Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸ್ವಚ್ಛತೆ ಕಾಪಾಡುವ ಮೂಲಕ ಆರೋಗ್ಯದ ಬಗ್ಗೆ...

ಸ್ವಚ್ಛತೆ ಕಾಪಾಡುವ ಮೂಲಕ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ: ಕೋಲಾರ ಜಿ.ಪಂ ಅಧ್ಯಕ್ಷ ವೆಂಕಟೇಶ್

ವಾರ್ತಾಭಾರತಿವಾರ್ತಾಭಾರತಿ4 March 2020 10:37 PM IST
share
ಸ್ವಚ್ಛತೆ ಕಾಪಾಡುವ ಮೂಲಕ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ: ಕೋಲಾರ ಜಿ.ಪಂ ಅಧ್ಯಕ್ಷ ವೆಂಕಟೇಶ್

ಕೋಲಾರ, ಮಾ.4: ಪ್ರತಿಯೊಬ್ಬರೂ ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳುವ ಮೂಲಕ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕೆಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ಸಿ.ಎಸ್ ವೆಂಕಟೇಶ್ ಅವರು ತಿಳಿಸಿದ್ದಾರೆ.

ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನದ ಸಹಯೋಗದಲ್ಲಿ ಮುಳಬಾಗಿಲು ತಾಲ್ಲೂಕಿನ ತಾಯಲೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಆರೋಗ್ಯ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮೀಣ ಪ್ರದೇಶದ ವೃದ್ಧರಿಗೆ, ಮಹಿಳೆಯರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಅರೋಗ್ಯ ಶಿಬಿರಗಳನ್ನು ಹೋಬಳಿಯ ಮಟ್ಟದಲ್ಲಿ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದೆ. ಅರೋಗ್ಯ ಶಿಬಿರಗಳನ್ನು ನಾಗರಿಕರು ಸದುಪಯೋಗ ಪಡೆದುಕೊಳ್ಳಬೇಕು. ಇತ್ತೀಚೆಗೆ ಸುದ್ದಿಯಲ್ಲಿರುವ ಕೊರೋನ ಸೊಂಕಿನ ಬಗ್ಗೆ ಸಾರ್ವಜನಿಕರು ಆತಂಕ ಹೊಂದಿದ್ದು, ಆದರೆ ಜಿಲ್ಲೆಯ ಜನರು ಯಾವುದೇ ಭಯ ಪಡುವ ಅಗತ್ಯವಿಲ್ಲ ಹೀಗಾಗಲೇ ಜಿಲ್ಲಾ ಆಸ್ಪತ್ರೆಯಲ್ಲಿ 5 ಹಾಸಿಗೆಗಳನ್ನು ಇಂತಹ ತುರ್ತು ಕಾಯಿಲೆಗಳಿಗೆ ಕಾಯ್ದಿರಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯ ಯಾವುದೇ ಗ್ರಾಮದಲ್ಲಿ ಸಮಸ್ಯೆ ಇದ್ದರೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಸದಾ ಕಾಲ ಸಾರ್ವಜನಿಕರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್ ಸದಸ್ಯ ಅರವಿಂದ್ ಅವರು ಮಾತನಾಡಿ, ಆರೋಗ್ಯದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಸರ್ಕಾರದ ವತಿಯಿಂದ ಈ ಆರೋಗ್ಯ ಶಿಬಿರಗಳು ನಡೆಯುತ್ತಿವೆ. ಯುವಕರು ಹೆಚ್ಚಿನ ರೀತಿಯಲ್ಲಿ ದುಚ್ಚಟಗಳಿಗೆ ಬಲಿಯಾಗುತ್ತಿದ್ದಾರೆ ಹಾಗಾಗಿ ಪೋಷಕರು ತಮ್ಮ ಮಕ್ಕಳ ಬಗ್ಗೆ ಗಮನಹರಿಸಬೇಕು. ವ್ಯಾಯಾಮ, ದೈಹಿಕ ಕಸರತ್ತುಗಳನ್ನು ಮಾಡುವ ಮೂಲಕ ಯುವಕರು ಆರೋಗ್ಯವನ್ನು ಕಾಪಾಡಿಕೊಳ್ಳುಬೇಕು. ಗಡಿ ಭಾಗದಲ್ಲಿ ಹಾಗೂ ಕುಗ್ರಾಮಗಳಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ಅರೋಗ್ಯ ಮೇಳವನ್ನು ಆಯೋಜಿಸಬೇಕೆಂದು ಆರೋಗ್ಯ ಇಲಾಖೆಗೆ ಮನವಿ ಮಾಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ವಿಜಯ್ ಕುಮಾರ್ ಅವರು ಮಾತನಾಡಿ, 3 ವರ್ಷಗಳ ನಂತರ ಪುನ: ಅರೋಗ್ಯ ಮೇಳವನ್ನು ಆಯೋಜಿಸಲಾಗಿದೆ, ಈ ಶಿಬಿರದಲ್ಲಿ ನುರಿತ ತಜ್ಞರಿಂದ ಅರೋಗ್ಯ ತಪಾಸಣೆಯನ್ನು ನಡೆಸಲಾಗುತ್ತಿದೆ. ಮಹಿಳೆಯರ ಮಕ್ಕಳ ಸಮಸ್ಯೆಗಳಿಗೆ ಸಂಬಂಧಿಸಿದ ವೈದ್ಯರು ಭಾಗವಹಿಸಿದ್ದಾರೆ ಎಂದು ಮಾಹಿತಿ ನೀಡಿದರು. ಈ ಅರೋಗ್ಯ ಶಿಬಿರದಲ್ಲಿ ಔಷಧಿಗಳನ್ನು ನೀಡಲಾಗುತ್ತಿದ್ದು ಹೆಚ್ಚಿನ ಚಿಕಿತ್ಸೆಗಾಗಿ ತಾಲೂಕು ಅಥವಾ ಜಿಲ್ಲಾ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಕೊಳ್ಳಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು. ಸೇವಾ ಸಿಂಧು ಕೇಂದ್ರ ಮೂಲಕ ಆಯುಷ್ಮಾನ್ ಭಾರತ್ ಕಾರ್ಡ್‍ಗಳನ್ನು ಸ್ಥಳದಲ್ಲಿಯೇ ನೀಡಲಾಗುತ್ತಿದೆ ಎಂದು ತಿಳಿಸಿದರು.

ಆರೋಗ್ಯ ಶಿಬಿರದಲ್ಲಿ  ಇಲಾಖೆಯಿಂದ ವಿವಿಧ ರೋಗಗಳು ಹರಡುವ ಬಗ್ಗೆ ವಿಶೇಷವಾದ ಭಿತ್ತಿ ಪತ್ರಗಳ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಿದರು. ಪೋಷಣ್ ಅಭಿಯಾನದ ಮೂಲಕ ಸ್ಟಾಲ್‍ನ್ನು ಸ್ಥಾಪಿಸಿ ನಾಗರಿಕರಿಗೆ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ಮುಳಬಾಗಿಲು ತಾಲೂಕು ಪಂಚಾಯತ್ ಉಪಾಧ್ಯಕ್ಷ ಲಕ್ಷ್ಮೀನಾರಾಯಣ, ಗ್ರಾಮ ಪಂಚಾಯತ್ ಅಧ್ಯಕ್ಷೆ ಪದ್ಮಮ್ಮ ನಾಗಾರಾಜು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಬಾಬು, ಮುಖಂಡರಾದ ರಮೇಶ್, ಶಂಕರ್, ಅಮರೇಶ್, ಅಪ್ಪಿ, ಸುಬ್ರಮಣಿ, ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ, ಅಶಾ ಕಾರ್ಯಕರ್ತರು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X