ದ.ಕ. ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ಸಿಖಂದರ್ ಪಾಶಾ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಮತ್ತು ಕುಟುಂಬ ಕಲ್ಯಾಣಧಿಕಾರಿಯಾಗಿ ಡಾ. ಸಿಖಂದರ್ ಪಾಶಾ ಅವರು ಶನಿವಾರ ಅಧಿಕಾರ ಸ್ವೀಕರಿಸಿದರು.
ಜಿಲ್ಲಾ ಆರೋಗ್ಯಾಧಿಕಾರಿಯಾಗಿದ್ದ ಡಾ. ರಾಮಕೃಷ್ಣ ರಾವ್ ಅವರು ನಿವೃತ್ತಿಗೊಂಡ ಹಿನ್ನೆಲೆಯಲ್ಲಿ ಡಾ. ಸಿಖಂದರ್ ಪಾಶಾ ಅವರನ್ನು ನೇಮಿಸಿ, ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಮೂಳೆ ಮತ್ತು ಕೀಲು (ಓರ್ಥೋಪೆಡಿಕ್ಸ್) ಶಾಸ್ತ್ರದಲ್ಲಿ ಎಂ.ಡಿ. ಸ್ನಾತಕೋತ್ತರ ಪದವಿ ಪಡೆದಿರುವ ಡಾ. ಸಿಖಂದರ್ ಪಾಶಾ, ಜಿಲ್ಲಾ ಆರೋಗ್ಯ ಇಲಾಖೆ ಕಚೇರಿಯಲ್ಲಿ ಅಧಿಕಾರಿಯಾಗಿದ್ದರು. ಈ ಹಿಂದೆ ವಿಟ್ಲ ಹಾಗೂ ಬಂಟ್ವಾಳ ಸರಕಾರಿ ಆಸ್ಪತ್ರೆ, ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.
Next Story





