Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರತಿಷ್ಠೆ ಬಿಟ್ಟು ಕೆಲಸ ಮಾಡದಿದ್ದರೆ...

ಪ್ರತಿಷ್ಠೆ ಬಿಟ್ಟು ಕೆಲಸ ಮಾಡದಿದ್ದರೆ ವಿವಿಗಳ ಅಸ್ತಿತ್ವಕ್ಕೆ ಧಕ್ಕೆ: ಡಿಸಿಎಂ ಅಶ್ವಥ್ ನಾರಾಯಣ

ವಾರ್ತಾಭಾರತಿವಾರ್ತಾಭಾರತಿ24 Feb 2020 10:51 PM IST
share
ಪ್ರತಿಷ್ಠೆ ಬಿಟ್ಟು ಕೆಲಸ ಮಾಡದಿದ್ದರೆ ವಿವಿಗಳ ಅಸ್ತಿತ್ವಕ್ಕೆ ಧಕ್ಕೆ: ಡಿಸಿಎಂ ಅಶ್ವಥ್ ನಾರಾಯಣ

ಕಲಬುರಗಿ, ಫೆ.24: ನಮ್ಮ ಶಿಕ್ಷಣ ವ್ಯವಸ್ಥೆ ವಿದ್ಯಾರ್ಥಿ ಹಾಗೂ ಸಮಾಜ ಕೇಂದ್ರಿತವಾಗಿರಬೇಕು. ಅವರನ್ನೆ ನಿರ್ಲಕ್ಷಿಸಿದರೆ ವಿಶ್ವವಿದ್ಯಾಲಯಗಳು ಅಸ್ತಿತ್ವ ಕಳೆದುಕೊಳ್ಳುತ್ತವೆ. ಜನ ಈಗ ಸರಕಾರಿ ವಿಶ್ವವಿದ್ಯಾಲಯಗಳನ್ನೆ ನೆಚ್ಚಿಕೊಂಡಿಲ್ಲ, ಪರ್ಯಾಯ ವ್ಯವಸ್ಥೆಗಳೂ ಇವೆ. ಈ ವಿಷಯವನ್ನು ಗಮನದಲ್ಲಿಟ್ಟುಕೊಂಡು ಒಳ್ಳೆಯ ಕೆಲಸ ಮಾಡಬೇಕು ಎಂದು ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ ಎಚ್ಚರಿಸಿದ್ದಾರೆ.

ಸೋಮವಾರ ಗುಲ್ಬರ್ಗ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ಕುಲಪತಿ, ಆಡಳಿತ ಮಂಡಳಿ, ಸಿಂಡಿಕೇಟ್ ಸದಸ್ಯರೊಂದಿಗೆ ಮಾತುಕತೆ ನಡೆಸಿದ ಅವರು, ಗುಲ್ಬರ್ಗ ವಿವಿ ಬಗ್ಗೆ ಜನ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅದಕ್ಕೆ ತಕ್ಕಂತೆ ಕಾರ್ಯ ನಿರ್ವಹಿಸಬೇಕು ಎಂದರು. ಈಗ ಆನ್‌ಲೈನ್ ಶಿಕ್ಷಣ ವ್ಯವಸ್ಥೆ ಇದ್ದು, ಗುಣಮಟ್ಟ ಕಾಯ್ದುಕೊಳ್ಳಲು ಈ ಸಂಸ್ಥೆಗಳು ಇತರ ಉದ್ಯಮಗಳ ಜತೆ ಸಹಯೋಗಕ್ಕೆ ಸಿದ್ಧವಾಗಿರುತ್ತವೆ. ಇಂತಹ ಪರಿಸ್ಥಿತಿಯಲ್ಲಿ ನಾವು ಎಲ್ಲರೂ ನಮ್ಮ ಬಳಿಯೆ ಬರಲಿ ಎಂದು ಪ್ರತಿಷ್ಠೆ ಮಾಡುವುದು ಸರಿಯಲ್ಲ. ಈ ರೀತಿಯ ದೊಡ್ಡಸ್ತಿಕೆಯಿಂದ ವಿವಿ ತನ್ನ ಅಸ್ತಿತ್ವವನ್ನೆ ಕಳೆದುಕೊಳ್ಳಬಹುದು ಎಂದು ಅವರು ಆತಂಕ ವ್ಯಕ್ತಪಡಿಸಿದರು.

ನಮ್ಮ ಶಿಕ್ಷಣ ವ್ಯವಸ್ಥೆ ಪ್ರಸ್ತುತವಾಗಿರಬೇಕು. ಇಲ್ಲದಿದ್ದರೆ ವ್ಯವಸ್ಥೆಯಲ್ಲಿ ಉಳಿಯುವುದೇ ಕಷ್ಟ. ಈ ನಿಟ್ಟಿನಲ್ಲಿ ಸುಧಾರಣೆಗೆ ಶ್ರಮಿಸೋಣ. ವಿಶ್ವವಿದ್ಯಾಲಯಗಳು ಆನ್‌ಲೈನ್ ವ್ಯವಸ್ಥೆ ಅಳವಡಿಸಿಕೊಳ್ಳಬೇಕು. ಕಾಲೇಜುಗಳಿಗೆ ಕನಿಷ್ಠ ಮಾನದಂಡ ರೂಪಿಸಬೇಕು ಮತ್ತು ಖಾಲಿ ಹುದ್ದೆಗಳ ಬಗ್ಗೆ ರಾಜ್ಯ ಪರೀಕ್ಷಾ ಪ್ರಾಧಿಕಾರಕ್ಕೆ ಮಾಹಿತಿ ನೀಡುವ ಕೆಲಸ ಮಾಡಬೇಕು. ಎಲ್ಲ ವಿಷಯಗಳಲ್ಲಿ ಉತ್ತರದಾಯಿತ್ವ ಬಹಳ ಮುಖ್ಯ. ಬೇಜವಾಬ್ದಾರಿಯನ್ನು ಜನ ಸಹಿಸುವುದಿಲ್ಲ ಎಂದು ಅವರು ಹೇಳಿದರು.

ನಮ್ಮ ಆರ್ಥಿಕತೆ ನಿಂತಿರುವುದೇ ಜ್ಞಾನದ ಮೇಲೆ. ಸಾಮಾಜಿಕ, ಆರ್ಥಿಕ ಮುಂತಾದ ಎಲ್ಲ ಸಮಸ್ಯೆಗಳಿಗೆ ಜ್ಞಾನವೆ ಪರಿಹಾರ. ಶಿಕ್ಷಣ ವ್ಯವಸ್ಥೆಯ ಸುಧಾರಣೆ ಕಾರ್ಯ ಇಲ್ಲಿಂದಲೆ ಆಗಬೇಕು. ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸರಕಾರ ಇದಕ್ಕೆ ಎಲ್ಲ ರೀತಿಯ ಸಹಕಾರ ನೀಡುತ್ತದೆ. ಇದನ್ನು ಬಳಸಿಕೊಂಡು ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಕೆಲಸ ಆಗಬೇಕು ಎಂದು ಅಶ್ವಥ್ ನಾರಾಯಣ ತಿಳಿಸಿದರು.

ಸಂಬಳ ಮತ್ತು ಸ್ಥಾನಮಾನವೇ ಹೆಚ್ಚಲ್ಲ. ಕೊಟ್ಟ ಸ್ಥಾನಮಾನಕ್ಕೆ ಚ್ಯುತಿ ಬರದಂತೆ ನಡೆದುಕೊಳ್ಳಬೇಕು. ಜವಾಬ್ದಾರಿ ಅರಿತು ಎಲ್ಲರೂ ಒಟ್ಟಿಗೆ ಕೆಲಸ ಮಾಡೋಣ. ಈ ಕುರಿತು ವಿಶ್ವವಿದ್ಯಾಲಯದ ಸಲಹೆ ಸೂಚನೆಗಳನ್ನು ಕೇಳಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಆದರೆ, ಅಭಿವೃದ್ಧಿ ಕಾರ್ಯಕ್ಕೆ ನೆಪ ಹೇಳಬಾರದು ಎಂದು ಅವರು ಹೇಳಿದರು.

ಶೀಘ್ರದಲ್ಲೇ ಕುಲಪತಿ ನೇಮಕ: ಗುಲ್ಬರ್ಗ ವಿವಿಯ ಪ್ರಭಾರಿ ಕುಲಪತಿಯಾಗಿ ದೇವಿದಾಸ್ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವಿವಿಯ ಕುಲಪತಿಯ ನೇಮಕ ತ್ವರಿತವಾಗಿ ಆಗಬೇಕಿದೆ. ಈ ಸಂಬಂಧ ಆದಷ್ಟು ಬೇಗ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅಶ್ವಥ್ ನಾರಾಯಣ ತಿಳಿಸಿದರು.

ಕಲಬುರಗಿಯಲ್ಲಿ ಮಾಹಿತಿ ತಂತ್ರಜ್ಞಾನ ಕೇಂದ್ರ: ಈ ಭಾಗದಲ್ಲಿ ಹೆಚ್ಚಿನ ಪ್ರಗತಿ ಸಾಧಿಸಬೇಕಾದರೆ ಶಿಕ್ಷಣದ ವ್ಯವಸ್ಥೆಯಲ್ಲಿ ಗುಣಮಟ್ಟ ಸುಧಾರಣೆ ಬಹಳ ಮುಖ್ಯ. ಈ ನಿಟ್ಟಿನಲ್ಲಿ ಶಿಕ್ಷಕರು, ಸಮಾಜ, ರಾಜಕಾರಣಿಗಳು ಎಲ್ಲರೂ ಕೈ ಜೋಡಿಸಿ ಒಟ್ಟಿಗೆ ಕೆಲಸ ಮಾಡಬೇಕು ಎಂದು ಅವರು ಹೇಳಿದರು. ವಿವಿ ಮಾಡುವ ಎಲ್ಲ ಉತ್ತಮ ಕೆಲಸಗಳಿಗೆ ಸರಕಾರದ ನೆರವು ಇರುತ್ತದೆ. ಕಲಬುರಗಿಯಲ್ಲಿ ಮಾಹಿತಿ ತಂತ್ರಜ್ಞಾನ ಕೇಂದ್ರ ಸ್ಥಾಪಿಸಲು ನಮ್ಮ ಸರಕಾರ ಸಿದ್ಧವಾಗಿದ್ದು, ಸ್ಟಾರ್ಟ್ ಅಪ್‌ಗಳ ಸ್ಥಾಪನೆ, ಅಭಿವೃದ್ಧಿಗೂ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಶ್ವಥ್ ನಾರಾಯಣ ಭರವಸೆ ನೀಡಿದರು.

ಸಭೆಯಲ್ಲಿ ಲೋಕಸಭೆ ಸದಸ್ಯ ಉಮೇಶ್ ಜಾಧವ್, ಶಾಸಕರಾದ ಬಸವರಾಜ್ ಮತ್ತಿಮೂಡ್, ಡಾ.ಅವಿನಾಶ್ ಜಾಧವ್, ದತ್ತಾತ್ರೇಯ ಪಾಟೀಲ ರೇವೂರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X