ದ್ವಿಚಕ್ರ ವಾಹನ ನಡುವೆ ಢಿಕ್ಕಿ: ಇಬ್ಬರಿಗೆ ಗಾಯ
ಪುತ್ತೂರು : ತಾಲೂಕಿನ ಕೆದಂಬಾಡಿ ಗ್ರಾಮದ ತಿಂಗಳಾಡಿಯಲ್ಲಿ ಪುತ್ತೂರು-ಬೆಳ್ಳಾರೆ ರಸ್ತೆಯಲ್ಲಿ ದ್ವಿಚಕ್ರ ವಾಹನಗಳೆರಡರ ನಡುವೆ ಢಿಕ್ಕಿ ಸಂಭವಿಸಿ ಇಬ್ಬರು ಗಾಯಗೊಂಡ ಘಟನೆ ರವಿವಾರ ಸಂಭವಿಸಿದೆ.
ಕುಂಬ್ರ ಕಡೆಗೆ ಬರುತ್ತಿದ್ದ ಸ್ಕೂಟರ್ ಮತ್ತು ಮಾಡಾವು ಕಡೆಗೆ ತೆರಳುತ್ತಿದ್ದ ಬೈಕ್ ನಡುವೆ ಢಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ಸ್ಕೂಟರ್ ಸವಾರರಾದ ಕೆದಂಬಾಡಿಯ ಅಬ್ದುಲ್ ಹಮೀದ್ ಮತ್ತು ಮಹಮ್ಮದ್ ಅಶ್ರಫ್ ಎಂಬವರು ಗಾಯಗೊಂಡಿದ್ದಾರೆ.
ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





