Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪಿಡಿಒಗೆ ಸಿಪಿಒ ಲಂಚದ ಬೇಡಿಕೆ ಆರೋಪ:...

ಪಿಡಿಒಗೆ ಸಿಪಿಒ ಲಂಚದ ಬೇಡಿಕೆ ಆರೋಪ: ಕಡ್ಡಾಯ ರಜೆ ಮೇಲೆ ಕಳಿಸಲು ಜಿಪಂ ಸರ್ವ ಸದಸ್ಯರ ಸಭೆ ನಿರ್ಣಯ

ಚಿಕ್ಕಮಗಳೂರು

ವಾರ್ತಾಭಾರತಿವಾರ್ತಾಭಾರತಿ25 Feb 2020 10:34 PM IST
share

ಚಿಕ್ಕಮಗಳೂರು, ಫೆ.25: ಶೃಂಗೇರಿ ಗ್ರಾಪಂ ಪಿಡಿಒ ಒಬ್ಬರಿಂದ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆಂದು ಆರೋಪಿಸಿದ ಜಿಪಂ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿ, ಅಧಿಕಾರಿಯನ್ನು ಕಡ್ಡಾಯವಾಗಿ ರಜೆ ಮೇಲೆ ಕಳುಹಿಸಬೇಕೆಂದು ಆಗ್ರಹಿಸಿದ ಮೇರೆಗೆ ಅಧಿಕಾರಿಯನ್ನು ಕಡ್ಡಾಯ ರಜೆ ಮೇಲೆ ಕಳಿಸಲು ಜಿಪಂ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಜಿಪಂ ಕಚೇರಿಯ ನಜೀರ್ ಸಾಬ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ ಅಧ್ಯಕ್ಷತೆಯಲ್ಲಿ ನಡೆದ ಸರ್ವಸದಸ್ಯರ ಸಭೆಯಲ್ಲಿ ಸದಸ್ಯ ಶಿವಶಂಕರ್ ಮಾತನಾಡಿ, ಕ್ರಿಯಾ ಯೋಜನೆ ಅನುಮೋದನೆ ಪಡೆಯಲು ಜಿಲ್ಲಾಪಂಚಾಯತ್ ಕಚೇರಿಗೆ ಎಷ್ಟು ಬಾರಿ ಬರಬೇಕೆಂದು ಪ್ರಶ್ನಿಸಿದರು.
ಸಿಪಿಒ ಕಚೇರಿಗೆ ಶೃಂಗೇರಿಯಿಂದ ಗ್ರಾಪಂ ಪಿಡಿಒ ಒಬ್ಬರು ಕ್ರಿಯಾಯೋಜನೆ ಅನುಮೋದನೆಗಾಗಿ 7 ಬಾರಿ ಬರಬೇಕಾಯಿತು. ಒಮ್ಮೆ ಬಂದಾಗ ಪಾಸ್ ಪುಸ್ತಕ ತರಲು ಹೇಳುತ್ತಾರೆ, ಅದನ್ನು ತಂದುಕೊಟ್ಟರೆ 10 ಸಾವಿರಕ್ಕೆ ಬೇಡಿಕೆ ಇಡಲಾಗುತ್ತದೆ. ಇನ್ನೊಬ್ಬರಿಂದ ಏನನ್ನು ನಿರೀಕ್ಷಿಸದೆ ಕೆಲಸ ಮಾಡುವ ಅಧಿಕಾರಿಗಳು ಇಷ್ಟು ಹಣವನ್ನು ಕೊಟ್ಟು ಅನುಮೋದನೆ ಪಡೆದುಕೊಳ್ಳಲು ಸಾಧ್ಯವೆ? ಎಂದು ಪ್ರಶ್ನಿಸಿದರು. 

ಈ ವೇಳೆ ಮಾತನಾಡಿದ ಮೂಡಿಗೆರೆ ತಾಪಂ ಅಧ್ಯಕ್ಷ ರತನ್, ಜಿಲ್ಲಾ ಪಂಚಾಯತ್‍ನಲ್ಲಿ ಯಾವುದೇ ಕೆಲಸಕ್ಕೂ ಲಂಚ ಕೊಡಬೇಕು. ಹಣಕ್ಕಾಗಿಯೇ ಕೆಲಸ ಮಾಡುತ್ತಿರುವ ಅಧಿಕಾರಿಗಳು ಆಸಕ್ತಿ ಇದ್ದರೆ ಕೆಲಸ ಮಾಡಿ, ಇಲ್ಲವೆ ಬೇರೆ ಕಡೆ ವರ್ಗಾವಣೆ ಮಾಡಿಸಿಕೊಂಡು ಹೋಗಿ ಎಂದು  ಏರು ದನಿಯಲ್ಲಿಯೇ ಮಾತನಾಡಿ, ದುಡ್ಡುಕೊಟ್ರೆ ಕೆಲಸವಾಗುತ್ತೆ ಎಂಬ ಹಣೆಪಟ್ಟಿ ಈ ಜಿಲ್ಲಾಪಂಚಾಯತ್‍ಗೆ ಬರಬಾರದು ಎಂದರು.

ಹಣ ಪಡೆದು ಕೆಲಸ ಮಾಡುವ ಅಧಿಕಾರಿಯನ್ನು ಕಡ್ಡಾಯವಾಗಿ ರಜೆ ಮೇಲೆ ಕಳುಹಿಸುವ ನಿರ್ಣಯ ಕೈಗೊಳ್ಳಬೇಕೆಂದು ಮಾಜಿ ಉಪಾಧ್ಯಕ್ಷ ರಾಮಸ್ವಾಮಿ ಸಲಹೆ ನೀಡಿದಾಗ, ಯಾವ ಕಡತ ಯಾವ ಅಧಿಕಾರಿಗಳ ಟೇಬಲ್ ಮೇಲೆ ಎಷ್ಟು ದಿನ ಇರುತ್ತದೆ ಎಂಬುದನ್ನು ಜಿಪಂ ಸಿಇಒ ಗಮನಿಸುತ್ತಿರಬೇಕೆಂದು ಜಿಪಂ ಮಾಜಿ ಉಪಾಧ್ಯಕ್ಷ ಕೆ.ಆರ್.ಆನಂದಪ್ಪ ತಿಳಿಸಿದರು.

ಯಾವ ಕಡತ ಎಷ್ಟುದಿನ ಯಾರ ಮೇಜಿನ ಮೇಲೆ ಎಷ್ಟು ದಿನಗಳವರೆಗೆ ಇರುತ್ತದೆ ಎಂಬುದನ್ನು ಗಮನಿಸಲಾಗುವುದು ಎಂದು ಜಿಪಂ ಸಿಇಒ ಪೂವಿತಾ ಇದೇ ವೇಳೆ ಹೇಳಿದಾಗ, ಸಿಪಿಒ ಅವರನ್ನು ಕಡ್ಡಾಯವಾಗಿ ರಜೆ ಮೇಲೆ ಕಳುಹಿಸಲು ನಿರ್ಣಯ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷರು ತಿಳಿಸಿದರು. ಅಲ್ಲದೇ ಪ್ರಭಾರ ವಹಿಸಿಕೊಂಡಿರುವ ಅಧಿಕಾರಿಗೆ ಮುಖ್ಯಯೋಜನಾಧಿಕಾರಿ ಹುದ್ದೆಯಲ್ಲಿ ಕಾರ್ಯನಿರ್ವಹಿಸಲು ಸಾಧ್ಯವಿದೆಯೇ ಎಂದು ಪ್ರಶ್ನಿಸಿದರು. ಇಂತಹ ವಿಷಯವನ್ನು ಸಭೆಯಲ್ಲಿ ಬಹಿರಂಗವಾಗಿ ಕೇಳುವ ಬದಲು ಕಚೇರಿಗೆ ಕರೆಸಿಕೊಂಡು ಚರ್ಚಿಸುವುದು ಸೂಕ್ತವೆಂದು ಮಾಜಿ ಉಪಾಧ್ಯಕ್ಷ ಆನಂದಪ್ಪ ಈ ವೇಳೆ ಸಲಹೆ ನೀಡಿದರು.

ಸ್ಥಾಯಿ ಸಮಿತಿ ಚುನಾವಣೆಗೆ ಸಂಬಂಧಿಸಿದ ಮತ್ತು ಕೆಲವು ಮುಖ್ಯ ವಿಚಾರಗಳನ್ನು ಮಾತ್ರ ಪ್ರಸ್ತಾಪಿಸಬೇಕೆಂದು ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ ಅವರು ಸದಸ್ಯರಿಗೆ ಹೇಳಿದಾಗ, ಈ ತಿಂಗಳ 28ಕ್ಕೆ ಸ್ಥಾಯಿ ಸಮಿತಿ ಅವಧಿ ಮುಕ್ತಾಯಗೊಳ್ಳುತ್ತಿದೆ. ಸಮಿತಿ ಅಧ್ಯಕ್ಷರು ಮತ್ತು ಸದಸ್ಯರನ್ನು ಅಂತಿಮಗೊಳಿಸುವ ಅಧಿಕಾರವನ್ನು ಅಧ್ಯಕ್ಷರಿಗೆ ನೀಡಿ ಅವರು ಕಾರ್ಯೋನ್ಮುಖರಾಗಲು ಅವಕಾಶ ಕಲ್ಪಿಸಿಕೊಡಬೇಕಾಗಿದೆ ಎಂದು ರಾಮಸ್ವಾಮಿ, ಮಹೇಶ್ ಒಡೆಯರ್, ರಾಮಸ್ವಾಮಿ ಹೇಳಿದರು. ವಿವಿಧ ಸಮಿತಿಗಳಿಗೆ ಆಕಾಂಕ್ಷಿಗಳು ತಮ್ಮ ಹೆಸರನ್ನು ನೀಡುವಂತೆ ಅಧ್ಯಕ್ಷರು ಈ ವೇಳೆ ಮನವಿ ಮಾಡಿದರು.

'ಅಮೂಲ್ಯ ಮನೆಗೆ ನೀಡುವ ಸರಕಾರಿ ಸೌಲಭ್ಯಕ್ಕೆ ಕತ್ತರಿ ಹಾಕಲು ಸರಕಾರಕ್ಕೆ ಪತ್ರ'
ದೇಶದ್ರೋಹಿ ಘೋಷಣೆಗಳನ್ನು ಕೂಗಿದವರಿಗೆ ಕಠಿಣ ಶಿಕ್ಷೆಯಾಗುವಂತಹ ಕಾನೂನು ಜಾರಿಗೆ ತರಬೇಕೆಂದು ಸರಕಾರವನ್ನು ಒತ್ತಾಯಿಸಿ ನಿರ್ಣಯ ಕೈಗೊಳ್ಳಲಾಯಿತು. ಜಿಪಂ ನಜೀರ್ ಸಾಬ್ ಸಭಾಂಗಣದಲ್ಲಿ ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ ಅಧ್ಯಕ್ಷತೆಯಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಸದಸ್ಯ ಸೋಮಶೇಖರ್, ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಪೌರತ್ವ ನೋಂದಣಿ ವಿರೋಧಿ ಕಾರ್ಯಕ್ರಮದಲ್ಲಿ ಪಾಕಿಸ್ತಾನದ ಪರವಾಗಿ ಈ ಜಿಲ್ಲೆಯ ವಿದ್ಯಾರ್ಥಿನಿ ಅಮೂಲ್ಯ ಘೋಷಣೆ ಕೂಗಿದ್ದು, ಈಗಿರುವ ಕಾನೂನಿಗಿಂತ ಕಠಿಣ ಕಾನೂನು ಜಾರಿಗೆ ತರಬೇಕಾಗಿದೆ ಎಂದು ಹೇಳಿದರು. ಆ ವಿದ್ಯಾರ್ಥಿನಿ ಕೊಪ್ಪ ತಾಲೂಕಿನವರಾಗಿದ್ದು, ಅವರ ಮನೆಗೆ ನೀಡುವ ಸೌಲಭ್ಯಗಳನ್ನು ಕಡಿತಗೊಳಿಸುವ ಅವಕಾಶ ಇದೆಯೇ ಎಂಬುದನ್ನು ಅರಿಯಲು ಸರಕಾರಕ್ಕೆ ಪತ್ರ ಬರೆದು ತಿಳಿದುಕೊಳ್ಳಬೇಕಾಗಿದೆ ಎಂದು ಉಪಾಧ್ಯಕ್ಷ ವಿಜಯಕುಮಾರ್ ಹೇಳಿದರು.

ಸಭೆ ಮುಂದೂಡಲು ಆಗ್ರಹ
ಅಧಿಕಾರಿಗಳು ಸಭೆಯಲ್ಲಿ ಸರಿಯಾಗಿ ಪಾಲ್ಗೊಳ್ಳದಿರುವುದರಿಂದ ಸಭೆಯನ್ನು ಮುಂದೂಡಬೇಕೆಂದು ಜಿಲ್ಲಾ ಪಂಚಾಯತ್ ಸದಸ್ಯ ಪ್ರಭಾಕರ್ ಒತ್ತಾಯಿಸಿದರು. ಸದಸ್ಯರಿಗೆ ಸ್ಥಾಯಿ ಸಮಿತಿ ವರದಿ ನೀಡಿಲ್ಲ, ಇದು ಸಭೆನಾ? ಎಂದು ಪ್ರಶ್ನಿಸಿದರು. ಆಗ ಸಮಜಾಯಿಸಿ ನೀಡಲು ಅಧ್ಯಕ್ಷರು ಮುಂದಾದಾಗ ಸಬೂಬು ಹೇಳುವುದು ಬೇಡ ಎಂದು ತಿಳಿಸಿದರು.

ಸ್ಥಾಯಿ ಸಮಿತಿ ಅಧಿಕಾರ ಈ ತಿಂಗಳು ಅಂತ್ಯವಾಗುತ್ತದೆ. ಹಾಗಾಗಿ ಮಧ್ಯಾಹ್ನದ ವರೆಗೆ ಸಭೆ ನಡೆಸುವುದು ಸೂಕ್ತ ಎಂದು ಸದಸ್ಯ ಸೋಮಶೇಖರ್ ಹೇಳಿದರು. ಜಿಲ್ಲಾ ಉತ್ಸವದಲ್ಲಿ ಕೆಲವು ಅಧಿಕಾರಿಗಳಿಗೆ ಜವಾಬ್ದಾರಿ ನೀಡಿರುವುದರಿಂದ ಅವರೆಲ್ಲ ಸಭೆಗೆ ಬರಲು ಸಾಧ್ಯವಾಗಿಲ್ಲ ಮಧ್ಯಾಹ್ನದವರೆಗೆ ಸಭೆ ನಡೆಸೋಣ ಎಂದು ಶಿವಶಂಕರ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X