ಬಸ್ ಢಿಕ್ಕಿ : ಬೈಕ್ ಸವಾರ ಯುವಕ ಮೃತ್ಯು
ಪುತ್ತೂರು: ಕೆಎಸ್ಸಾರ್ಟಿಸಿ ಬಸ್ಸು ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಯುವಕ ದಾರುಣವಾಗಿ ಮೃತಪಟ್ಟ ಘಟನೆ ಸೋಮವಾರ ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಪುತ್ತೂರು ತಾಲೂಕಿನ ಮಾಡ್ನೂರು ಗ್ರಾಮದ ಕಾವು ಎಂಬಲ್ಲಿ ನಡೆದಿದೆ.
ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ಜೋಗಿಮೂಲೆ ನಿವಾಸಿ ಚಂದ್ರಶೇಖರ್ ಎಂಬವರ ಪುತ್ರ ಪ್ರಶಾಂತ್ (27) ಮೃತರು.
ಪ್ರಶಾಂತ್ ಅವರು ಚಲಾಯಿಸಿಕೊಂಡು ಬರುತ್ತಿದ್ದ ಬೈಕ್ ಮತ್ತು ಪುತ್ತೂರಿನಿಂದ ಪಳ್ಳತ್ತೂರು ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ನಡುವೆ ಢಿಕ್ಕಿ ಸಂಭವಿಸಿತ್ತು, ಘಟನೆಯಲ್ಲಿ ರಸ್ತೆಗೆಸೆಯಲ್ಪಟ್ಟು ಅವರು ಗಂಭೀರ ಗಾಯಗೊಂಡಿದ್ದರು. ಗಾಯಾಳುವನ್ನು ಪುತ್ತೂರಿನ ಆಸ್ಪತ್ರೆಗೆ ಕರೆತರುತ್ತಿದ್ದ ವೇಳೆಯಲ್ಲಿ ದಾರಿ ಮದ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





