Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶುಕ್ರವಾರ ಚಿಕ್ಕಮಗಳೂರು ಜಿಲ್ಲಾ...

ಶುಕ್ರವಾರ ಚಿಕ್ಕಮಗಳೂರು ಜಿಲ್ಲಾ ಉತ್ಸವಕ್ಕೆ ಚಾಲನೆ: ತಳಿರು ತೋರಣಗಳಿಂದ ಸಿಂಗಾರಗೊಂಡ ನಗರ

►ಆಕರ್ಷಣೆಯ ಕೇಂದ್ರವಾದ ಜಿಲ್ಲಾ ಆಟದ ಮೈದಾನ ►ಕಲಾತಂಡಗಳಿಂದ ತಾಲೀಮು ಜೋರು

ವಾರ್ತಾಭಾರತಿವಾರ್ತಾಭಾರತಿ27 Feb 2020 10:02 PM IST
share
ಶುಕ್ರವಾರ ಚಿಕ್ಕಮಗಳೂರು ಜಿಲ್ಲಾ ಉತ್ಸವಕ್ಕೆ ಚಾಲನೆ: ತಳಿರು ತೋರಣಗಳಿಂದ ಸಿಂಗಾರಗೊಂಡ ನಗರ

ಚಿಕ್ಕಮಗಳೂರು, ಫೆ.27: ಕಳೆದ ಒಂದು ತಿಂಗಳನಿಂದ ಜಿಲ್ಲಾಡಳಿತ ತನ್ನೆಲ್ಲಾ ಕೆಲಸ ಕಾರ್ಯಗಳನ್ನು ಬದಿಗಿಟ್ಟು ಸಿದ್ಧತೆ ಕೈಗೊಂಡಿದ್ದ ಅದ್ಧೂರಿ ಜಿಲ್ಲಾ ಉತ್ಸವ ಕಾರ್ಯಕ್ರಮ ನಾಳೆಯಿಂದ ಮಾ.1ರವರೆಗೆ ಮೂರು ದಿನಗಳ ಕಾಲ ನಗರದಲ್ಲಿ ನಡೆಯಲಿದ್ದು, ಶುಕ್ರವಾರ ಉತ್ಸವದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಮೂರು ದಿನಗಳ ಕಾಲದ ಉತ್ಸವಕ್ಕೆ ಇಡೀ ನಗರ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದ್ದು, ವಿದ್ಯುತ್ ದೀಪಾಲಂಕಾರದಿಂದ ನಗರ ಝಗಮಗಿಸುತ್ತಿದೆ.

ಫೆ.28ರಿಂದ ಮಾ.1ರವರೆಗೆ ನಗರದಲ್ಲಿ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿರುವ ಜಿಲ್ಲಾ ಉತ್ಸವದಲ್ಲಿ ವಿವಿಧ ಸಾಂಸ್ಕೃತಿಕ, ಜಾನಪದ, ಸಂಗೀತ ಉತ್ಸವಗಳೂ ಸೇರಿದಂತೆ ಚಿತ್ರಕಲಾ ಪ್ರದರ್ಶನ, ವಸ್ತು ಪ್ರದರ್ಶನ ಮತ್ತು ಮಾರಾಟ, ಬೀದಿ ಉಸ್ತವ, ಆಹಾರಮೇಳ, ನಾಟಕ, ಸಿನೆಮೋತ್ಸವ ಹಾಗೂ ಹೆಲಿಟೂರಿಸಮ್, ಜಲಸಾಹಸ, ಪ್ಯಾರಾ ಮೋಟರ್ ಗ್ಲೈಡಿಂಗ್‍ನಂತಹ ವಿವಿಧ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ. ಈ ಎಲ್ಲ ಉತ್ಸವಗಳಿಗೂ ಜಿಲ್ಲಾಡಳಿತ ಹಾಗೂ ವಿವಿಧ ಸಮಿತಿಗಳು ಕಳೆದೊಂದು ತಿಂಗಳಿನಿಂದ ಭರದಿಂದ ಸಿದ್ಧತೆ ಕೈಗೊಂಡಿದ್ದು, ಬಹುತೇಕ ಪೂರ್ಣಗೊಂಡಿವೆ.

ಮೂರು ದಿನಗಳ ಕಾಲ ಹಗಲು ರಾತ್ರಿ ನಡೆಯುವ ಜಿಲ್ಲಾ ಉತ್ಸವ (ಚಿಕ್ಕಮಗಳೂರು ಹಬ್ಬ)ದ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಇಡೀ ನಗವನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿದೆ. ನಗರದ ಪ್ರಮುಖ ರಸ್ತೆಗಳಾದ ಐಜಿ ರಸ್ತೆ, ಎಂಜಿ ರಸ್ತೆಗಳನ್ನು ವಿದ್ಯುತ್ ದೀಪಾಲಂಕಾರದಿಂದ ಸಿಂಗರಿಸಿಲಾಗಿದ್ದು, ಮೂರು ದಿನಗಳ ಕಾಲ ಬೀದಿ ಉತ್ಸವ ನಡೆಯುವ ಎಂಜಿ ರಸ್ತೆಯ ಉದ್ದಕ್ಕೂ ಛತ್ರಿಗಳನ್ನು ಬಳಸಿ ವಿದ್ಯುತ್ ದೀಪಗಳಿಂದ ಮಾಡಿರುವ ಸಿಂಗಾರ ನೋಡುಗರ ಕಣ್ಮನ ಸೆಳೆಯುತ್ತಿದೆ.

ನಗರದ ಪ್ರವೇಶದ್ವಾರಗಳಲ್ಲಿ ನಿರ್ಮಿಸಿರುವ ಸ್ವಾಗತ ಕಮಾನುಗಳು ಪ್ರವಾಸಿಗರು ಹಾಗೂ ಸಾರ್ವಜನಿಕರನ್ನು ಸ್ವಾಗತ ಕೋರುತ್ತಿವೆ. ನಗರದಾದ್ಯಂತ ಪ್ರಮುಖ ವೃತ್ತಗಳಲ್ಲಿ ಹೂವಿನಾಕೃತಿಯ ವಿದ್ಯುತ್ ದೀಪಗಳ ಕಲಾಕೃತಿಗಳು ಸಾರ್ವಜನಿಕರನ್ನು ಸೆಳೆಯುತ್ತಿವೆ. ರಸ್ತೆಯ ಎರಡೂ ಬದಿಗಳಲ್ಲಿ ಸಿಂಗರಿಸಲಾಗಿರುವ ಬಣ್ಣ ಬಣ್ಣದ ವಿದ್ಯುತ್ ದೀಪಗಳು ನಗರದ ಸಾರ್ವಜನಿಕರ ಕಣ್ಣಿಗೆ ಹಬ್ಬದ ವಾತಾವರಣ ಮೂಡಿಸುತ್ತಿವೆ. ಇನ್ನು ನಗರದ ಎಂಜಿ ರಸ್ತೆಯಲ್ಲಿ ನಾಲ್ಕು ವೇದಿಕೆಗಳನ್ನು ಹಾಕಲಾಗಿದ್ದು, ವೇದಿಕೆಗಳಲ್ಲಿ ಮೂರು ದಿನಗಳ ಕಾಲ ಬೀದಿ ಉತ್ಸವಗಳು ನಡೆಯಲಿವೆ. ಪ್ರತಿಭೆ ಇರುವ ಯಾರೇ ಆದರೂ ಸ್ಥಳದಲ್ಲೇ ಹೆಸರು ನೋಂದಾಯಿಸಿಕೊಂಡು ಬೀದಿ ಉತ್ಸವದಲ್ಲಿ ಪ್ರದರ್ಶನ ನೀಡಲು ಅವಕಾಶ ಕಲ್ಪಿಸಲಾಗಿದೆ.

ಉತ್ಸವದ ಅಂಗವಾಗಿ ಫೆ.28ರಿಂದ ಮಾ.1ರವರೆಗೆ ಮೂರು ದಿನಗಳ ಕಾಲ ನಗರದಲ್ಲಿ ಆಹಾರ ಮೇಳ ನಡೆಯಲಿದ್ದು, ರಾಜ್ಯ ಹಾಗೂ ಹೊರ ರಾಜ್ಯಗಳ ವಿವಿಧ ಬಗೆಯ ಆಹಾರ ಖಾದ್ಯಗಳನ್ನು ಸಾರ್ವಜನಿಕರಿಗೆ ಉಣ ಬಡಿಸಲು ನೂರಾರು ಮಳಿಗೆಗಳನ್ನು ತೆರೆಯಲಾಗಿದೆ. ಆಹಾರ ಮೇಳಕ್ಕಾಗಿ ನಗರದ ಅರಣ್ಯ ಇಲಾಖೆ ಕಚೇರಿ ಎದುರಿನ ರಸ್ತೆಯಿಂದ ಹೊಸಮನೆ ವೃತ್ತ ಮಾರ್ಗವಾಗಿ ಪ್ರವಾಸಿ ಮಂದಿರದವರೆಗೆ ನೂರಕ್ಕೂ ಹೆಚ್ಚು ಮಳಿಗೆಗಳನ್ನು ತೆರೆಯಲಾಗಿದೆ. ಸರತಿ ಸಾಲಿನಲ್ಲಿ ನಿಂತಂತೆ ಕಾಣುವ ಪಗೋಡಾಗಳಿಂದ ನಿರ್ಮಿಸಲಾಗಿರುವ ಒಂದೇ ಗಾತ್ರದ ಆಹಾರಮೇಳದ ಮಳಿಗೆಗೆಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದ್ದು, ಸಾರ್ವಜನಿಕರ ಓಡಾಟಕ್ಕೆ ವಿಶೇಷ ವ್ಯವಸ್ಥೆಯನ್ನೂ ಮಾಡಲಾಗಿದೆ. ಆಹಾರ ಮೇಳ ಆಯೋಜಿಸಿರುವ ಎರಡೂ ಬದಿಯಲ್ಲಿ ಆಹಾರ ಪ್ರಿಯರನ್ನು ಸ್ವಾಗತಿಸುವ ಆಕರ್ಷಕ ಕಮಾನುಗಳನ್ನು ನಿರ್ಮಿಸಲಾಗಿದೆ. ಇನ್ನು ಜಿಲ್ಲಾ ಆಟದ ಮೈದಾನದ ಆವರಣದಲ್ಲೇ ನೂರಕ್ಕೂ ಹೆಚ್ಚು ವಸ್ತು ಪ್ರದರ್ಶನದ ಮಳಿಗೆಗಳನ್ನು ನಿರ್ಮಿಸಲಾಗಿದ್ದು, ಈ ಮಳಿಗೆಗಳ ಪೈಕಿ ಸರಕಾರಿ ಇಲಾಖೆಗಳ ಮಳಿಗೆಗೆಳಲ್ಲಿ ಪ್ರಾತ್ಯಕ್ಷಿಕೆ ಮೂಲಕ ಸರಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ಮಳಿಗೆಗಳು ಗಮನ ಸೆಳೆಯುತ್ತಿವೆ. ಅಲ್ಲದೇ ಜಿಲ್ಲಾ ಆಟದ ಮೈದಾನದಲ್ಲೇ ಇರುವ ಚಿತ್ರಕಲಾ ವಿವಿ ಆವರಣದಲ್ಲಿ ಜಿಲ್ಲೆ, ರಾಜ್ಯ ಹಾಗೂ ಹೊರ ರಾಜ್ಯಗಳ ಕಲಾಕುಂಚದಲ್ಲಿ ಆಕರ್ಷಕ ಚಿತ್ರಕಲೆಗಳು ಮೂಡುತ್ತಿದ್ದು, ಕಳೆದ ಮೂರು ದಿನಗಳಿಂದ ರಚಿಸಲಾಗಿರುವ ಕಲಾವಿದ ಕಲಾಕೃತಿಗಳು ಶುಕ್ರವಾರ ಸಾರ್ವಜನಿಕರ ವೀಕ್ಷಣೆಗೆ ಮುಕ್ತವಾಗಲಿದೆ.

ಶುಕ್ರವಾರ ಮಧ್ಯಾಹ್ನ ಜಿಲ್ಲಾ ಉತ್ಸವಕ್ಕೆ ಅಧಿಕೃತವಾಗಿ ಚಾಲನೆ ಸಿಗಲಿದ್ದು, ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ನಾಡಿನ ಹೆಸರಾಂತ ಜಾನಪದ ಕಲಾ ತಂಡಗಳ ಮೆರವಣಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ನಡೆಯಲಿದೆ. ಕಲಾ ತಂಡಗಳ ಮೆರವಣಿಗೆ ಜಿಲ್ಲಾ ಆಟದ ಮೈದಾನ ತಲುಪಿದ ಬಳಿಕ ಚಿಕ್ಕಮಗಳೂರು ಹಬ್ಬದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು, ಇದೇ ವೇಳೆ ಆಹಾರ ಮೇಳ, ವಸ್ತು ಪ್ರದರ್ಶನ, ನಾಟಕೋತ್ಸವ, ಸಿನೆಮೋತ್ಸವ ಸೇರಿದಂತೆ ಹೆಲಿಟೂರಿಸಂ, ಪ್ಯಾರಾ ಮೋಟರ್ ಗ್ಲೈಡಿಂಗ್, ಜಲ ಸಾಹಸ, ಭೂ ಸಾಹಸ ಕ್ರೀಡೆಗಳು ಆರಂಭವಾಗಲಿವೆ.

ಜಿಲ್ಲಾ ಆಟದ ಮೈದಾನದಲ್ಲಿ ನಿರ್ಮಿಸಲಾಗಿರುವ ಉತ್ಸವದ ಮುಖ್ಯ ವೇದಿಕೆ ಅತ್ಯಾಕರ್ಷಕವಾಗಿದ್ದು, 7 ಸಾವಿರ ಮಂದಿ ಏಕಕಾಲಕ್ಕೆ ಕಾರ್ಯಕ್ರಮ ವೀಕ್ಷಣೆ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ. ವೇದಿಕೆ ಮುಂಭಾಗದಲ್ಲಿ ಸಾವಿರಾರು ಜನರು ಕುಳಿತು ಕಾರ್ಯಕ್ರಮ ವೀಕ್ಷಣೆ ಮಾಡಲು ಆಸನಗಳನ್ನು ಹಾಕಲಾಗಿದ್ದು, ಗಣ್ಯರು, ವಿಶೇಷ ಗಣ್ಯರಿಗೆ ಪ್ರತ್ಯೇಕ ಆಸನಗಳನ್ನು ಹಾಕಲಾಗಿದೆ. ಮೂರು ದಿನಗಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಲು 3 ಸಾವಿರ ಕಲಾವಿದರು ಹಾಗೂ 2 ಸಾವಿರ ವಿದ್ಯಾರ್ಥಿಗಳು ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳ ಕಲಾವಿದರೂ ಸೇರಿದಂತೆ ಸ್ಥಳೀಯ ಕಲಾವಿದರು ನಗರದ ವಿವಿಧ ವಸತಿ ಗೃಹಗಳು, ರೆಸಾರ್ಟ್‍ಗಳು, ಛತ್ರಗಳು, ಕಲ್ಯಾಣ ಮಂಟಪಗಳಲ್ಲಿ ಗುರುವಾರವೇ ಬೀಡುಬಿಟ್ಟಿದ್ದಾರೆ. 

ಉತ್ಸವ ಹಿನ್ನೆಲೆಯಲ್ಲಿ ಗುರುವಾರ ನಗರದಲ್ಲಿ ಪ್ರವಾಸಿಗರ ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದು, ನಗರದ ಐಜಿ ರಸ್ತೆಯಲ್ಲಿ ವಾಹನಗಳ ಪಾರ್ಕಿಂಗ್ ಗುರುವಾರ ಭಾರೀ ಸಂಖ್ಯೆಯಲ್ಲಿತ್ತು. ನಗರದಲ್ಲಿ ಜನರ ಓಡಾಟ ವಾಹನಗಳ ದಟ್ಟಣೆ ಎಂದಿಗಿಂತ ಹೆಚ್ಚಿತ್ತು. 

ಜಿಲ್ಲಾ ಉತ್ಸವದ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ಮಧ್ಯಾಹ್ನ ಜಿಲ್ಲಾ ಆಟದ ಮೈದಾನದಲ್ಲಿ ನಡೆಯಲಿದ್ದು, ಉದ್ಘಾಟನಾ ಕಾರ್ಯಕ್ರಮವನ್ನು ಸಿಎಂ ಯಡಿಯೂರಪ್ಪ ಆಗಮಿಸಬೇಕಿದ್ದು, ಬಜೆಟ್ ಪೂರ್ವಭಾವಿ ಸಭೆ ಹಿನ್ನೆಲೆಯಲ್ಲಿ ಅವರು ಉದ್ಘಾಟನಾ ಕಾರ್ಯಕ್ರಮಕ್ಕೆ ಬರುತ್ತಾರೋ ಇಲ್ಲವೋ ಎಂಬ ಗೊಂದಲ ಉಂಟಾಗಿದೆ. ಗುರುವಾರ ಸಂಜೆ 7ರವರೆಗೆ ಸಿಎಂ ಜಿಲ್ಲಾ ಪ್ರವಾಸದ ಬಗ್ಗೆ ಜಿಲ್ಲಾಡಳಿತ ಯಾವುದೇ ಅಧಿಕೃತ ಮಾಹಿತಿ ನೀಡಿರಲಿಲ್ಲ. ಒಂದು ವೇಳೆ ಸಿಎಂ ಬಾರದಿದ್ದಲ್ಲಿ ಸಚಿವ ಸಿ.ಟಿ.ರವಿ ಅವರೇ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆಂದು ತಿಳಿದು ಬಂದಿದೆ.

ನಗರದ ಹೃದಯ ಭಾಗದಲ್ಲಿ ಮೂರು ದಿನಗಳ ಕಾಲ ಹಗಲು ರಾತ್ರಿ ವಿವಿಧ ಸಾಂಸ್ಕೃತಿಕ, ಜಾನಪದ ಕಾರ್ಯಕ್ರಮಗಳು ನಡೆಯುವ ಜಿಲ್ಲಾ ಆಟದ ಮೈದಾನವಂತೂ ಇಡೀ ಉತ್ಸವದ ಆಕರ್ಷಣೆಯಾಗಿದೆ. ಕ್ರೀಡಾಂಗಣದ ಸುತ್ತಲೂ ವಿದ್ಯುತ್ ದೀಪಾಲಂಕಾರದಿಂದ ಮೈದಾನ ಝಗಮಗಿಸುತ್ತಿದ್ದು, ಮೈದಾನದ ಮಧ್ಯದಲ್ಲಿ ಅತ್ಯಾಕರ್ಷಕವಾದ ಬೃಹತ್ ವೇದಿಕೆಯನ್ನು ಎತ್ತರದ ಅಡಿಪಾಯದ ಮೇಲೆ ನಿರ್ಮಿಸಲಾಗಿದ್ದು, ಇಡೀ ವೇದಿಕೆ ನಾಡಿನ ಸಂಸ್ಕೃತಿಯನ್ನು ಬಿಂಬಿಸುವಂತೆ ಕಂಗೊಳಿಸುತ್ತಿದೆ. ವೇದಿಕೆಯಲ್ಲಿ ಒಮ್ಮೆಗೆ 500 ಮಂದಿ ಕಲಾ ಪ್ರದರ್ಶನ ನೀಡಬಹುದಾಗಿದೆ. ಇಂದಿನಿಂದ ಮೂರು ದಿನಗಳ ಕಾಲ ಹಗಲು ರಾತ್ರಿ ನೂರಾರು ಸಾಂಸ್ಕೃತಿಕ ಕಾರ್ಯಕ್ರಮಗಳು ಈ ವೇದಿಕೆಯಲ್ಲಿ ನಡೆಯಲಿದ್ದು, ಕಾರ್ಯಕ್ರಮಗಳಿಗೆ ಅಗತ್ಯವಿರುವ ಆಕರ್ಷಕ ಬೆಳಕಿನ ವ್ಯವಸ್ಥೆಯನ್ನೂ ಮಾಡಲಾಗಿದೆ. ಎಷ್ಟು ದೂರ ನಿಂತು ನೋಡಿದರೂ ವೇದಿಕೆಯ ಕಾರ್ಯಕ್ರಮ ಕಾಣುವಂತೆ ವೇದಿಕೆ ನಿರ್ಮಿಸಲಾಗಿದೆ. ಶುಕ್ರವಾರ ಮಧ್ಯಾಹ್ನ ನಡೆಯುವ ಜಿಲ್ಲಾ ಉತ್ಸವದ ಉದ್ಘಾಟನೆ ವೇಳೆ ನಾಡಿನ ವಿವಿಧ ಜಾನಪದ ಕಲೆಗಳನ್ನು ಪ್ರದರ್ಶಿಸುವ ವಿವಿಧ ಕಲಾ ತಂಡಗಳು ಒಂದೇ ಬಾರಿಗೆ ವೇದಿಕೆಯಲ್ಲಿ ನೀಡುವ ಸಾಂಸ್ಕೃತಿಕ ಕಾರ್ಯಕ್ರಮದ ತಾಲೀಮು ಗುರುವಾರ ಬೆಳಗ್ಗೆಯಿಂದ ಸಂಜೆವರೆಗೆ ಇದೇ ವೇದಿಕೆಯಲ್ಲಿ ನಡೆಯಿತು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X