ರಿಕ್ಷಾ ಢಿಕ್ಕಿ: ಬೈಕ್ ಸವಾರ ಮೃತ್ಯು
ಕಾರ್ಕಳ, ಮಾ.2: ರಿಕ್ಷಾವೊಂದು ಸ್ಕೂಟರಿಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸವಾರ ಮೃತಪಟ್ಟ ಘಟನೆ ಬೆಳ್ಮಣ್ ಗ್ರಾಮದ ಜಂತ್ರಗುಡ್ಡೆಯ ಬಳಿ ಮಾ.1ರಂದು ಸಂಜೆ ವೇಳೆ ನಡೆದಿದೆ.
ಮೃತರನ್ನು ಬೈಕ್ ಸವಾರ ಮೈಲಪ್ಪ(38) ಎಂದು ಗುರುತಿಸಲಾಗಿದೆ. ಸಹ ಸವಾರ ಶಿರ್ವ ನಿವಾಸಿ ಮಣಿಕಂಠ ಗಾಯಗೊಂಡು ಅಜ್ಜರಕಾಡು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಇವರ ಸ್ಕೂಟರ್‌ಗೆ ಶಿರ್ವ ಕಡೆಯಿಂದ ಬೆಳ್ಮಣ್ ಕಡೆಗೆ ಬರುತ್ತಿದ್ದ ಆಟೊೀ ರಿಕ್ಷಾ, ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರಿಂದ ಸವಾರರಿಬ್ಬರು ರಸ್ತೆಗೆ ಬಿದ್ದು ಗಾಯಗೊಂಡಿದ್ದು, ಅದರಲ್ಲಿ ಗಂಭೀರವಾಗಿ ಗಾಯಗೊಂಡ ಮೈಲಪ್ಪ ಅಜ್ಜರಕಾಡು ಸರಕಾರಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Next Story





