ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ನಟ ದರ್ಶನ್

ಮೈಸೂರು,ಮಾ.4: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಅನಾರೋಗ್ಯ ಹಿನ್ನಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ನಂತರ ಬಿಡುಗಡೆಯಾಗಿದ್ದಾರೆ.
ನಟ ದರ್ಶನ್ ಅವರು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತಿದ್ದು, ಇಂದು ಬೆಳಗ್ಗೆ ಹೊಟ್ಟೆನೋವು ಜಾಸ್ತಿಯಾದ ಹಿನ್ನಲೆಯಲ್ಲಿ ಬೆಳಗ್ಗೆ 4 ಗಂಟೆ ಸಮಯದಲ್ಲಿ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ಆಗಮಿಸಿದರು. ವೈದ್ಯರ ಸಲಹೆ ಮೇರೆಗೆ ಇಂದು ಚಿಕಿತ್ಸೆಗೆ ದಾಖಲಾಗಿದ್ದು, ಸಂಜೆ ವೇಳೆ ಗುಣಮುಖರಾದ ಹಿನ್ನಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಯಿತು.
ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ದರ್ಶನ್, ಸ್ವಲ್ಪ ಗ್ಯಾಸ್ಟ್ರಿಕ್ ಸಮಸ್ಯೆಯಿತ್ತು. ಹಾಗಾಗಿ ಚಿಕಿತ್ಸೆಗೆ ದಾಖಲಾಗಿದ್ದೆ. ಈಗ ಆರಾಮಾಗಿದ್ದೇನೆ. ಇನ್ನು ಮೇಲೆ ಆರೋಗ್ಯದ ಕಡೆ ಗಮನ ಕೊಡುತ್ತೇನೆ. ಅಭಿಮಾನಿಗಳು ಗಾಬರಿಯಾಗಬೇಡಿ. ಸದ್ಯ ನಾನು ಗುಣಮುಖನಾಗಿದ್ದೇನೆ ಎಂದು ಹೇಳಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು.
Next Story





