ಮಂಗಳೂರು: ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ

ಮಂಗಳೂರು, ಮಾ.4: ನಗರದ ಅತ್ತಾವರ ಕೆಇಬಿ ಎದುರಿನ ನಿವಾಸಿ ಉದಯ (47) ಬುಧವಾರ ಸಂಜೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇವರ ಪತ್ನಿ ಕೆಲಸಕ್ಕೆ ಹೋಗಿದ್ದು, ಮಕ್ಕಳು ಮನೆಯಲ್ಲಿ ಓದುತ್ತಿದ್ದರು. ಕೆಲಸ ಮುಗಿಸಿ ಬಂದ ಪತ್ನಿ ಮಕ್ಕಳೊಡನೆ ತಂದೆ ಎಲ್ಲಿ ಎಂದು ಪ್ರಶ್ನಿಸಿದ್ದು, ಆಗ ಮಲಗಿದ್ದಾರೆ ಎಂದು ಹೇಳಿದ್ದಾರೆ. ಹೋಗಿ ನೋಡಿದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ.
ಉದಯ ಕೆಲಸಕ್ಕೆ ಹೋಗದೆ ಅಮಲು ಪದಾರ್ಥ ಸೇವಿಸುವ ಚಟ ಹೊಂದಿದ್ದರು. ಇದೇ ವಿಚಾರದಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಂಗಳೂರು ದಕ್ಷಿಣ (ಪಾಂಡೇಶ್ವರ) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





