ಕನಿಷ್ಟ ವೇತನ ಕಡಿತದ ಪ್ರಸ್ತಾಪ: ಸಿಪಿಐ(ಎಂ) ಖಂಡನೆ

ಬೆಂಗಳೂರು, ಮಾ.2: ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರು ಕೈಗಾರಿಕೋದ್ಯಮಿಗಳ ಹಿತಾಸಕ್ತಿಗಾಗಿ ಕನಿಷ್ಟ ವೇತನ ಕಡಿತ ಪ್ರಸ್ತಾಪ ನೀಡಿರುವುದನ್ನು ಸಿಪಿಐ(ಎಂ) ಖಂಡಿಸಿದೆ.
ಈಗಾಗಲೇ ಆರ್ಥಿಕ ಹಿಂಜರಿತ, ಬೆಲೆ ಏರಿಕೆ, ಉದ್ಯೋಗ ನಷ್ಟದಿಂದ ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ. ಈ ರೀತಿಯ ಬೆಳವಣಿಗೆಯಿಂದ ಕಾರ್ಮಿಕರು ಇನ್ನಷ್ಟು ಸಂಕಷ್ಟಕ್ಕೆ ಈಡಾಗುತ್ತಾರೆ. ಈ ಪ್ರಸ್ತಾವನೆ ಕಾರ್ಮಿಕ ವಿರೋಧಿ ಪ್ರಸ್ತಾವನೆಯಾಗಿದ್ದು, ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದೆ.
Next Story





