Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಬಿಎಂಪಿ ವಾರ್ಡ್ ಮರುವಿಂಗಡನೆ:...

ಬಿಬಿಎಂಪಿ ವಾರ್ಡ್ ಮರುವಿಂಗಡನೆ: ಕಾಂಗ್ರೆಸ್ ಪ್ರಾಬಲ್ಯವಿರುವ ವಾರ್ಡ್‌ಗಳನ್ನು ಕೈ ಬಿಡಲಾಗಿದೆ- ಆರೋಪ

ವಾರ್ತಾಭಾರತಿವಾರ್ತಾಭಾರತಿ5 March 2020 12:21 AM IST
share
ಬಿಬಿಎಂಪಿ ವಾರ್ಡ್ ಮರುವಿಂಗಡನೆ: ಕಾಂಗ್ರೆಸ್ ಪ್ರಾಬಲ್ಯವಿರುವ ವಾರ್ಡ್‌ಗಳನ್ನು ಕೈ ಬಿಡಲಾಗಿದೆ- ಆರೋಪ

ಬೆಂಗಳೂರು, ಮಾ.4: ರಾಜ್ಯ ಸರಕಾರವು ಬಿಬಿಎಂಪಿ ವಾರ್ಡ್‌ಗಳ ಪುನರ್ ವಿಂಗಡಣೆ ಮಾಡಿ ಹೊರಡಿಸಿರುವ ಅಧಿಸೂಚನೆಯಲ್ಲಿ, ಹಲವು ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರ ವಾರ್ಡ್‌ಗಳನ್ನು ತೆಗೆದು ಹಾಕಲಾಗಿದೆ. ಕಾಂಗ್ರೆಸ್ ಸದಸ್ಯರನ್ನು ನೇರವಾಗಿ ಗುರಿಯಾಗಿಟ್ಟುಕೊಂಡು ಅವರ ವಾರ್ಡ್‌ಗಳನ್ನು ಬಿಜೆಪಿಯ ಸರಕಾರ ಕಣ್ಮರೆ ಮಾಡಿದೆ ಎಂದು ಪಾಲಿಕೆಯ ಕಾಂಗ್ರೆಸ್ ಸದಸ್ಯರು ಆರೋಪಿಸಿದ್ದಾರೆ.

ಹೊಸ ಪಟ್ಟಿಯಲ್ಲಿ ಪ್ರಮುಖವಾಗಿ ಮಾಜಿ ಮೇಯರ್ ಗಂಗಾಬಿಕೆ ಮಲ್ಲಿಕಾರ್ಜುನ ಪ್ರತಿನಿಧಿಸುವ ಜಯನಗರ, ಜಿ. ಪದ್ಮಾವತಿ ಪ್ರತಿನಿಧಿಸುವ ಪ್ರಕಾಶ್ ನಗರ ವಾರ್ಡ್ ಸೇರಿದಂತೆ ಪಾಲಿಕೆಯ ಕಾಂಗ್ರೆಸ್ ಸದಸ್ಯರು ಪ್ರತಿನಿಧಿಸುವ ತಲಾ 13 ವಾರ್ಡ್ ಮತ್ತು ಜೆಡಿಎಸ್ ಪ್ರತಿನಿಧಿಸುವ ಒಂದು ವಾರ್ಡ್ ಅನ್ನು ಹೊಸ ಪಟ್ಟಿಯಲ್ಲಿ ಕೈಬಿಟ್ಟಿರುವುದು ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರ ಅಸಮಾಧಾನಕ್ಕೆ ಕಾರಣವಾಗಿದೆ. ಹೈಕೋರ್ಟ್‌ಗೆ ಸಲ್ಲಿಸಿರುವ ಕರಡು ಅಧಿಸೂಚನೆಯಲ್ಲಿ ಕಾಂಗ್ರೆಸ್ ಸದಸ್ಯರು ಪ್ರತಿನಿಧಿಸುತ್ತಿದ್ದ ಸುಮಾರು 22 ವಾರ್ಡ್‌ಗಳು ಇಲ್ಲದಂತಾಗಿರುವುದು ಹಾಗೂ ಗಡಿಪ್ರದೇಶಗಳನ್ನು ಬದಲಿಸಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ಹೈಕೋರ್ಟ್‌ಗೆ ಮನವಿ ಸಲ್ಲಿಸಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ.

2011ರ ಜನಸಂಖ್ಯೆ ಆಧಾರದ ಮೇಲೆ ವಾರ್ಡ್ ಮರುವಿಂಗಡನೆ ಮಾಡಲಾಗಿದ್ದು, ನಗರದ ಕೇಂದ್ರ ಪ್ರದೇಶದ ಅನೇಕ ವಾರ್ಡ್‌ಗಳನ್ನು ಕೈ ಬಿಟ್ಟು, ಹೊಸತಾಗಿ ನಗರಕ್ಕೆ ಸೇರಿದ ಪ್ರದೇಶಗಳಲ್ಲಿ 27 ಹೊರ ವಾರ್ಡ್ ರೂಪಿಸಲಾಗಿದೆ.

100 ವಾರ್ಡ್‌ಗಳಿದ್ದವು: ಬೆಂಗಳೂರು ಮಹಾನಗರ ಪಾಲಿಕೆ ಅಸ್ತಿತ್ವದಲ್ಲಿದ್ದಾಗ 100 ವಾರ್ಡ್‌ಗಳಿತ್ತು. 2007ರಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ರಚನೆ ಮಾಡುವಾಗ 7 ನಗರಸಭೆ, 1 ಪಟ್ಟಣ ಪಂಚಾಯತ್ ಹಾಗೂ 110 ಹಳ್ಳಿಗಳನ್ನು ಸೇರ್ಪಡೆ ಮಾಡಿಕೊಳ್ಳಲಾಯಿತು. ಆಗ ವಾರ್ಡ್‌ಗಳ ಸಂಖ್ಯೆ 198ಕ್ಕೇ ಏರಿಕೆ ಕಂಡಿತು.

ಹಾಲಿ ಪಾಲಿಕೆಯ ಅವಧಿ ಸೆ.10ಕ್ಕೆ ಅಂತ್ಯ: 2015ರಲ್ಲಿ ಬಿಬಿಎಂಪಿ ಚುನಾವಣೆಗೆ ಮುನ್ನ 2011ರ ಜನಗಣತಿ ಆಧರಿಸಿ ವಾರ್ಡ್‌ಗಳ ಮರುವಿಂಗಡನೆ ಮಾಡಬೇಕಿತ್ತು. ಆದರೆ, ಪಾಲಿಕೆ ಪೂರ್ವ ಸಿದ್ಧತೆ ಮಾಡಿಕೊಳ್ಳದ ಕಾರಣ ಮರುವಿಂಗಡನೆ ನಡೆಯಲಿಲ್ಲ. 2015ರ ಆಗಸ್ಟ್‌ನಲ್ಲಿ ಚುನಾವಣೆ ನಡೆದು, ಸೆಪ್ಟೆಂಬರ್ 11ರಂದು ಪಾಲಿಕೆ ರಚನೆಯಾಗಿದ್ದು, ಹಾಲಿ ಪಾಲಿಕೆಯ ಅವಧಿ 2020ರ ಸೆಪ್ಟೆಂಬರ್ 10ಕ್ಕೆ ಅಂತ್ಯಗೊಳ್ಳಲಿದೆ.

ಹೊಸ ಮೀಸಲಾತಿ ಪ್ರಕಾರ ಚುನಾವಣೆ: ಸರಾಸರಿ ಒಂದು ವಾರ್ಡ್‌ಗೆ 42,645 ಜನರ ಆಧಾರದಲ್ಲಿ ಮರುವಿಂಗಡನೆ ಮಾಡಲಾಗಿದೆ. ಹೊಸ ವಾರ್ಡ್ ಮರುವಿಂಗಡನೆ ಅನ್ವಯ ಈ ಬಾರಿ ಚುನಾವಣೆ ನಡೆಯಬೇಕಿದೆ. ಅದಕ್ಕಾಗಿ ಕರ್ನಾಟಕ ಸರಕಾರ ಗೆಜೆಟ್‌ನಲ್ಲಿ ವಾರ್ಡ್ ಮರುವಿಂಗಡನೆ ಆದೇಶವನ್ನು ಹೊರಡಿಸಿದೆ.

ಆಕ್ಷೇಪಣೆ ಸಲ್ಲಿಸಲು 15 ದಿನ ಕಾಲಾವಕಾಶ: ಕರ್ನಾಟಕ ಸರಕಾರ ಹೊರಡಿಸಿರುವ ಅಧಿಸೂಚನೆ ಬಗ್ಗೆ ಆಕ್ಷೇಪಣೆಗಳಿದ್ದರೆ 15 ದಿನದಲ್ಲಿ ಸಲ್ಲಿಸಬಹುದು. ಅಧಿಸೂಚನೆಯಲ್ಲಿ ಪ್ರತಿಯೊಂದು ವಾರ್ಡ್ ಉತ್ತರ, ಪೂರ್ವ, ದಕ್ಷಿಣ, ಪಶ್ಚಿಮ ದಿಕ್ಕುಗಳ ಗಡಿಯನ್ನು ನೀಡಲಾಗಿದೆ. ವಿಳಾಸ: ಜಿಲ್ಲಾಧಿಕಾರಿ ಕಚೇರಿ, ಕಂದಾಯ ಭವನ, ಕೆ.ಜಿ. ರಸ್ತೆ, ಬೆಂಗಳೂರು ನಗರ ಜಿಲ್ಲೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X