ಮಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ತಾತ್ಕಾಲಿಕ ಪಟ್ಟಿ ಪ್ರಕಟ
ಮಂಗಳೂರು, ಮಾ. 4: ಮಂಗಳೂರು (ನಗರ) ಶಿಶು ಅಭಿವೃದ್ಧಿ ಯೋಜನೆಯಲ್ಲಿ ತೆರವಾಗಿರುವ ಕಾರ್ಯಕರ್ತೆ/ಸಹಾಯಕಿ ಹುದ್ದೆಗೆ (ಬಜಾಲ್-ಶಾಂತಿನಗರ) ಆಯ್ಕೆಯಾಗಿರುವ ಅಭ್ಯರ್ಥಿಗಳ ತಾತ್ಕಲಿಕ ಪಟ್ಟಿ ಪ್ರಕಟಿಸಲಾಗಿದೆ.
ಈ ಬಗ್ಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದ್ದು, ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಮಾ.9ರಂದು ಅಪರಾಹ್ನ 5:30ರ ಒಳಗಾಗಿ ಮಂಗಳೂರು (ನಗರ) ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಸಿಲ್ವ ಕ್ರಾಸ್ ರೋಡ್, ವೆಲೆನ್ಸಿಯ, ಬಿಷಪ್ ವಿಕ್ಟರ್ ಅಡ್ಡರಸ್ತೆ, ಮಂಗಳೂರು ಅವರಿಗೆ ನೀಡಬಹುದು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟನೆ ತಿಳಿಸಿದೆ.
Next Story





