Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ: ಗ್ರಾ.ಪಂ ನೌಕರರ...

ಮಡಿಕೇರಿ: ಗ್ರಾ.ಪಂ ನೌಕರರ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭ

ವಾರ್ತಾಭಾರತಿವಾರ್ತಾಭಾರತಿ24 Feb 2020 5:09 PM IST
share
ಮಡಿಕೇರಿ: ಗ್ರಾ.ಪಂ ನೌಕರರ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭ

ಮಡಿಕೇರಿ, ಫೆ.24: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಗ್ರಾ.ಪಂ ನೌಕರರ ಸಂಘ ಅನಿರ್ದಿಷ್ಟಾವಧಿ ಧರಣಿ ಮುಷ್ಕರವನ್ನು ಆರಂಭಿಸಿದೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಗ್ರಾ.ಪಂ ನೌಕರರ ಸಂಘದ ಜಿಲ್ಲಾ ಘಟಕ, ಸರ್ಕಾರ ನಿರ್ಲಕ್ಷ್ಯ ಮನೋಭಾವ ಹೊಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ನೌಕರರಿಂದ ದುಡಿಸಿಕೊಳ್ಳುವ ಆಸಕ್ತಿಯನ್ನು ತೋರುವ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ನೌಕರರ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗುತ್ತಿಲ್ಲವೆಂದು ಆರೋಪಿಸಿದರು. 

ರಾಜ್ಯದಲ್ಲಿ 6 ಸಾವಿರಕ್ಕೂ ಅಧಿಕ ಗ್ರಾ.ಪಂ.ಗಳಲ್ಲಿ ಸುಮಾರು 65 ಸಾವಿರ ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದಾರೆ. ಅವರ ಸಂಬಳಕ್ಕೆ ವಾರ್ಷಿಕ 900 ಕೋಟಿ ರೂ.ಗಳ ಅನುದಾನದ ಅಗತ್ಯವಿದೆ. ಹಿಂದಿನ ಸರಕಾರ 518 ಕೋಟಿ ರೂ.ಗಳನ್ನು ಮಂಜೂರು ಮಾಡಿದ್ದು, ಇನ್ನೂ 382ಕೋಟಿ ರೂ.ಬಾಕಿ ಉಳಿದಿದೆ. 14ನೇ ಹಣಕಾಸು ಆಯೋಗದ ಶೇ.10ರಷ್ಟನ್ನು ಸಿಬ್ಬಂದಿಗೆ ವೇತನಕ್ಕೆ ಬಳಸಿಕೊಳ್ಳಲು ಸರಕಾರ ಅನುಮೋದನೆ ನೀಡಿದ್ದರೂ, ಚುನಾಯಿತ ಸದಸ್ಯರ ಒತ್ತಡಕ್ಕೆ ಒಳಗಾಗುವ ಅಧಿಕಾರಿಗಳು ಸಿಬ್ಬಂದಿಗೆ ಸಮರ್ಪಕವಾಗಿ ವೇತನ ನೀಡುತ್ತಿಲ್ಲ. ಕೆಲವು ಪಂಚಾಯತ್ ಗಳಲ್ಲಿ 5 -5 ತಿಂಗಳುಗಳಿಂದ ವೇತನ ಪಾವತಿಯಾಗದೆ ಬಾಕಿ ಉಳಿದಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲೆಯ ಕೆಲವು ಗ್ರಾ.ಪಂ.ಗಳಲ್ಲಿ ಸಿಬ್ಬಂದಿಗಳಿಗೆ ಮಾನಸಿಕ ಕಿರುಕುಳ ನೀಡಿ ಕೆಲಸದಿಂದ ತೆಗೆದು ಹಾಕುವ ಕಾರ್ಯ ನಡೆಯುತ್ತಿದ್ದು, ಇದನ್ನು ವಿರೋಧಿಸಿ ಅಂತಹ ಪಂಚಾಯತ್ ಕಚೇರಿಗಳ ಎದುರು ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದೂ ಅವರು ಇದೇ ಸಂದರ್ಭ ತಿಳಿಸಿದರು.

ಬೇಡಿಕೆಗಳು
2019ರ ಜು.23ರ ಆದೇಶದಂತೆ ಎಲ್ಲಾ ಸಿಬ್ಬಂದಿಗಳಿಗೆ ಅನುಮೋದನೆ ನೀಡಬೇಕು. ಬಾಕಿ ಉಳಿದಿರುವ 12-24 ತಿಂಗಳ ವೇತನವನ್ನು ಪಾವತಿಸಬೇಕು. ಬಿಲ್ ಕಲೆಕ್ಟರ್, ಕ್ಲರ್ಕ್, ಕ್ಲರ್ಕ್ ಕಂ ಕಂಪ್ಯೂಟರ್ ಆಪರೇಟರ್ ಭಡ್ತಿ ಕೋಟಾವನ್ನು ಹೆಚ್ಚಿಸಬೇಕು. 14ನೇ ಹಣಕಸು ಆಯೋಗದ ಹಣದಲ್ಲಿ ವೇತನ ಪಾವತಿಸಬೇಕು. ಪೆನ್ಷನ್ ಮಂಜೂರು ಮಾಡುವುದರೊಂದಿಗೆ ಗ್ರಾಜ್ಯುಟಿ(ಉಪಧನ) ಸಿಗುವಂತಾಗಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ನಂತರ ಪಂಚಾಯತ್ ನೌಕರರನ್ನು ಬಿಪಿಎಲ್ ಪಡಿತರ ವ್ಯವಸ್ಥೆಯಡಿ ಸೇರಿಸಬೇಕು ಮತ್ತು ಆದಾಯ ಮಿತಿಯನ್ನು 1.20 ಲಕ್ಷದಿಂದ 2 ಲಕ್ಷಕ್ಕೆ ಏರಿಕೆ ಮಾಡಬೇಕೆಂದು ಒತ್ತಾಯಿಸಿ ಆಹಾರ ಇಲಾಖೆ ಎದುರು ಪ್ರತಿಭಟನೆ ನಡೆಸಿದರು.

ಸಂಘದ ವೀರಾಜಪೇಟೆ ತಾಲೂಕು ಅಧ್ಯಕ್ಷ ಎಂ.ಬಿ. ಹರೀಶ್, ಮಡಿಕೇರಿ ತಾಲೂಕು ಖಜಾಂಚಿ ಎಂ.ಕೆ.ವಸಂತ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X