Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮನಪಾ ನಗರ ಬಡತನ ನಿರ್ಮೂಲನಾ ಕೋಶ: 873...

ಮನಪಾ ನಗರ ಬಡತನ ನಿರ್ಮೂಲನಾ ಕೋಶ: 873 ಫಲಾನುಭವಿಗಳಿಗೆ 65 ಲಕ್ಷ ರೂ. ಮೌಲ್ಯದ ಸವಲತ್ತು ವಿತರಣೆ

ವಾರ್ತಾಭಾರತಿವಾರ್ತಾಭಾರತಿ25 Feb 2020 4:55 PM IST
share
ಮನಪಾ ನಗರ ಬಡತನ ನಿರ್ಮೂಲನಾ ಕೋಶ: 873 ಫಲಾನುಭವಿಗಳಿಗೆ 65 ಲಕ್ಷ ರೂ. ಮೌಲ್ಯದ ಸವಲತ್ತು ವಿತರಣೆ

ಮಂಗಳೂರು, ಫೆ. 25: ಮಂಗಳೂರು ಮಹಾನಗರ ಪಾಲಿಕೆಯ ನಗರ ಬಡತನ ನಿರ್ಮೂಲನಾ ಕೋಶದ ವಿವಿಧ ಯೋಜನೆಗಳಡಿ 873 ಫಲಾನುಭವಿಗಳಿಗೆ 65 ಲಕ್ಷ ರೂ. ಮೌಲ್ಯದ ವಿವಿಧ ಸಲವತ್ತುಗಳನ್ನು ಇಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ವಿತರಿಸಲಾಯಿತು.

ಗಾಲಿಕುರ್ಚಿ, ತ್ರಿಚಕ್ರ ವಾಹನ, ಶ್ರವಣ ಸಾಧನ, ಪಕ್ಕಾ ಮನೆ ನಿರ್ಮಾಣಕ್ಕೆ ಧನ ಸಹಾಯ, ಕೃತಕ ಕಾಲು, ಹೊಲಿಗೆ ಯಂತ್ರ, ಅಡುಗೆ ಅನಿಲ ಸಂಪರ್ಕ, ವಿಕಲಚೇತನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ, ಕ್ರೀಡಾ ಪ್ರೋತ್ಸಾಹ, ಶೇ. 24.10 ರಡಿ ಶೌಚಾಲಯ ನಿರ್ಮಾಣಕ್ಕೆ ಸಹಾಯಧನ ಹಾಗೂ ಮನೆ ದುರಸ್ತಿಗೆ ಸಹಾಯಧನದ ಚೆಕ್‌ಗಳನ್ನು ಫಲಾನುಭವಿಗಳಿಗೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ವೇದವ್ಯಾಸ ಕಾಮತ್ ಹಾಗೂ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಸಾಂಕೇತಿಕವಾಗಿ ಸವಲತ್ತುಗಳನ್ನು ವಿತರಿಸಿದರು.

ಸಮಾಜದ ಸರ್ವ ಜನರ ಅಭಿವೃದ್ಧಿಗಾಗಿ ಸರಕಾರ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತದೆ. ಅನ್ನ ಭಾಗ್ಯ ಯೋಜನೆ ಕಳೆದ ಆರು ವರ್ಷಗಳಿಂದ ಸರಕಾರ ನಡೆಸುತ್ತಿರುವ ಉದ್ದೇಶ ಬಡತನ ನಿರ್ಮೂಲನ, ಹಸಿವು ಮುಕ್ತಗೊಳಿಸುವುದಾಗಿದೆ. ಸರಕಾರದ ಸಂಪತ್ತು ಜನರ ತೆರಿಗೆಯಿಂದ ಸಂಗ್ರಹಿಸಲ್ಪಟ್ಟಿರುವುದು. ಆ ಹಣವನ್ನು ಸದುಪಯೋಗವಾದಾಗ ವಿಧಾನಸೌಧದಲ್ಲಿ ಬರೆಯಲಾಗಿರುವಂತೆ ಸರಕಾರದ ಕೆಲಸ ದೇವರ ಕೆಲಸ ಎಂಬ ಮಾತು ಸಾರ್ಥಕವಾಗುತ್ತದೆ ಎಂದು ಮುಖ್ಯ ಅತಿಥಿಯಾಗಿ ಮಾನಾಡಿದ ಐವನ್ ಡಿಸೋಜಾ ಹೇಳಿದರು.

ಪಾಲಿಕೆಯ ಜಂಟಿ ಆಯುಕ್ತ ಡಾ. ಸಂತೋಷ್ ಕುಮಾರ್ ಸ್ವಾಗತಿಸಿದರು. ವೇದಿಕೆಯಲ್ಲಿ ಮನಪಾ ಆರೋಗ್ಯ ಅಧಿಕಾರಿ ಡಾ. ಮಂಜಯ್ಯ ಶೆಟ್ಟಿ, ಮಾಲಿನಿ ರಾಡ್ರಿಗಸ್ ಉಪಸ್ಥಿತರಿದ್ದರು.

ಪರಿಸರ ಅಭಿಯಂತರ ಮಧು ಮನೋಹರ್ ಕಾರ್ಯಕ್ರಮ ನಿರೂಪಿಸಿದರು. ಉದ್ಘಾಟನಾ ಸಮಾರಂಭದಲ್ಲಿ ಸಾಂಕೇತಿಕವಾಗಿ ಫಲಾನುಭವಿಗಳಿಗೆ ಸವಲತ್ತು ವಿತರಿಸಲಾಯಿತು. ಬಳಿಕ ಅಧಿಕಾರಿಗಳು ಫಲಾನುಭವಿಗಳು ಕುಳಿತಲ್ಲಿಗೆ ಸಲತ್ತುಗಳನ್ನು ಹಸ್ತಾಂತರಿಸಿದರು.

ಗ್ಯಾಸ್ ಸಂಪರ್ಕ ಇಲ್ಲದಿದ್ದರೆ ತಿಳಿಸಿ: ಶಾಸಕ ವೇದವ್ಯಾಸ ಕಾಮತ್

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ‘‘ನಗರ ಪ್ರದೇಶದಲ್ಲಿ ಇನ್ನೂ ಅಡುಗೆ ಅನಿಲ ಸಂಪರ್ಕ ಹೊಂದಿಲ್ಲದ ಬಡವರು ಇರುವುದು ಬೇಸರದ ಸಂಗತಿ. ಗ್ಯಾಸ್ ಸಂಪರ್ಕ ಹೊಂದಿಲ್ಲದವರು ನನಗೆ ಅಥವಾ ಅಧಿಕಾರಿಗಳಿಗೆ ಮಾಹಿತಿ ನೀಡಿದರೆ ಅದನ್ನು ಒದಗಿಸುವ ವ್ಯವಸ್ಥೆ ಮಾಡಲಾಗುವುದು’’ ಎಂದು ಹೇಳಿದರು.

ಹಲವು ಕಾರಣಗಳಿಂದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗದವರಿಗೆ ಮುಖ್ಯವಾಹಿನಿಗೆ ತರಲು ಅವಕಾಶ ಕಲ್ಪಿಸಬೇಕು. ಅವರ ಕಣ್ಣೀರು ಒರಸುವ ಕಾರ್ಯ ಆಗಬೇಕು ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X