ಉಡುಪಿ: ವಿಶ್ವ ಶ್ರವಣ ದಿನಾಚರಣೆ /ರಾಷ್ಟ್ರೀಯ ಶ್ರವಣ ಜಾಗೃತಿ ಅಭಿಯಾನ
ಉಡುಪಿ, ಮಾ.4: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿವಾರಣಾ ಕಾರ್ಯಕ್ರಮದಡಿ ಮಂಗಳವಾರ ಅಜ್ಜರಕಾಡು ಎ.ಎನ್.ಎಂ. ತರಬೇತಿ ಕೇಂದ್ರದಲ್ಲಿ ವಿಶ್ವ ಶ್ರವಣ ದಿನ ಹಾಗೂ ರಾಷ್ಟ್ರೀಯ ಶ್ರವಣ ಜಾಗೃತಿ ಅಭಿಯಾನ ನಡೆಯಿತು.
ಉಡುಪಿ, ಮಾ.4: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿವಾರಣಾ ಕಾರ್ಯಕ್ರಮದಡಿ ಮಂಗಳವಾರ ಅಜ್ಜರಕಾಡು ಎ.ಎನ್.ಎಂ. ತರಬೇತಿ ಕೇಂದ್ರದಲ್ಲಿ ವಿಶ್ವ ಶ್ರವಣ ದಿನ ಹಾಗೂ ರಾಷ್ಟ್ರೀಯ ಶ್ರವಣ ಜಾಗೃತಿ ಅಭಿಯಾನ ನಡೆಯಿತು. ಎ.ಎನ್.ಎಂ.ತರಬೇತಿ ಕೇಂದ್ರದ ಪ್ರಾಂಶುಪಾಲ ಶ್ರೀಧರ ಪ್ರಭು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸುಧೀರ್‌ಚಂದ್ರ ಸೂಡ ಹಾಗೂ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಮತ್ತು ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿವಾರಣಾ ಕಾರ್ಯಕ್ರಮದ ಅನುಷ್ಠಾನಾಧಿಕಾರಿ ಡಾ.ರಾಮ್‌ರಾವ್ ವಿಶ್ವ ಶ್ರವಣ ದಿನಾಚರಣೆಯ ಮಹತ್ವವನ್ನು ತಿಳಿಸಿಕೊಟ್ಟರು.
ಶ್ರವಣದೋಷವುಳ್ಳ ಮಕ್ಕಳ ಪಾಲಕರು ಹಾಗೂ ಎ.ಎನ್.ಎಂ. ತರಬೇತಿ ಕೇಂದ್ರದ ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಉಡುಪಿ ಜಿಲ್ಲಾಸ್ಪತ್ರೆಯ ವಾಕ್ ಶ್ರವಣ ತಜ್ಞೆ ಅಕ್ಷತಾ ವಿ. ಕಾರ್ಯಕ್ರಮ ನಿರೂಪಿಸಿದರು. ಸೌಜನ್ಯ ಎಸ್. ವಂದಿಸಿದರು.





