: ವಾರದೊಳಗೆ ಮುಖ್ಯಮಂತ್ರಿಗಳಿಂದ ಲೋಕಾರ್ಪಣೆ

ಬೆಂಗಳೂರು, ಫೆ.22: ಬಿಬಿಎಂಪಿ ವ್ಯಾಪ್ತಿಯಲ್ಲಿ ನಿರ್ಮಾಣವಾಗಲಿರುವ ಅಧಿಕೃತ ಕಟ್ಟಡಗಳಿಗೆ ಬಿಬಿಎಂಪಿಯು ಆನ್‌ಲೈನ್ ಮೂಲಕ ಅನುಮತಿ ನೀಡಲು ಮುಂದಾಗಿದ್ದು, ಮುಂದಿನ ವಾರದೊಳಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಲೋಕಾರ್ಪಣೆಗೊಳಿಸಲಿದ್ದಾರೆ. 

ಕಟ್ಟಡ ನಿರ್ಮಾಣ ಮಾಡುವವರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದ ಹಿನ್ನೆಲೆ ಹಾಗೂ ಸಾರ್ವಜನಿಕವಾಗಿ ಕೇಳಿ ಬಂದ ದೂರಿನ ಹಿನ್ನೆಲೆಯಲ್ಲಿ ಇದೀಗ ರಾಜ್ಯ ಸರಕಾರದ ನಿರ್ದೇಶನದ ಮೇಲೆ ಬಿಬಿಎಂಪಿ ಆನ್‌ಲೈನ್ ಮೂಲಕ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಲು ಮುಂದಾಗಿದೆ. ಈಗಾಗಲೇ ಬಿಬಿಎಂಪಿಯ ಐಟಿ ವಿಭಾಗದಿಂದ ಇದಕ್ಕೆ ಅಂತಿಮ ರೂಪ ನೀಡಲಾಗಿದೆ.

ನಗರದಲ್ಲಿ ನಿವೇಶನ ಖರೀದಿಸಿ ಮನೆ ನಿರ್ಮಿಸುವವರಿಗೆ ಇದ್ದ ತೊಡಕನ್ನು ದೂರ ಮಾಡಿ ಅವರು ಅಂದುಕೊಂಡಂತಹ ಮನೆ ನಿರ್ಮಾಣಕ್ಕೆ ಅನುಮತಿ ನೀಡಲು ಬಿಬಿಎಂಪಿ ಅಧಿಕಾರಿಗಳು ಮುಂದಾಗಿದ್ದು, ಆನ್‌ಲೈನ್ ಮೂಲಕ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಿ ಕಟ್ಟಡ ನಿರ್ಮಾಣ ಪ್ರಕ್ರಿಯೆಯನ್ನು ಸರಳಗೊಳಿಸಿದ್ದಾರೆ.

ಈ ಮೊದಲು ಕಟ್ಟಡ ನಿರ್ಮಿಸಲು ಬಿಬಿಎಂಪಿಯಿಂದ ಬಿಲ್ಡಿಂಗ್ ಪ್ಲಾನ್ ಪಡೆಯಬೇಕಿತ್ತು. ಅಲ್ಲದೇ, ನಿಗದಿತ 11 ಏಜೆನ್ಸಿಗಳಿಂದ ನಿರಪೇಕ್ಷಣಾ ಪತ್ರ ಪಡೆದು ತಂದು ಬಿಬಿಎಂಪಿಗೆ ಒಪ್ಪಿಸಬೇಕಿತ್ತು. ಇದರ ಜತೆಗೆ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳಿಗೆ ಲಂಚ ನೀಡಬೇಕಿತ್ತು. ಇಷ್ಟಾದರೂ ಒಂದು ತಿಂಗಳ ಕಾಲ ಅನುಮೋದನೆಗೆ ಕಾಯಬೇಕಿತ್ತು. ಈ ಎಲ್ಲ ತೊಂದರೆಗಳನ್ನು ತಪ್ಪಿಸುವ ಉದ್ದೇಶದಿಂದ ಆನ್‌ಲೈನ್ ಮೂಲಕ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಲು ಬಿಬಿಎಂಪಿ ಮುಂದಾಗಿರುವುದಾಗಿ ಬಿಬಿಎಂಪಿ ನಗರ ಯೋಜನಾ ವಿಭಾಗದ ಮುಖ್ಯಾಧಿಕಾರಿ ಪ್ರಸಾದ್ ತಿಳಿಸಿದ್ದಾರೆ.

ಪ್ರಕ್ರಿಯೆ ಹೇಗೆ: ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ಪ್ಲ್ಯಾನ್ ಪಡೆಯಲು ಅಗ್ನಿಶಾಮಕ, ಮಾಲಿನ್ಯ ನಿಯಂತ್ರಣ ಮಂಡಳಿ, ಜಲಮಂಡಳಿ, ವಿಮಾನ ನಿಯಂತ್ರಣ ಪ್ರಾಧಿಕಾರದಿಂದ ಕಡ್ಡಾಯವಾಗಿ ಬೇಕಿರುವ ನಿರಪೇಕ್ಷಣಾ ಪತ್ರಗಳನ್ನು ಪಡೆಯುವ ತೊಂದರೆ ಇರುವುದಿಲ್ಲ. ಎಲ್ಲ ದಾಖಲೆಗಳನ್ನು ಸಮರ್ಪಕವಾಗಿ ಒದಗಿಸಿದ್ದಲ್ಲಿ ಬಿಬಿಎಂಪಿ 18 ದಿನಗಳಲ್ಲಿ ಈ ಎನ್‌ಓಸಿಗಳನ್ನು ಪಡೆದು ಪ್ಲಾನ್‌ಗೆ ಅನುಮತಿ ನೀಡಲಿದೆ.

ಈ ಪ್ರಕ್ರಿಯೆಯಲ್ಲಿ ಪ್ರತಿಯೊಂದು ಏಜೆನ್ಸಿಗೂ ನಿರಪೇಕ್ಷಣಾ ಪತ್ರಗಳನ್ನು ನೀಡಲು ಡೆಡ್‌ಲೈನ್ ನಿಗದಿಪಡಿಸಲಾಗಿದೆ. ಆ ಡೆಡ್‌ಲೈನ್‌ನೊಳಗೆ ಸಂಬಂಧಪಟ್ಟ ಅಧಿಕಾರಿಗಳು ಎನ್‌ಓಸಿ ನೀಡಬೇಕು. ಅಥವಾ ದಾಖಲೆಗಳು ಸಮರ್ಪಕವಾಗಿರದಿದ್ದಲ್ಲಿ ನಿರಾಕರಣೆ ಮಾಡಬೇಕು ಹೊರತು ಕಾಯಿಸುವಂತಿಲ್ಲ.

ಆನ್‌ಲೈನ್ ಮೂಲಕ ಕಟ್ಟಡ ನಿರ್ಮಾಣ ಅನುಮತಿಯು ಸಾರ್ವಜನಿಕರಿಗೆ ಸರಳವಾಗಲಿದೆ. ಈ ರೀತಿಯಾಗಿ ಅನುಮತಿ ನೀಡುತ್ತಿರುವ ದೇಶದ ಮೂರನೇ ಪಾಲಿಕೆ ಬಿಬಿಎಂಪಿ ಆಗಲಿದೆ. ಈಗಾಗಲೇ ಮುಂಬೈ, ಕೋಲ್ಕತಾ ಪಾಲಿಕೆಗಳಲ್ಲಿ ಈ ಯೋಜನೆ ಜಾರಿಯಲ್ಲಿದೆ.

-ಮಂಜೇಶ್, ಬಿಬಿಎಂಪಿ ನಗರ ಯೋಜನೆ ಅಪರ ನಿರ್ದೇಶಕ

ಅಧಿಕೃತ ಕಟ್ಟಡ ನಿರ್ಮಾಣಕ್ಕೆ ಈವರೆಗೂ ಇದ್ದ ತೊಂದರೆ ಎದುರಾಗುವುದಿಲ್ಲ. ಎಲ್ಲಕ್ಕಿಂತ ಹೆಚ್ಚಾಗಿ ನಿಯಮಗಳನ್ನು ಉಲ್ಲಂಘಿಸಿ ಪ್ಲ್ಯಾನ್ ಕೊಡಲಾಗುತ್ತಿದ್ದ ಅಕ್ರಮ ನಡೆಯುವುದು ಇಲ್ಲ. ಈ ಆನ್‌ಲೈನ್ ಮೂಲಕ ಕಟ್ಟಡ ನಿರ್ಮಾಣ ಅನುಮತಿಯ ಯೋಜನೆಯನ್ನು ಶೀಘ್ರದಲ್ಲಿ ಸಿ.ಎಂ ಬಿ.ಎಸ್ ಯಡಿಯೂರಪ್ಪ ಲೋಕಾರ್ಪಣೆ ಮಾಡಲಿದ್ದಾರೆ.

-ಪ್ರಸಾದ್, ಬಿಬಿಎಂಪಿ ನಗರ ಯೋಜನಾ ವಿಭಾಗದ ಮುಖ್ಯಾಧಿಕಾರಿ

share
ಯುವರಾಜ್ ಮಾಳಗಿ
ಯುವರಾಜ್ ಮಾಳಗಿ
Next Story
X