Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಿಎಎ, ಎನ್‌ಆರ್‌ಸಿ ವಿರೋಧಿಸಿ ಗಲಭೆ...

ಸಿಎಎ, ಎನ್‌ಆರ್‌ಸಿ ವಿರೋಧಿಸಿ ಗಲಭೆ ಅನವಶ್ಯಕ: ಸಿಎಂ ಯಡಿಯೂರಪ್ಪ

ವಾರ್ತಾಭಾರತಿವಾರ್ತಾಭಾರತಿ4 March 2020 8:44 PM IST
share
ಸಿಎಎ, ಎನ್‌ಆರ್‌ಸಿ ವಿರೋಧಿಸಿ ಗಲಭೆ ಅನವಶ್ಯಕ: ಸಿಎಂ ಯಡಿಯೂರಪ್ಪ

ಬೆಂಗಳೂರು, ಮಾ.4: ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ), ಎನ್‌ಆರ್‌ಸಿ ಹಾಗೂ ಎನ್‌ಪಿಆರ್ ಪ್ರಕ್ರಿಯೆಗಳನ್ನು ವಿರೋಧಿಸಿ, ಗಲಭೆ ನಡೆಸುವುದು ಅನವಶ್ಯಕ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಬುಧವಾರ ಮಧ್ಯಾಹ್ನ ಭೋಜನ ವಿರಾಮದ ನಂತರ ವಿಧಾನಸಭೆಯಲ್ಲಿ ಭಾರತ ಸಂವಿಧಾನ ಕುರಿತ ವಿಶೇಷ ಚರ್ಚೆಯಲ್ಲಿ ಪ್ರಸ್ತಾಪಿಸಿದ ಅವರು, ಪ್ರತಿಭಟನೆ, ಪ್ರತಿರೋಧ ಸಂವಿಧಾನದ ಮೂಲಭೂತ ಹಕ್ಕು ಎಂದು ಹೇಳುತ್ತೇವೆ. ಆದರೆ, ಪ್ರಜಾಪ್ರಭುತ್ವದಲ್ಲಿ ಸಂಸತ್ತಿನಲ್ಲಿಯೇ ಕಾನೂನು ರಚನೆ ಮಾಡಿದ ಮೇಲೆ ಅದಕ್ಕೆ ಗೌರವ ಇದೆ. ಇದನ್ನು ಕಾಂಗ್ರೆಸ್ ಮತ್ತು ಇತರೆ ಪಕ್ಷಗಳು ಮರೆತಿವೆ ಎಂದು ದೂರಿದರು.

ಹಲವು ಜನ ಶಾಸಕರು, ವಕೀಲರಿಗೆ ಸಂವಿಧಾನ, ಸಂಸತ್ತು ಹೇಗೆ ಕೆಲಸ ಮಾಡುತ್ತದೆ ಎನ್ನುವುದು ಗೊತ್ತಿದೆ ಎಂದ ಅವರು, ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್ ಬಗ್ಗೆ ನಡೆಯುತ್ತಿರುವ ಗಲಭೆಗಳು ಅನವಶ್ಯಕ. ಸಿಎಎ ಕಾಯ್ದೆ ಸಂವಿಧಾನ ಮತ್ತು ಸಂಸತ್ತಿನ ಮೂಲಕ ಹೊರಗಡೆ ಬಂದಿದೆ ಎಂದರು.

ಸಂವಿಧಾನ ಬದಲಾವಣೆ ಅಸಾಧ್ಯ: ವಿಶ್ವದಲ್ಲಿಯೇ ಅತಿ ದೊಡ್ಡ ಲಿಖಿತ ಸಂವಿಧಾನ ಎನ್ನುವ ಹೆಗ್ಗಳಿಕೆ ಭಾರತೀಯ ಸಂವಿಧಾನಕ್ಕೆ ಇದೆ. ಅಷ್ಟೇ ಅಲ್ಲದೆ, ಜಗತ್ತಿನಲ್ಲಿಯೇ ಅತ್ಯುತ್ತಮ ಮತ್ತು ಮಾದರಿ ಸಂವಿಧಾನವಾಗಿದ್ದು, ಕೋಟ್ಯಂತರ ಜನಸಂಖ್ಯೆ ಇದ್ದರೂ, ಮುಕ್ತವಾಗಿ ಬದುಕು ಕಟ್ಟಿಕೊಳ್ಳಲು ನಮಗೆ ಸಂವಿಧಾನ ದೂರದರ್ಶಿತ ಫಲ ನೀಡಿದೆ. ಆದರೆ, ಇದನ್ನು ಬದಲಾವಣೆ ಮಾಡುವುದು ಅಸಾಧ್ಯ ಎಂದರು.

ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಮೇಲೆ ವಿಶೇಷ ಗೌರವ ಏಕೆಂದರೆ, ಸಂವಿಧಾನ ರಚನೆ ಹಿಂದಿರುವ ಶ್ರಮ ಅವಿರತವಾಗಿದೆ. ನಮಗೆಲ್ಲಾ ಗೊತ್ತಿಲ್ಲದ ವಿಷಯ ಎಂದರೆ, ಸಮಿತಿ ಕೆಲ ಸದಸ್ಯರು ಗೈರಾಗಿದ್ದರು. ಆದರೂ, ಅಂಬೇಡ್ಕರ್ ಒಬ್ಬರೇ ಸಂವಿಧಾನ ರಚನೆ ಪೂರ್ಣಗೊಳಿಸುತ್ತಾರೆ ಎನ್ನುವುದು ಹೆಮ್ಮೆಯ ಸಂಗತಿ. ಇದು ಅವರಿಗಿದ್ದ ಶೋಷಿತರು, ಬಡವರ ಮೇಲಿನ ಕಾಳಜಿ ಎತ್ತಿ ತೋರಿಸುತ್ತದೆ ಎಂದು ಯಡಿಯೂರಪ್ಪ ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X