ಕರಾವಳಿಯ ಯುವಕರು ಅಧಿಕ ಸಂಖ್ಯೆಯಲ್ಲಿ ಸೇನೆಗೆ ಸೇರಿ: ಎಡಿಸಿ
ಎ.4ರಿಂದ 14ರವರೆಗೆ ಉಡುಪಿಯಲ್ಲಿ ಸೇನಾ ನೇಮಕಾತಿ ರ್ಯಾಲಿ

ಉಡುಪಿ, ಮಾ.2: ಭಾರತೀಯ ಸೇನೆಗೆ ಸೇರುವ ಮೂಲಕ ದೇಶಸೇವೆ ಮಾಡಲು ಇಚ್ಚಿಸುವ ಉತ್ಸಾಹಿ ಉಡುಪಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರಕನ್ನಡ, ದ.ಕನ್ನಡ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆ ಗಳ ತರುಣರಿಗಾಗಿ ಉಡುಪಿಯ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಎಪ್ರಿಲ್ 4ರಿಂದ 14ರವರೆಗೆ ಸೇನಾ ನೇಮಕಾತಿ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿದ್ದು, ಈ ರ್ಯಾಲಿಯಲ್ಲಿ ಜಿಲ್ಲೆಯ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಹೇಳಿದ್ದಾರೆ.
ಸೋಮವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೇನಾ ನೇಮಕಾತಿ ರ್ಯಾಲಿಯ ಪೂರ್ವಭಾವಿ ಸಭೆಯನ್ನುದ್ಧೇಶಿಸಿ ಅವರು ಮಾತನಾಡುತಿದ್ದರು.
ಸೇನಾ ನೇಮಕಾತಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಫೆ.16ರಿಂದ ಮಾ.20ರವರೆಗೆ ಅವಕಾಶವಿದ್ದು, ಇದುವರೆಗೂ 15 ಸಾವಿರ ಅ್ಯರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ. ಆದರೆ ಇವರಲ್ಲಿ ಹೊರ ಜಿಲ್ಲಾ ಅ್ಯರ್ಥಿಗಳ ಸಂಖ್ಯೆಯೇ ಹೆಚ್ಚಿದ್ದು, ಜಿಲ್ಲೆಯ ಯುವಕರ ಭಾಗವಹಿಸುವಿಕೆ ತೀರಾ ಕಡಿಮೆ ಇದೆ ಎಂದವರು ವಿವರಿಸಿದರು.
ಸೇನೆಗೆ ಸೇರಿ ದೇಶಸೇವೆ ಮಾಡುವುದು ಗೌರವದ ವಿಚಾರ. ಸೇನೆಗೆ ಸೇರ್ಪಡೆ ಗೊಂಡ ಯುವಕರಿಗೆ ತರಬೇತಿಯ ಮೊದಲ ತಿಂಗಳಲ್ಲೇ 38 ಸಾವಿರ ರೂ. ವೇತನದ ಜೊತೆಗೆ ಹಲವು ರಿಯಾಯತಿ ಸೌಲ್ಯಗಳನ್ನು ನೀಡಲಾಗುತ್ತದೆ. ಆದರೂ ಜಿಲ್ಲೆಯ ಯುವಕರಲ್ಲಿ ಸೇನೆಗೆ ಸೇರುವ ಬಗ್ಗೆ ಆಸಕ್ತಿ ಕಂಡು ಬರುವುದಿಲ್ಲ. ಈ ನಿಟ್ಟಿನಲ್ಲಿ ಜಿಲ್ಲೆಯ ಯುವಕರು ಸೇನಾ ನೇಮಕಾತಿ ರ್ಯಾಲಿ ಯಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತಾಗಲು ಈ ಬಾರಿ ಉಡುಪಿಯಲ್ಲೇ ರ್ಯಾಲಿಯನ್ನು ಆಯೋಜಿಸಲಾಗಿದೆ. ಕರಾವಳಿಯ ಯುವಕರು ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಪ್ರೇರೇಪಣೆ ನೀಡುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಸೇನಾ ರ್ಯಾಲಿಯಲ್ಲಿ ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ಉಡುಪಿ, ದ.ಕನ್ನಡ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಕನಿಷ್ಠ 30 ಸಾವಿರ ಅ್ಯರ್ಥಿಗಳು ಭಾಗವಹಿಸುವ ನಿರೀಕ್ಷೆ ಇದೆ. 17ರಿಂದ 23 ವರ್ಷದೊಳಗಿನ ವಯೋಮಾನದ ಅವಿವಾಹಿತ ಯುವಕರಿಗೆ ಸೋಲ್ಜರ್ ಜನರಲ್ ಡ್ಯೂಟಿ (ಆಲ್ ಆರ್ಮ್ಸ್), ಸೋಲ್ಜರ್ ಟೆಕ್ನಿಕಲ್, ಸೋಲ್ಜರ್ ಟೆಕ್ ನರ್ಸಿಂಗ್ ಅಸಿಸ್ಟೆಂಟ್/ ನರ್ಸಿಂಗ್ ಸಹಾಯಕ ಪಶುವೈದ್ಯ, ಸೋಲ್ಜರ್ ಕ್ಲರ್ಕ್/ ಸ್ಟೋರ್ ಕೀಪರ್ ಟೆಕ್ನಿಕಲ್ (ಆಲ್ ಆರ್ಮ್ಸ್), 10ನೇ ತರಗತಿ ಪಾಸ್ ಆದವರಿಗೆ ಸೋಲ್ಜರ್ ಟ್ರೇಡ್ಸ್ಮನ್ (ಆಲ್ ಆರ್ಮ್ಸ್), ಮತ್ತು 8ನೇ ತರಗತಿ ತೇರ್ಗಡೆಗೊಂಡವರಿಗೆ ಸೋಲ್ಜರ್ ಟೇಡ್ನ್ಮನ್ (ಆ್ ಆರ್ಮ್ಸ್) ಹುದ್ದೆಗಳು ಲಭ್ಯವಿದೆ.
ಆನ್‌ಲೈನ್ ಮೂಲಕ -www.joinindianarmy.nic.in -ನಲ್ಲಿ ಹೆಸರು ನೋಂದಾಯಿಸಬಹುದಾಗಿದ್ದು, ಆನ್‌ಲೈನ್ ಅರ್ಜಿ ಸಲ್ಲಿಸಲು ಮಾರ್ಚ್ 20 ರವರೆಗೆ ಅವಕಾಶವಿರುತ್ತದೆ. ಆನ್‌ಲೈನ್ ಮೂಲಕ ನೋಂದಾಯಿಸಲ್ಪಟ್ಟ ಅ್ಯರ್ಥಿಗಳಿಗೆ ಮಾತ್ರ ರ್ಯಾಲಿಯಲ್ಲಿ ಭಾಗವಹಿಸಲು ಅವಕಾಶ ನೀಡಲಾ ಗುವುದು. ರ್ಯಾಲಿಯಲ್ಲಿ ಭಾಗವಹಿಸಲು ಅಡ್ಮಿಟ್ ಕಾರ್ಡ್ ಕಡ್ಡಾಯವಾಗಿದ್ದು, ಮಾರ್ಚ್ 24ರಂದು ಕಾರ್ಡ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಸೇನಾ ನೇಮಕಾತಿಯ ನಿರ್ದೇಶಕ ಕರ್ನಲ್ ಫಿರ್ಧೋಶ್ ಪಿ ದುಬಾಶ್ ಮಾಹಿತಿ ನೀಡಿದರು.
ರ್ಯಾಲಿಯ ದಿನ ಅಭ್ಯರ್ಥಿಗಳಿಗೆ ಬೆಳಗಿನ ಉಪಹಾರ, ತಂಗುವ ವ್ಯವಸ್ಥೆ, ಶೌಚಗೃಹ, ಕುಡಿಯುವ ನೀರಿನ ಸೌಲ್ಯ, ಸ್ವಚ್ಚತೆ, ಶ್ಯಾಮಿಯಾನ, ಬ್ಯಾರಿಕೇಡ್ ಅಳವಡಿಕೆ, ಲೈಟ್ ವ್ಯವಸ್ಥೆ, ತುರ್ತು ಪರಿಸ್ಥಿತಿಗಳಲ್ಲಿ ವೈದ್ಯಕೀಯ ಮತ್ತು ಅಗ್ನಿಶಾಮಕ ವ್ಯವಸ್ಥೆ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಪೊಲೀಸ್ ನಿಯೋಜನೆ ಸೇರಿದಂತೆ ಹತುತಿ ಹಲವು ವ್ಯವಸ್ಥೆಗಳನ್ನು ಒದಗಿಸುವಂತೆ ಅಪರ ಜಿಲ್ಲಾಧಿಕಾರಿ ಜಿಲ್ಲೆಯ ವಿವಿಧ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಎಎಸ್‌ಪಿ ಕುಮಾರ್‌ಚಂದ್ರ, ಮಂಗಳೂರಿನ ಸೈನಿಕ ಕಲ್ಯಾಣ ಇಲಾಖೆಯ ಬಿ.ಆರ್.ಶೆಟ್ಟಿ, ಕ್ರೀಡಾ ಮತ್ತು ಯುವ ಜನ ಸಬಲೀಕರಣ ಇಲಾಖೆಯ ಸಹ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ, ನಗರಸಭೆ ಪೌರಾಯುಕ್ತ ಆನಂದ್ ಕಲ್ಲೋಳಿಕರ್, ಜಿಲ್ಲಾ ಸರ್ಜನ್ ಡಾ. ಮಧುಸೂಧನ್ ನಾಯಕ್, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಸೇನಾ ಆರ್‌ಎಂಓ ಕರ್ನಲ್ ಮನೀಶ್ ಮತ್ತಿತರರು ಉಪಸ್ಥಿತರಿದ್ದರು.









