Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಂಬಳಕ್ಕೆ ಸೆನ್ಸಾರ್ ಅಳವಡಿಸಲು ನೆರವು:...

ಕಂಬಳಕ್ಕೆ ಸೆನ್ಸಾರ್ ಅಳವಡಿಸಲು ನೆರವು: ರಾಜೇಂದ್ರ ಕುಮಾರ್

ಎಸ್‌ಸಿಡಿಸಿಸಿ ಬ್ಯಾಂಕ್‌ನಲ್ಲಿ ಕಂಬಳವೀರ-ಓಟಗಾರರಿಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ25 Feb 2020 7:55 PM IST
share
ಕಂಬಳಕ್ಕೆ ಸೆನ್ಸಾರ್ ಅಳವಡಿಸಲು ನೆರವು: ರಾಜೇಂದ್ರ ಕುಮಾರ್

ಮಂಗಳೂರು, ಫೆ.25: ಕರಾವಳಿಯಲ್ಲಿ ನಡೆಯುವ ಕಂಬಳಕ್ಕೆ ಹೊಸ ಮಾದರಿಯ ಸೆನ್ಸಾರ್ ಅಳವಡಿಸಲು 4 ಲಕ್ಷ ರೂ. ಸಹಾಯಧನವನ್ನು ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನೀಡಲಿದೆ ಎಂದು ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದ್ದಾರೆ.

ಕಂಬಳದಲ್ಲಿ ಸಾಧನೆಗೈದ ಕಂಬಳವೀರ ಶ್ರೀನಿವಾಸ ಗೌಡ ಸಹಿತ ಐವರು ಸಮಕಾಲೀನ ಓಟಗಾರರಿಗೆ ಹಾಗೂ ಈ ಹಿಂದೆ ಸಾಧನೆ ಮಾಡಿದವರನ್ನು ಮಂಗಳವಾರ ಬ್ಯಾಂಕ್‌ನ ವತಿಯಿಂದ ಸನ್ಮಾನಿಸಿ ಅವರು ಮಾತನಾಡಿದರು.

ಕಂಬಳ ಕರೆಯ ಆರಂಭ ಹಾಗೂ ಅಂತ್ಯದಲ್ಲಿ ಸೆನ್ಸಾರ್ ಅಳವಡಿಸುವುದರಿಂದ ಪಾರದರ್ಶಕ ಫಲಿತಾಂಶ ಹಾಗೂ ಸಮಯ ಉಳಿತಾಯ ಸಾಧ್ಯವಿದೆ. ಪ್ರಸಕ್ತ ಸೆನ್ಸಾರ್‌ನ್ನು ಬಾಡಿಗೆ ಮೊತ್ತ ಅಧಿಕವಾಗಿರುವುದರಿಂದ ಇದು ಹೊರೆಯಾಗುತ್ತಿದೆ. ಆದ್ದರಿಂದ ಹೊಸ ಸೆನ್ಸಾರ್ ಖರೀದಿಗೆ ನೆರವು ಒದಗಿಸುವಂತೆ ಕಂಬಳ ಸಮಿತಿ ವಿನಂತಿಸಿದೆ. ಈ ಹಿನ್ನೆಲೆಯಲ್ಲಿ 4 ಲಕ್ಷ ರೂ. ನೆರವನ್ನು ಬ್ಯಾಂಕ್ ನೀಡಲಿದೆ ಎಂದು ಡಾ.ರಾಜೇಂದ್ರ ಕುಮಾರ್ ನುಡಿದರು.

ಸ್ವಂತ ಸೆನ್ಸಾರ್ ಹೊಂದುವುದರಿಂದ ಈಗಿನ ದರಕ್ಕಿಂತ ಪ್ರತಿ ಕಂಬಳಕ್ಕೆ ಶೇ.35ರಷ್ಟು ಆರ್ಥಿಕ ವೆಚ್ಚ ಕಡಿಮೆಯಾಗಲಿದೆ. ಕೇವಲ ಸರ್ವಿಸ್ ಚಾರ್ಜ್ ಮಾತ್ರ ಪಡೆಯಲು ಅವಕಾಶ ನೀಡಿ ಮೂಲ ಬಂಡವಾಳಕ್ಕೆ ಬ್ಯಾಂಕ್ ಪ್ರೋತ್ಸಾಹಿಸಲಿದೆ ಎಂದು ಹೇಳಿದರು.

ಓಟಗಾರರಿಗೆ ವಿಮಾ ಸೌಲಭ್ಯ: ಕಂಬಳ ಸೆನ್ಸಾರ್ ಬಳಕೆಗೆ 18 ಸಾವಿರ ರೂ. ಬಾಡಿಗೆ ನಿಗದಿಪಡಿಸಬಹುದು. ಈ ಮೊತ್ತದಲ್ಲಿ ಕನಿಷ್ಠ 100 ಮಂದಿ ಕಂಬಳ ಓಟಗಾರರಿಗೆ ವಿಮಾ ಸೌಲಭ್ಯ ಕಲ್ಪಿಸಿದರೆ, ಅದರಿಂದ ಕಂಬಳ ಓಟಗಾರರಿಗೆ ವಿಮಾ ಭದ್ರತೆ ಒದಗಿಸಿದಂತಾಗುತ್ತದೆ. ವಿಮಾ ಸೌಲಭ್ಯವನ್ನು ಎಸ್‌ಸಿಡಿಸಿಸಿ ಬ್ಯಾಂಕ್ ಒದಗಿಸಲಿದ್ದು, ಕಂಬಳ ಸಮಿತಿ ಇದರ ನಿರ್ವಹಣೆ ಮಾಡಲಿದೆ ಎಂದು ಡಾ. ರಾಜೇಂದ್ರ ಕುಮಾರ್ ಹೇಳಿದರು.

ಈ ಸಂದರ್ಭ ಬಾಂಕ್‌ನ ಉಪಾಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ನಿರ್ದೇಶಕರಾದ ಐಕಳ ದೇವಿಪ್ರಸಾದ್ ಶೆಟ್ಟಿ, ಸದಾಶಿವ ಉಳ್ಳಾಲ್, ಕಂಬಳ ಸಮಿತಿ ಅಧ್ಯಕ್ಷ ಗುಣಪಾಲ ಕಡಂಬ, ಸುಕುಮಾರ ಶೆಟ್ಟಿ, ಭಾಸ್ಕರ ಕೋಟ್ಯಾನ್, ಪ್ರಸಾದ್ ಕೌಶಲ್ಯ, ಅರುಣ್ ಶೆಟ್ಟಿ, ಸಹಕಾರಿ ಯೂನಿಯನ್ ಜಿಲ್ಲಾಧ್ಯಕ್ಷ ಚಿತ್ತರಂಜನ್ ಭಂಡಾರಿ ಉಪಸ್ಥಿತರಿದ್ದರು.

ಕಂಬಳವೀರ ಸೇರಿದಂತೆ ಸಾಧಕ ಓಟಗಾರರಿಗೆ ಸನ್ಮಾನ

ಈ ಸಂದರ್ಭ ಕಂಬಳವೀರ ಶ್ರೀನಿವಾಸ ಗೌಡ ಸಹಿತ ಸಾಧಕ ಕಂಬಳ ಓಟಗಾರರನ್ನು ಬ್ಯಾಂಕ್‌ನ ವತಿಯಿಂದ ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು. ಇತ್ತೀಚೆಗೆ ಕಂಬಳ ಓಟಗಾರರಾಗಿ ದಾಖಲೆ ನಿರ್ಮಿಸಿದ ಅಶ್ವತ್ಥಪುರ ಶ್ರೀನಿವಾಸ ಗೌಡ ಹಾಗೂ ಬಜಗೋಳಿಯ ನಿಶಾಂತ್ ಶೆಟ್ಟಿಗೆ ಬ್ಯಾಂಕ್‌ನಿಂದ ತಲಾ 25 ಸಾವಿರ ರೂ.ಗಳ ಚೆಕ್ ವಿತರಿಸಲಾಯಿತು. ಈ ಹಿಂದೆ ದಾಖಲೆ ಬರೆದ ಇರ್ವತ್ತೂರು ಆನಂದ, ಹಕ್ಕೇರಿ ಸುರೇಶ್ ಶೆಟ್ಟಿ, ಅಳದಂಗಡಿ ರವಿ ಹಾಗೂ ಪಣಪೀಲು ಪ್ರವೀಣ್ ಕೋಟ್ಯಾನ್‌ರಿಗೆ ತಲಾ 10 ಸಾವಿರ ರೂ. ಗಳ ಚೆಕ್ ನೀಡಲಾಯಿತು. ಅಲ್ಲದೆ ಹಿರಿಯ ಕಂಬಳ ಓಟಗಾರ ಪೇಜಾವರ ಭಾಸ್ಕರ್, ವೀರಕಂಬ ಜಯಂತ ಶೆಟ್ಟಿ, ನಕ್ರೆ ಜಯಕರ ಮಡಿವಾಳ, ಫಲಿಮಾರು ದೇವೇಂದ್ರ ಕೋಟ್ಯಾನ್, ಪ್ರವೀಣ್ ಶೆಟ್ಟಿ ಸಾಣೂರು, ಈದು ಅಜಿತ್ ಕುಮಾರ್, ವಿಜಯ ಕುಮಾರ್ ಕಂಗಿನಮನೆ, ಮಾರ್ನಾಡು ರಾಜೇಶ್ ಅವರನ್ನು ಅಭಿನಂದಿಸಲಾಯಿತು. ಅಲ್ಲದೆ ಯೋಗದಲ್ಲಿ ಸತತ ಗಿನ್ನೆಸ್ ದಾಖಲೆ ನಿರ್ಮಿಸಿದ ತನುಶ್ರೀ ಪಿತ್ರೋಡಿ ಅವರನ್ನು ಸನ್ಮಾನಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X