Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೊರಿಮಾರ್ ಸೈಂಟ್ ಜೋಸೆಫ್ ಚರ್ಚ್ ನಲ್ಲಿ...

ಬೊರಿಮಾರ್ ಸೈಂಟ್ ಜೋಸೆಫ್ ಚರ್ಚ್ ನಲ್ಲಿ ಕ್ರೈಸ್ತ ಶಿಕ್ಷಣ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ1 March 2020 10:40 PM IST
share
ಬೊರಿಮಾರ್ ಸೈಂಟ್ ಜೋಸೆಫ್ ಚರ್ಚ್ ನಲ್ಲಿ ಕ್ರೈಸ್ತ ಶಿಕ್ಷಣ ದಿನಾಚರಣೆ

ಬಂಟ್ವಾಳ:  ಕ್ರೈಸ್ತ ಶಿಕ್ಷಣ ನಮ್ಮ ಬದುಕಿಗೆ ಸುಂದರವಾದ ರೂಪ ನೀಡುತ್ತದೆ, ಇದರ ಮಹತ್ವವನ್ನು ಅರಿಯುವುದರ ಜೊತೆಗೆ  ಸಮಾಜದಲ್ಲಿ ಮಾದರಿ ಪ್ರಜೆಗಳಾಗಿ‌ ಬಾಳ್ವೆ ನಡೆಸಬೇಕು ಎಂದು  ಸೂರಿಕುಮೇರು  ಬೊರಿಮಾರ್ ಸೈಂಟ್ ಜೋಸೆಫ್ ಚರ್ಚಿನ ಧರ್ಮಗುರು‌ ವಂ.ಫಾದರ್ ಗ್ರೆಗರಿ ಪಿರೇರಾ ಹೇಳಿದರು.

ಸೂರಿಕುಮೇರು‌ ವಿನಲ್ಲಿರುವ  ಸೈಂಟ್ ಜೋಸೆಫ್‌ ಚರ್ಚ್ ನಲ್ಲಿ ರವಿವಾರ  ದಿವ್ಯ ಬಲಿಪೂಜೆಯನ್ನು ನೆರವೇರಿಸಿದ ಬಳಿಕ ಕ್ರೈಸ್ತ ಶಿಕ್ಷಣ ದಿನಾಚರಣೆಯ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಆಶೀರ್ವಚನ‌ ನೀಡಿದರು.  ಚರ್ಚ್ ನ ಪಾಲನಾ ಮಂಡಳಿ ಉಪಾಧ್ಯಕ್ಷ ಎಲಿಯಾಸ್  ಪಿರೇರಾ ಮಾತನಾಡಿ,  ಕ್ರೈಸ್ತ ಶಿಕ್ಷಣ ಸಾರಿ ಹೇಳುವ ಎಲ್ಲಾ ಸಂಸ್ಕಾರಗಳನ್ನು ಅಳವಡಿಸುವುದರ ಜೊತೆಗೆ ತಂದೆತಾಯಿಗೆ ವಿಧೇಯರಾಗಿ ಒಳ್ಳೆಯ ಜೀವನ‌ ನಡೆಸುವಂತೆ ಕರೆ ನೀಡಿದರು.  ಸಿಸ್ಟರ್ ನ್ಯಾನ್ಸಿ, ಮೇರಿ ಡಿ'ಸೋಜ, ಅನಿತಾ ಮಾರ್ಟೀಸ್, ಸ್ಟೀವನ್ ಪಾಯ್ಸ್, ಲೂಸಿ ಡಿಕುನ್ಹಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿಶಿಷ್ಟವಾಗಿ ಆಯೋಜನೆಗೊಂಡಿದ್ದ ಕ್ರೈಸ್ತ ಶಿಕ್ಷಣ ದಿನಾಚರಣೆಯ ಅಂಗವಾಗಿ ಬಲಿಪೂಜೆಯ  ಸಂದರ್ಭ ವಿದ್ಯಾರ್ಥಿಗಳು  ಕ್ರೈಸ್ತ ಶಿಕ್ಷಣ ಪಡೆದಿರುವುದಕ್ಕೆ ಕೃತಜ್ಞತಾಪೂರ್ವಕವಾಗಿ ದೇವರಿಗೆ ಕಾಣಿಕೆಯನ್ನು  ಅರ್ಪಿಸಿದರು.     ಬಳಿಕ ವಿದ್ಯಾರ್ಥಿಗಳು ಬೈಬಲ್ ನಿಂದ ಆಯ್ದ ವಿಚಾರಗಳಿಗೆ ಸಂಬಂಧಿಸಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿದರು. 

ಇದೇ ಸಂದರ್ಭ ದಲ್ಲಿ  ಚರ್ಚ್ ನಲ್ಲಿ  ಕ್ರೈಸ್ತ ಶಿಕ್ಷಣ ಪರೀಕ್ಷೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ತರಗತಿವಾರು ಸನ್ಮಾನಿಸಲಾಯಿತು.  ಕ್ರೈಸ್ತ ಶಿಕ್ಷಣದಲ್ಲಿ ಚಿನ್ನದ ಪದಕ ಪಡೆದ ಜೆನಿಷ್ ಮಾರ್ಟಿಸ್ ಹಾಗೂ ಮನೆಮಂದಿಯನ್ನು ಗೌರವಿಸಲಾಯಿತು. ಕರ್ನಾಟಕ ಮಂಗಳೂರು ಕೊಂಕಣಿ ಸಂಸ್ಥೆಯಿಂದ ಆಯೋಜಿಸಿದ್ದ ಡಿಪ್ಲೊಮಾ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಶಿಕ್ಷಕಿ ಐಡಾ ಲಸ್ರಾದೊ ಪ್ರಮಾಣಪತ್ರ ನೀಡಿ ಗೌರವಿಸಿದರು.

ಕ್ರೈಸ್ತ ಶಿಕ್ಷಣವನ್ನು ಬೋಧಿಸುತ್ತಿರುವ ಎಲ್ಲಾ ಶಿಕ್ಷಕರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.  ರೋಷನ್ ಬೊನಿಫಾಸ್ ಮಾರ್ಟಿಸ್ ಹಾಗೂ ಮೆಲಿಟಾ ಪಾಯ್ಸ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X