ಮಾ.1ರಂದು ಎಸ್‍ಕೆಪಿಎ ಜಿಲ್ಲಾ ಮಟ್ಟದ ಕ್ರೀಡಾಕೂಟ
ಕಾಪು: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ (ಎಸ್‍ಕೆಪಿಎ)ಕಾಪು ವಲಯ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಮಾ. 1ರಂದು ಉಚ್ಚಿಲ ಸರಸ್ವತಿ ಮಂದಿರ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದೆ.
ಶನಿವಾರ ಕಾಪುವಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಎಸ್‍ಕೆಪಿಎ ಕಾಪು ವಲಯಾಧ್ಯಕ್ಷ ವೀರೇಂದ್ರ ಎಸ್ ಪೂಜಾರಿ ಮಾಹಿತಿ ನೀಡಿದರು.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಎಸ್‍ಕೆಪಿಎ 14 ವಲಯ ತಂಡಗಳು ಕ್ರೀಡಾಕೂಟದ ಕ್ರಿಕೆಟ್, ವಾಲಿಬಾಲ್, ಹಗ್ಗಜಗ್ಗಾಟ ಸ್ಪರ್ಧೆಗಳಲ್ಲಿ ಸೆಣಸಲಿವೆ. ಕ್ರಿಕೆಟ್ ಪಂದ್ಯದ ವಿಜೇತ ತಂಡಕ್ಕೆ ಪ್ರಥಮ ರೂ.7777 ಸಹಿತ ಶಾಶ್ವತ ಫಲಕ, ದ್ವಿತೀಯ ರೂ. 5555 ಸಹಿತ ಫಲಕ, ಉತ್ತಮ ಎಸೆತಗಾರ, ಉತ್ತಮ ದಾಂಡಿಗ, ಸರಣಿ ಶ್ರೇಷ್ಠ ಪ್ರಶಸ್ತಿ ನೀಡಲಾಗುವುದು. ವಾಲಿಬಾಲ್‍ನಲ್ಲಿ ಪ್ರಥಮ ಸ್ಥಾನಿ ತಂಡಕ್ಕೆ 6666 ರೂ. ನಗದು ಸಹಿತ ಶಾಶ್ವತ ಫಲಕ, ದ್ವಿತೀಯ ರೂ.4444 ನಗದು ಸಹಿತ ಫಲಕ, ಉತ್ತಮ ಹೊಡೆತಗಾರ, ಬೆಸ್ಟ್ ಪಾಸರ್, ಬೆಸ್ಟ್ ಆಲ್‍ರೌಂಡರ್ ವೈಯಕ್ತಿಕ ಬಹುಮಾನ ಹಾಗೂ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ವಿಜೇತ ತಂಡಕ್ಕೆ ರೂ.5555 ಸಹಿತ ಫಲಕ, ದ್ವಿತೀಯ ಸ್ಥಾನಿ ತಂಡಕ್ಕೆ ರೂ.3333 ನಗದಿನೊಂದಿಗೆ ಶಾಶ್ವತ ಫಲಕ ನೀಡಲಾಗುವುದು ಎಂದರು.
ಬೆಳಗ್ಗೆ 8.30ಕ್ಕೆ ಉಚ್ಚಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಕಾಪು ವೃತ್ತ ನಿರೀಕ್ಷಕ ಮಹೇಶ್ ಪ್ರಸಾದ್ ಕ್ರೀಡಾಜ್ಯೋತಿಗೆ ಚಾಲನೆ ನೀಡುವರು. ಶಾಸಕ ಲಾಲಾಜಿ ಆರ್ ಮೆಂಡನ್ ಬೆಳಿಗ್ಗೆ 9 ಗಂಟೆಗೆ ಕ್ರೀಡಾಕೂಟ ಉದ್ಘಾಟಿಸುವರು. ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ ಆಶೀರ್ವಚನ ನೀಡುವರು. ಜಿಪಂ ಅಧ್ಯಕ್ಷ ದಿನಕರ ಬಾಬು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ.ರೋಶನ್‍ಕುಮಾರ್ ಶೆಟ್ಟಿ, ಅದಾನಿ-ಯುಪಿಸಿಎಲ್ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ ಮತ್ತಿತ ರರು ಪಾಲ್ಗೊಳ್ಳುವರು.
ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಎಸ್‍ಕೆಪಿಎ ಕಾಪು ವಲಯ ಅಧ್ಯಕ್ಷ ವೀರೇಂದ್ರ ಎಸ್ ಪೂಜಾರಿ ಅಧ್ಯಕ್ಷತೆ ವಹಿಸಲಿದ್ದು, ಕೇಂದ್ರ ಸಮಿತಿ ಅಧ್ಯಕ್ಷ ಶ್ರೀಧರ ಶೆಟ್ಟಿಗಾರ್, ಸಂಚಾಲಕ ಅಶೋಕ್ ಕುಮಾರ್ ಶೆಟ್ಟಿ ಮತ್ತಿತರರು ಭಾಗವಹಿಸುವರು ಎಂದು ವಿವರಿಸಿದರು.
ಎಸ್‍ಕೆಪಿಎ ಕೇಂದ್ರ ಸಮಿತಿ ಅಧ್ಯಕ್ಷ ಶ್ರೀಧರ ಶೆಟ್ಟಿಗಾರ್,ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಉದಯ ಮುಂಡ್ಕೂರು, ಕಾಪು ವಲಯ ಗೌರವಾಧ್ಯಕ್ಷ ಅನಂತರಾಜ್ ಭಟ್, ಪ್ರಧಾನ ಕಾರ್ಯದರ್ಶಿ ಸಚಿನ್ ಉಚ್ಚಿಲ, ಕ್ರೀಡಾ ಕಾರ್ಯದರ್ಶಿ ಸುರೇಶ್ ಎರ್ಮಾಳ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.







