ಕಾರ್ಮಿಕರು ಕೂಡ ದೇಶದ ಬೆನ್ನೆಲುಬು: ದಿನಕರ ಬಾಬು

ಉಡುಪಿ, ಮಾ.1: ರೈತರ ಹಾಗೆ ಕಾರ್ಮಿಕರು ಕೂಡ ಈ ದೇಶದ ಬೆನ್ನೆಲುಬು ಆಗಿದ್ದಾರೆ. ದೇಶದ ಅಭಿವೃದ್ದಿಯಲ್ಲಿ ಕಾರ್ಮಿಕರ ಪಾತ್ರ ಅತ್ಯಂತ ಗಮನಾರ್ಹವಾಗಿದೆ ಎಂದು ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಹೇಳಿದ್ದಾರೆ.
ಉಡುಪಿ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಸಂಯುಕ್ತ ಆಶ್ರಯದಲ್ಲಿ ರವಿವಾರ ಮಣಿಪಾಲದ ರಜತಾದ್ರಿಯ ಅಟಲ್ ಬಿಹಾರಿ ವಾಜ ಪೇಯಿ ಸಬಾಂಗಣದಲ್ಲಿ ಆಯೋಜಿಸಲಾದ ಕಾರ್ಮಿಕ ಸಮ್ಮನ ದಿನಾಚರಣೆ ಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಕಾರ್ಮಿಕರ ಸೇವೆಯನ್ನು ಗುರುತಿಸಿ ಅವರನ್ನು ಸನ್ಮಾನಿಸುವ ಮೂಲಕ ಅವರ ಶ್ರಮಕ್ಕೆ ಗೌರವ ನೀಡದಂತಾಗಿದೆ ಮತ್ತು ಅವರು ತಮ್ಮ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮಾಡಲು ಪ್ರೇರೆಪಣೆ ನೀಡಿದಂತಾಗುತ್ತದೆ. ಸಂಘಟಿತ ಕಾರ್ಮಿಕರಿಗೆ ದೊರೆಯುವ ಸೌಲಭ್ಯಗಳನ್ನು ಅಸಂಘಟಿತ ಕಾರ್ಮಿಕರಿಗೂ ದೊರಕಿಸುವ ನಿಟ್ಟಿನಲ್ಲಿ ಸಂಬಂಘಪಟ್ಟ ಎಲ್ಲಾ ಇಲಖೆಗಳು ಕಾರ್ಯೋನ್ಮುಖ ವಾಗೇಕು ಎಂದರು.
ಜಿಪಂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ ಮಾತನಾಡಿ, ಅಸಂಘಟಿತ ಕಾರ್ಮಿಕರಿಗೆ ಪಿಂಚಣಿ ಸೌಲಭ್ಯ ಮತ್ತು ಇತರೆ ಸರಕಾರಿ ಸೌಲಭ್ಯಗಳು ದೊರೆಯಬೇಕು. ಅವರ ಅನಿಯಮಿತ ಕೆಲಸದ ಬದಲು ಕೆಲಸಕ್ಕೆ ಸಮಯವನ್ನು ನಿಗಧಿಪಡಿಸಿ, ಅವರ ಹಿತರಕ್ಷಣೆ ಮಾಡಬೇಕು ಎಂದು ಹೇಳಿದರು.
ಉಡುಪಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಮಾತನಾಡಿ, ಅಸಂಘಟಿತ ಕಾರ್ಮಿಕರು ಎಲೆಮರೆಯ ಕಾಯಿಯಂತೆ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡುತ್ತಿದ್ದಾರೆ. ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ದ್ರತಾ ಮಂಡಳಿ ಮೂಲಕ ಅವರಿಗೆ ಅಗತ್ಯ ಸೌಲಭ್ಯ ದೊರಕಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳು ನಡೆಯುತ್ತಿವೆ ಎಂದು ತಿಳಿಸಿದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ಬಾಲಕೃಷ್ಣ ಮಾತನಾಡಿ, ಜಿಲ್ಲೆಯಲ್ಲಿ ಅಸಂಘಟಿತ ಕಾರ್ಮಿಕರ ನೊಂದಣಿಗೆ 2000 ಅರ್ಜಿಗಳು ಬಂದಿದ್ದು, ರಾಜ್ಯ ಅಸಂಘಟಿತ ಕಾರ್ಮಿಕರ ಭದ್ರತಾ ಮಂಡಳಿ ಮೂಲಕ 500 ಮಂದಿಗೆ ಸ್ಮಾರ್ಟ್ ಕಾರ್ಡ್ ಮಂಜೂರಾಗಿದೆ. ಉಳಿದವರಿಗೆ ಶೀಘ್ರದಲ್ಲಿ ಸ್ಮಾಟ್ರ್ ಕಾರ್ಡ್ ನೀಡಲಾಗುವುದು ಎಂದರು.
ಕಾರ್ಮಿಕ ನಿರೀಕ್ಷಕ ಜೀವನ್ ಕುಮಾರ್ ಸ್ವಾಗತಿಸಿದರು. ಸತ್ಯನಾರಾಂುಣ್ ವಂದಿಸಿದರು. ಪ್ರಶಾಂತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಅಸಂಘಟಿತ ಕಾರ್ಮಿಕರಿಗೆ ಪುರಸ್ಕಾರ
ಜಿಲ್ಲೆಯ ಅಸಂಘಟಿತ ವಲಯದ ಹಮಾಲಿ, ಗೃಹ ಕೆಲಸ, ಟೈಲರ್, ಮೆಕಾನಿಕ್, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು, ವಾಹನ ಚಾಲಕರು(ತ್ರಿಚಕ್ರ), ವಾಹನ ಚಾಲಕರು(ನಾಲ್ಕು ಚಕ್ರ) ವರ್ಗಗಳ 11 ಮಂದಿಗೆ ಪ್ರಥಮ ಬಹುಮಾನವಾಗಿ 15,000ರೂ. ಮೌಲ್ಯದ ಚಿನ್ನದ ಪದಕ, 11 ಮಂದಿಗೆ ದ್ವಿತೀಯ ಬಹುಮಾನವಾಗಿ 10,000ರೂ. ಮೌಲ್ಯದ ಬೆಳ್ಳಿ ಪದಕ, 11 ಮಂದಿಗೆ ತೃತೀಯ ಬಹುಮಾನವಾಗಿ 8,000ರೂ. ಮೌಲ್ಯದ ಬೆಳ್ಳಿ ಪದಕ ಹಾಗೂ ಎಲ್ಲಾ ವರ್ಗದ ಒಟ್ಟು 79 ಮಂದಿಗೆ ವಿಶೇಷ ಪುರಸ್ಕಾರವಾಗಿ 1000 ರೂ. ನೀಡಿ ಗೌರವಿಸಲಾಯಿತು.







