Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹೇಡಿ ಸಾವರ್ಕರ್ ಜತೆ ನನ್ನ ಹೋಲಿಕೆ ಸಲ್ಲ:...

ಹೇಡಿ ಸಾವರ್ಕರ್ ಜತೆ ನನ್ನ ಹೋಲಿಕೆ ಸಲ್ಲ: ಎಚ್.ಎಸ್.ದೊರೆಸ್ವಾಮಿ

‘ನಕಲಿ ಹೋರಾಟಗಾರ ಎನ್ನುವುದಕ್ಕೆ ಸಾಕ್ಷ್ಯ ಕೊಡಿ’

ವಾರ್ತಾಭಾರತಿವಾರ್ತಾಭಾರತಿ29 Feb 2020 8:23 PM IST
share
ಹೇಡಿ ಸಾವರ್ಕರ್ ಜತೆ ನನ್ನ ಹೋಲಿಕೆ ಸಲ್ಲ: ಎಚ್.ಎಸ್.ದೊರೆಸ್ವಾಮಿ

ಬೆಂಗಳೂರು, ಫೆ.29: ಸ್ವಾತಂತ್ರ ಚಳವಳಿಯಲ್ಲಿ ಪಾಲ್ಗೊಂಡು ತಪ್ಪು ಮಾಡಿದೆ ಎಂದು ಹೇಡಿಯಂತೆ ತಪ್ಪೊಪ್ಪಿಗೆ ಪತ್ರ ಬರೆದುಕೊಟ್ಟ ಸಾವರ್ಕರ್ ಜತೆ ನನ್ನನ್ನು ಹೋಲಿಕೆ ಮಾಡುವುದು ಸರಿಯಲ್ಲ ಎಂದು ಹಿರಿಯ ಸ್ವಾತಂತ್ರ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಹೇಳಿದ್ದಾರೆ.

ನಗರದ ಶಾಸಕರ ಭವನದಲ್ಲಿ ದಿವ್ಯಚಂದನ ಪ್ರಕಾಶನ ಹೊರ ತಂದಿರುವ ಎನ್.ಪದ್ಮನಾಭರಾವ್ ಅವರ ‘ಸ್ವಾತಂತ್ರ್ಯ ಹೋರಾಟದ ಕರ್ನಾಟಕದ ಕಣ್ಮಣಿಗಳು’ ಪುಸ್ತಕ ಲೋಕಾರ್ಪಣೆ ಮಾಡಿ ಮಾತನಾಡಿದರು.

ಆರೆಸ್ಸೆಸ್‌ನ ಸ್ಥಾಪಕ ಮುಖಂಡ ಸಾವರ್ಕರ್ ಖಡ್ಗ ಮತ್ತು ಬಂದೂಕುಗಳನ್ನು ಹಿಡಿದು ಸ್ವಾತಂತ್ರ್ಯ ಹೋರಾಟ ನಡೆಸಿದ್ದರು. ಅನಂತರ ಬ್ರಿಟಿಷರು ಆತನನ್ನು ಬಂಧಿಸಿದ್ದ ಸಂದರ್ಭದಲ್ಲಿ ನಾನು ಈ ಹೋರಾಟದಲ್ಲಿ ಪಾಲ್ಗೊಂಡು ತಪ್ಪು ಮಾಡಿದೆ ಎಂದು ಹೇಡಿಯಂತೆ ಪತ್ರ ಬರೆದುಕೊಟ್ಟರು. ಅವರು ಯಾಕೆ ಹಾಗೆ ಮಾಡಿದರು ಎಂಬ ಪ್ರಶ್ನೆಯಿದೆ. ಹೀಗಾಗಿ, ಅವರೊಂದಿಗೆ ನನ್ನ ಹೋಲಿಕೆ ಸಲ್ಲ ಎಂದರು.

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಲಕ್ಷಾಂತರ ಜನರು ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ. ಗಾಂಧಿ, ನೆಹರು, ಭಗತ್‌ಸಿಂಗ್, ಲಾಲಾ ಲಜಪತ್ ರಾಯ್, ತಿಲಕ್, ಸುಭಾಷ್ ಚಂದ್ರಬೋಸ್ ಹೀಗೆ ಅನೇಕರು ತಮ್ಮ ಜೀವನವನ್ನು ಮುಡಿಪಾಗಿಟ್ಟು ಹೋರಾಟ ನಡೆಸಿದ್ದಾರೆ. ಅವರಿಗೆ ಮತ್ತೊಬ್ಬರನ್ನು ಹೋಲಿಕೆ ಮಾಡುವುದು ಸರಿಯಲ್ಲ ಎಂದು ನುಡಿದರು.

ಸ್ವಾತಂತ್ರ್ಯ ಹೋರಾಟದ ಕುರಿತು ಕನಿಷ್ಠ ಜ್ಞಾನವಿಲ್ಲದವರೆಲ್ಲರೂ, ಆ ಚಳವಳಿಯ ಬಗ್ಗೆ ಮಾತನಾಡುತ್ತಿದ್ದಾರೆ. ಇಂದು ನನ್ನನ್ನು ನಕಲಿ ಹೋರಾಟಗಾರ ಎಂದು ಹೇಳುತ್ತಾರೆ. ಅದಕ್ಕೆ ಸಾಕ್ಷ್ಯ ಬೇಕು. ಯಾವುದೇ ಪುರಾವೆ ಇಲ್ಲದೆ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅಂಧಕಾರದಲ್ಲಿ ಮುಳುಗಿ ಇಂತಹ ಪ್ರಚೋದನಾತ್ಮಕ ಹೇಳಿಕೆ ನೀಡುತ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಮಹಾತ್ಮಗಾಂಧೀಜಿಯ ಭಾಷಣಗಳು ದೇಶದಲ್ಲಿ ಲಕ್ಷಾಂತರ ಜನರಿಗೆ ಪ್ರೇರಣೆ ನೀಡಿವೆ. ಅದರಲ್ಲಿ ನಾನೂ ಸೇರಿದಂತೆ ಸಾವಿರಾರು ಜನರು ಇದ್ದೇವೆ. ರಾಷ್ಟ್ರದ ಪ್ರತಿಯೊಬ್ಬ ಹೋರಾಟಗಾರರಿಗೂ ಅವರದ್ದೇ ಆದ ಸ್ಥಾನವಿರುತ್ತದೆ. ಸ್ವಾತಂತ್ರ ಹೋರಾಟದಲ್ಲಿ ನನ್ನದೂ ಅಳಿಲು ಸೇವೆಯಿದೆ. ಹಾಗಂತ ಇತರರೊಂದಿಗೆ ಹೋಲಿಕೆ ಮಾಡುವ ಅವಶ್ಯಕತೆ ಇಲ್ಲ ಎಂದರು.

ಶಾಸಕ ಎ.ಟಿ.ರಾಮಸ್ವಾಮಿ ಮಾತನಾಡಿ, ದೇಶಕ್ಕೆ ಸ್ವಾಂತಂತ್ರ ತಂದುಕೊಡಲು ಸಾವಿರಾರು ಜನ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು. ಅಂತಹವರಿಗೆ ಅಗೌರವ ತೋರಿದಲ್ಲಿ ಭವಿಷ್ಯದ ಪೀಳಿಗೆಗೆ ಮಾರ್ಗದರ್ಶಕರ ಕೊರತೆಯಾಗಲಿದೆ. ಅಧಿಕಾರ, ಜಾತಿ ಪ್ರಭಾವದಿಂದಾಗಿ ಈ ರೀತಿ ಹೇಳಿಕೆಗಳನ್ನು ನೀಡುತ್ತಿದ್ದು, ಅವರಿಗೆ ಜನರೇ ಬುದ್ಧಿ ಕಲಿಸುವಂತಾಗಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನಿವೃತ್ತ ಲೋಕಾಯುಕ್ತ ನ್ಯಾ. ಎನ್.ಸಂತೋಷ್ ಹೆಗ್ಡೆ, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್, ಪುಸ್ತಕದ ಲೇಖಕ ಎನ್.ಪದ್ಮನಾಭರಾವ್, ದಿವ್ಯಚಂದನ ಪ್ರಕಾಶಕ ರಂಗಾಚಾರಿ ಸೇರಿದಂತೆ ಹಲವರಿದ್ದರು.

'ಆ ಗೌರವ ಎಲ್ಲಿಂದ ಬಂತು?'

ಸಮಾಜದಲ್ಲಿ ಶ್ರೀಮಂತಿಕೆ ಮತ್ತು ಅಧಿಕಾರ ಇದ್ದಲ್ಲಿ ಎಲ್ಲ ರೀತಿಯ ಗೌರವಗಳು ಲಭ್ಯವಾಗುತ್ತವೆ. ಆದರೆ, ಆ ಗೌರವ ಎಲ್ಲಿಂದ ಬಂತು ಎಂಬುದನ್ನು ಯಾರೂ ಕೇಳುತ್ತಿಲ್ಲ. ಅಲ್ಲದೆ, ಜೈಲಿಗೆ ಹೋಗಿ ಬಂದವರನ್ನು ಸನ್ಮಾನ ಮಾಡುತ್ತಿದ್ದಾರೆ. ಮೌಲ್ಯಗಳ ಕುಸಿತದಿಂದಾಗಿ ಈ ರೀತಿಯ ವ್ಯವಸ್ಥೆ ನಿರ್ಮಾಣವಾಗಿದೆ. ಪಠ್ಯದಲ್ಲಿ ವೌಲ್ಯಗಳನ್ನು ಅಳವಡಿಸಬೇಕಾದ ಅಗತ್ಯವಿದೆ.

-ನ್ಯಾ. ಎನ್.ಸಂತೋಷ್ ಹೆಗ್ಡೆ, ನಿವೃತ್ತ ಲೋಕಾಯುಕ್ತ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X