Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚಂದ್ರಶೇಖರ್ ಆಝಾದ್ ಕರೆ ನೀಡಿದ್ದ ಭಾರತ್...

ಚಂದ್ರಶೇಖರ್ ಆಝಾದ್ ಕರೆ ನೀಡಿದ್ದ ಭಾರತ್ ಬಂದ್ ಆಂಶಿಕ ಯಶಸ್ವಿ

ವಾರ್ತಾಭಾರತಿವಾರ್ತಾಭಾರತಿ23 Feb 2020 11:33 PM IST
share
ಚಂದ್ರಶೇಖರ್ ಆಝಾದ್ ಕರೆ ನೀಡಿದ್ದ ಭಾರತ್ ಬಂದ್ ಆಂಶಿಕ ಯಶಸ್ವಿ

ಹೊಸದಿಲ್ಲಿ, ಫೆ.23: ಸರಕಾರಿ ಉದ್ಯೋಗದಲ್ಲಿ ಭಡ್ತಿಗೆ ಮೀಸಲಾತಿ ಮೂಲಭೂತ ಹಕ್ಕಲ್ಲ ಎಂಬ ಸುಪ್ರೀಂಕೋರ್ಟ್ ಆದೇಶವನ್ನು ವಿರೋಧಿಸಿ ಭೀಮ್‌ಸೇನೆಯ ಅಧ್ಯಕ್ಷ ಚಂದ್ರಶೇಖರ್ ಆಝಾದಿ ಕರೆ ನೀಡಿದ್ದ ಭಾರತ್‌ಬಂದ್ ಪ್ರತಿಭಟನೆಗೆ ಹಲವು ರಾಜಕೀಯ ಪಕ್ಷಗಳೂ ಬೆಂಬಲ ಸೂಚಿಸಿದ್ದು ದೇಶದ ಕೆಲವೆಡೆ ಯಶಸ್ವಿಯಾಗಿದೆ ಎಂದು ವರದಿಯಾಗಿದೆ.

ಭಾರತ್‌ಬಂದ್‌ಗೆ ಉತ್ತರಪ್ರದೇಶದಲ್ಲಿ ಶಿವಪಾಲ್ ಯಾದವ್‌ರ ಪ್ರಗತಿಶೀಲ ಸಮಾಜವಾದಿ ಪಕ್ಷ ಲೋಹಿಯಾ, ಬಿಹಾರದಲ್ಲಿ ತೇಜಸ್ವಿ ಯಾದವ್ ಅವರ ರಾಷ್ಟ್ರೀಯ ಜನತಾ ದಳ , ಉಪೇಂದ್ರ ಕುಶ್ವಾಹಾ ನೇತೃತ್ವದ ಲೋಕಸಮತಾ ಪಕ್ಷ, ಜೀತನ್‌ರಾಮ್ ಮಾಂಜಿಯ ಹಿಂದುಸ್ತಾನೀ ಅವಾಮೀ ಮೋರ್ಛಾ, ಪಪ್ಪು ಯಾದವರ ಜನ ಅಧಿಕಾರ ಪಕ್ಷ ಬೆಂಬಲ ಘೋಷಿಸಿತ್ತು. ಕಾಂಗ್ರೆಸ್‌ನ ಪರಿಶಿಷ್ಟ ವಿಭಾಗದ ಅಧ್ಯಕ್ಷ ನಿತಿನ್ ರಾವತ್ ಅವರೂ ಬೆಂಬಲ ಸೂಚಿಸಿದ್ದರು. ಸಂವಿಧಾನದ ರಕ್ಷಣೆ ಮತ್ತು ಮೀಸಲಾತಿಯ ರಕ್ಷಣೆಗಾಗಿ ಭಾರತ್ ಬಂದ್ ಪ್ರತಿಭಟನೆಯನ್ನು ಹೃತ್ಪೂರ್ವಕವಾಗಿ ಬೆಂಬಲಿಸುತ್ತಿದ್ದೇನೆ. ಮೀಸಲಾತಿ ನಮ್ಮ ಗೌರವ ಮತ್ತು ಆತ್ಮಾಭಿಮಾನವಾಗಿದೆ. ಯಾವುದೇ ಬೆಲೆ ತೆತ್ತಾದರೂ ಇದನ್ನು ಉಳಿಸಿಕೊಳ್ಳುತ್ತೇವೆ . ಸಂವಿಧಾನ ಚಿರಾಯುವಾಗಲಿ, ಜೈ ಭೀಮ್ ಎಂದು ನಿತಿನ್ ರಾವತ್ ಟ್ವೀಟ್ ಮಾಡಿದ್ದಾರೆ.

ಶನಿವಾರ, ನಾಗಪುರದಲ್ಲಿ ಹಮ್ಮಿಕೊಂಡಿದ್ದ ತಿರಂಗಾ ರ್ಯಾಲಿಯ ಅಂಗವಾಗಿ ಆರೆಸ್ಸೆಸ್ ಕೇಂದ್ರ ಕಚೇರಿಯೆದುರು ರಾಷ್ಟ್ರಧ್ವಜ ಆರಳಿಸಿದ್ದ ಚಂದ್ರಶೇಖರ್ ಆಝಾದ್, ಆರೆಸ್ಸೆಸ್ ಸಂಘಟನೆಯ ನಿಷೇಧಕ್ಕೆ ಆಗ್ರಹಿಸಿದ್ದರು. ಶನಿವಾರ ಮಧ್ಯರಾತ್ರಿಯ ಬಳಿಕ 12:30ರ ವೇಳೆ ದಿಲ್ಲಿಯ ಸೀಲಾಂಪುರ-ಜಫ್ರಾಬಾದ್ ಪ್ರದೇಶದಲ್ಲಿ ಪೌರತ್ವ ಕಾಯ್ದೆ ವಿರೋಧಿಸಿ ನೂರಾರು ಮಹಿಳೆಯರು ಜಫ್ರಾಬಾದ್ ಮೆಟ್ರೋ ನಿಲ್ದಾಣದ ಹೊರಗಡೆ ರಸ್ತೆ ತಡೆ ನಡೆಸಿ ಪ್ರತಿಭಟಿಸಿದ್ದರು. ಇದನ್ನು ಟ್ವಿಟರ್‌ನಲ್ಲಿ ಉಲ್ಲೇಖಿಸಿದ್ದ ಚಂದ್ರಶೇಖರ್ ಆಝಾದ್, ಬೆಳಕು ಹರಿಯಲು ಇನ್ನೂ ಸುಮಾರು 6 ಗಂಟೆಗಳಿವೆ. ಆದರೆ ಸೀಲಾಂಪುರದ ಮಾತೆಯರು ಮತ್ತು ಸಹೋದರಿಯರು ಈಗಾಗಲೇ ಭಾರತ್ ಬಂದ್‌ನ ಕಹಳೆ ಮೊಳಗಿಸಿಯೇ ಬಿಟ್ಟಿದ್ದಾರೆ ಎಂದು ಅಭಿನಂದಿಸಿದ್ದರು.

ಬಿಜೆಪಿ ಪಕ್ಷದವರ ಪ್ರಚೋದನೆಗೆ ಒಳಗಾಗಿ ಯಾವುದೇ ರೀತಿಯ ಹಿಂಸಾಚಾರಕ್ಕೆ ಮುಂದಾಗಬಾರದು ಎಂದು ಬೆಂಬಲಿಗರಿಗೆ ಕರೆ ನೀಡಿರುವ ಆಝಾದ್, ಪೌರತ್ವ ಕಾಯ್ದೆ, ಎನ್‌ಆರ್‌ಸಿ ಮತ್ತು ಎನ್‌ಆರ್‌ಪಿಯನ್ನು ವಿರೋಧಿಸುವ ನಿಟ್ಟಿನಲ್ಲೂ ಭಾರತ್ ಬಂದ್ ಆಯೋಜಿಸಲಾಗಿದೆ ಎಂದಿದ್ದಾರೆ. ಭಾರತ್ ಬಂದ್ ಅಂಗವಾಗಿ ರವಿವಾರ ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ನಡೆದ ಪ್ರತಿಭಟನಾ ರ್ಯಾಲಿಯಲ್ಲಿ ಚಂದ್ರಶೇಖರ್ ಆಝಾದ್ ಪಾಲ್ಗೊಂಡರು.

ಈ ಮಧ್ಯೆ, ದಲಿತ ಸಮುದಾಯದವರ ಸಂಖ್ಯೆ ಹೆಚ್ಚಾಗಿರುವ ಉತ್ತರಪ್ರದೇಶದ ಸಹಾರನ್‌ಪುರದಲ್ಲಿ ಪೊಲೀಸರು ದಲಿತ ಸಂಘಟನೆಯೊಂದಿಗೆ ಮಾತುಕತೆ ನಡೆಸಿದ್ದಾರೆ. ದಲಿತ ಸಂಘಟನೆಯವರು ಶಾಂತ ರೀತಿಯಿಂದ ಪ್ರತಿಭಟನೆ ನಡೆಸಲು ಯಾವುದೇ ಅಭ್ಯಂತರವಿಲ್ಲ. ಆದರೆ ಹಿಂಸಾಚಾರಕ್ಕೆ ಮುಂದಾಗಬಾರದು ಎಂದು ಸಹರಾನ್‌ಪುರದ ಹಿರಿಯ ಪೊಲೀಸ್ ಅಧೀಕ್ಷಕ ದಿನೇಶ್ ಕುಮಾರ್ ಹೇಳಿದ್ದಾರೆ. 2018ರ ಎಪ್ರಿಲ್ 2ರಂದು ನಡೆದಿದ್ದ ಭಾರತ್ ಬಂದ್ ಸಂದರ್ಭ ನಡೆದ ವ್ಯಾಪಕ ಹಿಂಸಾಚಾರದ ಹಿನ್ನೆಲೆಯಲ್ಲಿ ಈ ಬಾರಿ ಸಾಮಾಜಿಕ ಮಾಧ್ಯಮದ ಮೇಲೆ ಕಟ್ಟುನಿಟ್ಟಿನ ನಿಗಾ ಇರಿಸಲಾಗಿದ್ದು ಎಲ್ಲಾ ಪೊಲೀಸ್ ಸಿಬಂದಿಗಳ ರಜೆಯನ್ನು ರದ್ದುಗೊಳಿಸಲಾಗಿದೆ ಎಂದು ಮೀರತ್ ಜಿಲ್ಲಾ ಪೊಲೀಸರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X