Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಾಸನದಲ್ಲಿ ವಿಶ್ವ ಮಾನವ ಕೇಂದ್ರ...

ಹಾಸನದಲ್ಲಿ ವಿಶ್ವ ಮಾನವ ಕೇಂದ್ರ ಸ್ಥಾಪನೆ: ಮಾಜಿ ಪ್ರಧಾನಿ ದೇವೇಗೌಡ

ವಾರ್ತಾಭಾರತಿವಾರ್ತಾಭಾರತಿ1 March 2020 11:05 PM IST
share
ಹಾಸನದಲ್ಲಿ ವಿಶ್ವ ಮಾನವ ಕೇಂದ್ರ ಸ್ಥಾಪನೆ: ಮಾಜಿ ಪ್ರಧಾನಿ ದೇವೇಗೌಡ

ಹಾಸನ: ಮಾ.1: ಹಾಸನ ನಗರದಲ್ಲಿ ವಿಶ್ವಮಾನವ ಕೇಂದ್ರವನ್ನು ಸ್ಥಾಪಿಸಲು ಪ್ರಯತ್ನಿಸಲಾಗುವುದು. ಅದರ ನೇತೃತ್ವವನ್ನು ತಾವೇ  ವಹಿಸಿಕೊಳ್ಳುವುದಾಗಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರು ಭರವಸೆ ನೀಡಿದರು.

ನಗರದ ಮಹಾವೀರ ಭನದಲ್ಲಿ ಡಾ.ಎ.ಸಿ ಮುನಿವೆಂಕಟೇಗೌಡ ಚಾರಿಟೇಬಲ್ ಟ್ರಸ್ಟ್, ಬೆಂಗಳೂರಿನ ಆಶ್ರಯ ಸೆಂಟರ್ ಫಾರ್ ಟ್ರಾನ್ಸ್ ಫರ್ಮೇಷನ್ ಮತ್ತು ಡಾ.ಎಸಿಎಂ ನೆನಪಿನ ಬಳಗ ವತಿಯಿಂದ ಆಯೋಜಿಸಿದ್ದ ಡಾ. ಎಸಿಎಂ ಸ್ಮರಣೆ  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಗತ್ತಿನಲ್ಲಿ ಶಾಂತಿ ಕದಡುವಂತಹ ಘಟನೆಗಳು ನಡೆಯುತ್ತಿರುವ ಹಿನ್ನೆಲೆ ಕುವೆಂಪು ಅವರ ವಿಶ್ವಮಾನವ ಸಂದೇಶವನ್ನು ಜಗತ್ತಿಗೆ ಸಾರಲು ಹಾಸನದಲ್ಲೂ ವಿಶ್ವಮಾನವ ಕೇಂದ್ರ ಸ್ಥಾಪಿಸಬೇಕು ಎಂದು ಡಾ. ಎಸಿಎಂ ಕನಸು ಕಂಡಿದ್ದರು. ಅದರಂತೆ ಜಿಲ್ಲೆಯಲ್ಲಿ ವಿಶ್ವಮಾನವ ಕೇಂದ್ರ ಸ್ಥಾಪಿಸಲು ಪ್ರಯತ್ನಿಸುವುದಾಗಿ ತಿಳಿಸಿದರು.

ಡಾ. ಎ.ಸಿ. ಮುನಿವೆಂಕಟೇಗೌಡರು ಸಮಾಜ ಸೇವೆಯನ್ನು ಮೈಗೂಡಿಸಿಕೊಂಡಿದ್ದ ವ್ಯಕ್ತಿ, ಜಿಲ್ಲೆ ಅಷ್ಟೇ ಅಲ್ಲದೆ ಅಕ್ಕ ಪಕ್ಕದ ಜಿಲ್ಲೆಗಳಿಂದ ಬರುವರೋಗಿಗಳಿಗೆ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡಿದ ಆದರ್ಶ ವ್ಯಕ್ತಿ,  ಕೊನೆಗೆ ತಮ್ಮ ಪಾರ್ಥಿವ ಶರೀರವನ್ನು ಕೂಡ ಮೈಸೂರಿನ ವೈದ್ಯಕೀಯ ಕಾಲೇಜಿಗೆ ದಾನ ಮಾಡಿದ ಕರುಣಾಮಯಿ ಎಂದು ಶ್ಲಾಘಿಸಿದರರು.

ತಮ್ಮ ಜೀವನದಲ್ಲಿ ಮನಿವೆಂಕಟೇಗೌಡರಂತಹ ನಿಸ್ವಾರ್ಥ ಸೇವೆಯ ವ್ಯಕ್ತಿಯನ್ನು ಬೇರೆಲ್ಲೂ ನೋಡಿಲ್ಲ. ಸಂಜೀವಿನಿ ಸಹಕಾರಿ ಆಸ್ಪತ್ರೆ ಸ್ಥಾಪಿಸಿ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡಿದ್ದರು. ಸೋಲು ಗೆಲುವಿನ ನಡುವೆ ತಮಗೆ ಮಾರ್ಗದರ್ಶನ ಮಾಡಿದ್ದಾರೆ. ಯಾವುದೇ ಸ್ಥಾನ ಮಾನಕ್ಕೂ ಆಸೆಪಡದೆ ನಿಸ್ವಾರ್ಥ ಸೇವೆ ಸಲ್ಲಿಸಿದ್ದರು ಎಂದು ಅವರು ಸ್ಮರಿಸಿದರು. 

ಉದ್ಯಮಿ ಕುಮಾರ್ ಮಾತನಾಡಿ, ಡಾ. ಮುನಿವೆಂಕಟೇಗೌಡರು ಅಗಲಿಕೆ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಅವರು ಮಾಡಿರುವ ಸಮಾಜ ಸೇವೆ ಅನನ್ಯ ಎಂದು ಅವರೊಂದಿಗಿನ ತಮ್ಮ ಒಡನಾಟವನ್ನು  ಹಂಚಿಕೊಂಡರು.

ವೈದ್ಯ ಡಾ. ನಾಗರಾಜ್ ಮಾತನಾಡಿ, ಮುನಿವೆಂಕಟೇಗೌರು ಅದ್ಭುತ ಕ್ರೀಡಾಪಟು, ವಾಲೀಬಾಲ್ ಅವರ ನೆಚ್ಚಿನ ಆಟವಾಗಿತ್ತು. ಅಲ್ಲದೆ ಕ್ರಿಕೆಟ್, ಟೆನ್ನಿಸ್ ಕ್ರೀಡೆಯಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದರು. ಕರುಣಾಮಯಿಯಾಗಿದ್ದ ಎಸಿಎಂ ವೈದ್ಯ ವೃತ್ತಿಯ ಜೊತೆಗೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಅಜಾತಶತ್ರುವಾಗಿದ್ದರು.  ಹಲವು ಜನಪರ ಕಾರ್ಯಕ್ರಮಗಳನ್ನು ಆಯೋಜಿಸಿ ಹಾಸನದ ಮನೆಮಾತಾಗಿದ್ದರು ಎಂದು ಹೇಳಿದರು.

ಸಮಾಜ ಸೇವಕ ಎಸ್.ಎಸ್. ಪಾಷಾ ಮಾತನಾಡಿ, ಹಾಸನ ಜಿಲ್ಲೆಯನ್ನು ಮಾದರಿ ಜಿಲ್ಲೆ  ಮಾಡಬೇಕು ಎಂಬ ಕನಸು ಕಂಡಿದ್ದರು. ಸಂಜೀವಿನಿ ಸಹಕಾರಿ ಆಸ್ಪತ್ರೆ ಸ್ಥಾಪಿಸುವ ಮೂಲಕ ಬಡವರಿಗೆ ಕಡಿಮೆ ದರದಲ್ಲಿ ಚಿಕಿತ್ಸೆ ದೊರೆಯುವಂತೆ ಮಾಡಿದ್ದರು. ಶಾಂತಿನಿಕೇತನ ಮಾದರಿಯಲ್ಲಿ ಹಾಸನದಲ್ಲೂ ವಿಶ್ವ ಮಾನವನ ಕೇಂದ್ರ ಸ್ಥಾಪಿಸಬೇಕು ಹಾಗೂ ಸಂಶೋಧನಾ ಕೇಂದ್ರವನ್ನು ಸ್ಥಾಪಿಸಬೇಕು ಎಂಬುದು ಎಸಿಎಂ ಕನಸಾಗಿತ್ತು. ಅದನ್ನು ಜಿಲ್ಲೆಯ ಎಲ್ಲಾ ಸಮಾನ ಮನಸ್ಕರು ಸೇರಿ ನನಸು ಮಾಡಬೇಕಿದೆ ಎಂದರು.

ಡಾ. ಮುನಿವೆಂಕಟೇಗೌಡ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷೆ ಕೆ.ಆರ್. ಜಯಲಕ್ಷ್ಮಿ ಮಜನಿವೆಂಕಟೇಗೌಡರು ಮಾತನಾಡಿ, ಮುನಿವೆಂಕಟೇಗೌಡ ಅಭಿಮಾನಿಗಳು ಸೇರಿ ಅವರು ಇಷ್ಟಪಡುತ್ತಿದ್ದ ಕ್ರೀಡೆ, ಸಂಗೀತ ಕಾರ್ಯಕ್ರಮ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಿ ಮುನಿವೆಂಕಟೇಗೌಡರ ಸ್ಮರಣೆ ಮಾಡುತ್ತಿರುವುದು ಅಪಾರ ಸಂತೋಷ ತಂದಿದ್ದು ಕಾರ್ಯಕ್ರಮದ ಎಲ್ಲಾ ಆಯೋಜಕರಿಗು ಧನ್ಯವಾದ ಸಲ್ಲಿಸುವುದಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಹಾಸನ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಜಿ.ಎಲ್ ಮುದ್ದೇಗೌಡ, ಜಿಲ್ಲಾ ವೀರಶೈವ ಲಿಂಗಾಯತ ಮುಖಂಡ ಬಿ.ಪಿ ಐಸಾಮಿಗೌಡ, ಮಾಜಿ ನಗರಸಭೆ ಅಧ್ಯಕ್ಷ ಚನ್ನವೀರಪ್ಪ, ಸ್ವಾತಂತ್ರ್ಯ ಹೋರಾಟಗಾರ ಎಚ್.ಎಂ ಶಿವಣ್ಣ, ಆರ್.ಟಿ. ದ್ಯಾವೇಗೌಡ, ಜಿ.ಪಂ ಉಪಾಧ್ಯಕ್ಷ ಎಚ್.ಪಿ ಸ್ವರೂಪ್ ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X