ಪತ್ರಕರ್ತರ ರಾಜ್ಯ ಸಮ್ಮೇಳನದ ಪ್ರಚಾರ ವಾಹನಕ್ಕೆ ಚಾಲನೆ

ಮಂಗಳೂರು, ಮಾ. 2: ಪತ್ರಕರ್ತರ ರಾಜ್ಯ ಸಮ್ಮೇಳನದ ಪ್ರಚಾರ ವಾಹನಕ್ಕೆ ದ.ಕ. ಜಿಪಂ ಸಿಇಒ ಡಾ.ಸೆಲ್ವಮಣಿ ಆರ್. ಸೋಮವಾರ ಪ್ರೆಸ್‌ಕ್ಲಬ್ ಮುಂಭಾಗದಲ್ಲಿ ಚಾಲನೆ ನೀಡಿದರು.
ಈ ಪ್ರಚಾರ ವಾಹನ ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿ 5 ದಿನಗಳ ಕಾಲ ತೆರಳಿ ಪ್ರಚಾರ ನಡೆಸಲಿದೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಸಮ್ಮೇಳನ ಸಮಿತಿಯ ಸಂಚಾಲಕ ಜಗನಾಥ್ ಶೆಟ್ಟಿ ಬಾಳ, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಆನಂದ್ ಶೆಟ್ಟಿ, ನಿಸರ್ಗ ಪಬ್ಲಿಸಿಟಿಯ ಮಂಜುನಾಥ್, ಪತ್ರಕರ್ತರಾದ ವಿಜಯ ಪಡು, ಆರೀಫ್ ಪಡುಬಿದ್ರೆ, ಆರ್.ಸಿ.ಭಟ್, ಭಾಸ್ಕರ ಕಟ್ಟ ಮತ್ತಿತರರು ಉಪಸ್ಥಿತರಿದ್ದರು.
Next Story





