ಹುತಾತ್ಮ ಯೋಧ ಗುರು ಅವರ ಸ್ಮಾರಕ ನಿರ್ಮಾಣಕ್ಕೆ 25 ಕೋಟಿ ರೂ.ಬಿಡುಗಡೆ
ಬೆಂಗಳೂರು, ಫೆ. 29: ‘ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಮಂಡ್ಯದ ವೀರ ಯೋಧ ಎಚ್.ಗುರು ಅವರ ಸ್ಮಾರಕ ನಿರ್ಮಾಣಕ್ಕಾಗಿ ರಾಜ್ಯ ಸರಕಾರ 25ಲಕ್ಷ ರೂ.ಗಳನ್ನು ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ’ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ಶನಿವಾರ ಸರಣಿ ಟ್ವೀಟ್ ಮಾಡಿರುವ ಅವರು, ಈಗಾಗಲೇ ಮದ್ದೂರು ತಹಸಿಲ್ದಾರ್ ಸ್ಮಾರಕದ ಸ್ಥಳ ಗುರುತಿಸಿದ್ದು, ಅಲ್ಲಿ ಸ್ಮಾರಕ, ಉದ್ಯಾನವನ ನಿರ್ಮಿಸಲಾಗುವುದು. ಜನರಿಗೆ ವೀರ ಯೋಧನ ತ್ಯಾಗ, ಬಲಿದಾನಗಳ ಸಂದೇಶವನ್ನು ಸಾರಿ ಹೇಳುವ ರೀತಿಯಲ್ಲಿ ಸ್ಮಾರಕ ನಿರ್ಮಾಣವಾಗಲಿದೆ ಎಂದು ಹೇಳಿದ್ದಾರೆ.
‘ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು, ಕಾಶ್ಮೀರದ ಪುಲ್ವಾಮಾ ಘಟನೆಯಲ್ಲಿ ತಮ್ಮ ಪ್ರಾಣವನ್ನು ಬಲಿದಾನ ಮಾಡಿದ ಹುತಾತ್ಮ ಯೋಧ ಗುರು ಅವರ ಕುಟುಂಬದ ಸದಸ್ಯರು ಭೇಟಿ ಮಾಡಿದರು. ಗುರು ಅವರ ಸ್ಮಾರಕ ನಿರ್ಮಾಣಕ್ಕೆ ಸರಕಾರ 25 ಲಕ್ಷ ರೂ.ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಸಿಎಂಗೆ ಕೃತಜ್ಞತೆ ಸಲ್ಲಿಸಿದರು’ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.
Next Story





