ಉಡುಪಿ: ವಿದ್ಯಾಪೋಷಕ್ ಸನಿವಾಸ ಶಿಬಿರ ಸಮಾರೋಪ

ಉಡುಪಿ, ಮಾ.4:ವಿದ್ಯಾರ್ಥಿಗಳು ಋಣಾತ್ಮಕ ವಿಷಯಗಳಿಂದ ದೂರವಿದ್ದು, ದೈಹಿಕ ಆರೋಗ್ಯ ಹಾಗೂ ಪರಿಸರ ಸ್ವಚ್ಛತೆ ಕಡೆಗೆ ಗಮನಹರಿಸಬೇಕು. ಅಲ್ಲದೇ ಪಠ್ಯೇತರ ಚಟುವಟಿಕೆಯತ್ತಲೂ ಗಮನಹರಿಸಬೇಕು. ಇದರಿಂದ ಮಾನಸಿಕ ಆರೋಗ್ಯ ಉತ್ತಮಗೊಳ್ಳುತ್ತದೆಎಂದು ಅಂಬಲಪಾಡಿ ಜನಾರ್ದನ ಮಹಾಕಾಳಿ ದೇವಸ್ಥಾನ ಧರ್ಮದರ್ಶಿ ಡಾ. ನಿ.ಬೀ. ವಿಜಯಬಲ್ಲಾಳ್ ಹೇಳಿದ್ದಾರೆ.
ಶ್ರೀಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನ ಅಂಬಲಪಾಡಿ ಇದರ ಆಶ್ರಯದಲ್ಲಿ ಯಕ್ಷಗಾನ ಕಲಾರಂಗ ವತಿಯಿಂದ ಪ್ರಥಮ ಪಿ.ಯು ಮುಗಿಸಿದ ವಿದ್ಯಾಪೋಷಕ್ ಫಲಾನುಭವಿ ವಿದ್ಯಾರ್ಥಿಗಳಿಗೆ ದೇವಸ್ಥಾನದ ಭವಾನಿ ಮಂಟಪದಲ್ಲಿ ಆಯೋಜಿಸಿದ್ದ 5 ದಿನಗಳ ಸನಿವಾಸ ಶಿಬಿರ ಸಮಾರೋಪ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ಶ್ರೀಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನ ಅಂಬಲಪಾಡಿ ಇದರ ಆಶ್ರಯದಲ್ಲಿ ಯಕ್ಷಗಾನ ಕಲಾರಂಗ ವತಿಯಿಂದ ಪ್ರಥಮ ಪಿ.ಯು ಮುಗಿಸಿದ ವಿದ್ಯಾಪೋಷಕ್ ಫಲಾನುವಿವಿದ್ಯಾರ್ಥಿಗಳಿಗೆದೇವಸ್ಥಾನದವಾನಿ ಮಂಟಪದಲ್ಲಿ ಆಯೋಜಿಸಿದ್ದ 5 ದಿನಗಳ ಸನಿವಾಸ ಶಿಬಿರ ಸಮಾರೋಪ ಸಮಾರಂದಲ್ಲಿಅ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ವಿದ್ಯಾರ್ಥಿಗಳು ವಿದೇಶಿ ಫಾಸ್ಟ್‌ಫುಡ್ ಸಂಸ್ಕೃತಿಯತ್ತ ಆಕರ್ಷಿತರಾಗದೆ ಸಾತ್ವಿಕ ಆಹಾರ ಪದ್ಧತಿಯನ್ನು ಅಳವಡಿಸಿಕೊಂಡರೆ ಅನೇಕ ರೋಗಗಳಿಂದ ದೂರ ವಿರಲು ಸಾಧ್ಯವಿದೆ. ಇಲ್ಲದಿದ್ದರೆ ಸಂಪಾದನೆಯ ಕಾಲದಲ್ಲಿ ವೈದ್ಯಕೀಯ ವೆಚ್ಚಕ್ಕಾಗಿ ಹಣ ವಿನಿಯೋಗಿಸುವ ಅನಿವಾರ್ಯತೆ ಎದುರಾಗುತ್ತದೆ ಎಂದವರು ಕಿವಿಮಾತು ಹೇಳಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬೆಂಗಳೂರು ಯಕ್ಷ ದೇಗುಲ ಅಧ್ಯಕ್ಷ ಬಾಲಕೃಷ್ಣ ಭಟ್ ಮಾತನಾಡಿ, ಓದು ಕೇವಲ ಉದ್ಯೋಗಕ್ಕೆ ಸೀಮಿತವಾಗದೆ ಜ್ಞಾನರ್ಜನೆಗೆ ಹೆಚ್ಚಿನ ಒತ್ತು ನೀಡಬೇಕು. ಜೀವನ ಉತ್ತಮ ರೀತಿಯಲ್ಲಿ ರೂಪುಗೊಳ್ಳಲು ಜ್ಞಾನ ಸಂಪಾದನೆ ಅಗತ್ಯ. ಪರಿಶ್ರಮದಿಂದ ಮಾತ್ರ ಸಮಾಜದಲ್ಲಿ ಉನ್ನತ ಸ್ಥಾನ ಪಡೆಯಲು ಸಾಧ್ಯ ಎಂದರು.
ಮೈ ಲೈಫ್ ಸಂಸ್ಥೆಯ ಪ್ರವೀಣ್ ಗುಡಿ, ನಿವೃತ್ತ ಬಿಎಸ್‌ಎನ್‌ಎಲ್ ಅಧಿಕಾರಿ ಸತ್ಯನಾರಾಯಣ ಪುರಾಣಿಕ್, ನಿವೃತ್ತ ಪ್ರಾಂಶುಪಾಲೆ ತಾರಾದೇವಿ, ಕಲಾರಂಗ ಅಧ್ಯಕ್ಷ ಗಣೇಶ್ ರಾವ್, ಉಪಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಕಾರ್ಯದರ್ಶಿ ಮುರಳೀ ಕಡೆಕಾರ್, ಗಂಗಾಧರ ರಾವ್ ಉಪಸ್ಥಿತರಿದ್ದರು.







