ರಾಜ್ಯ ಬಜೆಟ್ 2020-21: ಸಾಂಸ್ಕೃತಿಕ, ಪ್ರವಾಸೋದ್ಯಮ ಕ್ಷೇತ್ರಕ್ಕೆ ದಕ್ಕಿದ್ದೇನು? ಇಲ್ಲಿವೆ ಸಂಪೂರ್ಣ ಮಾಹಿತಿ

ಬೆಂಗಳೂರು, ಮಾ.5: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ಮಂಡಿಸಿದ ರಾಜ್ಯ ಬಜೆಟ್ 2020-21ರಲ್ಲಿ ಸಂಸ್ಕೃತಿ, ಪರಂಪರೆ ಹಾಗೂ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಅವುಗಳ ವಿವರ ಇಂತಿವೆ.
►ಬಸವಕಲ್ಯಾಣದಲ್ಲಿ 500 ಕೋಟಿ ರೂ. ವೆಚ್ಚದಲ್ಲಿ ಅನುಭವ ಮಂಟಪ ನಿರ್ಮಾಣ.
►ಚಿತ್ರದುರ್ಗದ ಶ್ರೀ ಮುರುಘಾ ಮಠದ ಆವರಣದಲ್ಲಿ 325 ಅಡಿ ಎತ್ತರದ ಶ್ರೀ ಜಗಜ್ಯೋತಿ ಬಸವೇಶ್ವರರ ಕಂಚಿನ ಪುತ್ಥಳಿ ನಿರ್ಮಾಣಕ್ಕೆ ರಾಜ್ಯ ಸರ್ಕಾರದಿಂದ 20 ಕೋಟಿ ರೂ. ನೆರವು.
►ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ “ವಿಜ್ಞಾನೇಶ್ವರ ಅಧ್ಯಯನ ಪೀಠ” ಸ್ಥಾಪನೆ.
►ಬೆಂಗಳೂರಿನಲ್ಲಿ ವಿವೇಕಾನಂದ ಯುವ ಕೇಂದ್ರ ಸ್ಥಾಪನೆ.
►ರಾಜ್ಯದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಕ್ರೀಡಾ ಮೂಲಭೂತ ಸೌಕರ್ಯಗಳನ್ನು ಬಲಪಡಿಸಲು, ಕ್ರೀಡಾಪಟುಗಳಿಗೆ ಉತ್ತಮ ತರಬೇತಿ, ಉತ್ತೇಜನ ನೀಡಲು, ತರಬೇತುದಾರರು ಮತ್ತು ತಾಂತ್ರಿಕ ಸಿಬ್ಬಂದಿಯ ಕೌಶಲ್ಯ ಅಭಿವೃದ್ಧಿಗೆ ಐದು ಕೋಟಿ ರೂ.ಗಳ ಅನುದಾನ
►ಅನಂತ ಕುಮಾರ್ ಪ್ರತಿಷ್ಠಾನದ ವತಿಯಿಂದ ನಾಯಕತ್ವ ನಿರ್ಮಾಣ ಹಾಗೂ ನೀತಿ ನಿರೂಪಣಾ ಸಂಶೋಧನಾ ಸಂಸ್ಥೆ ಸ್ಥಾಪನೆಗೆ 20 ಕೋಟಿ ರೂ. ಅನುದಾನ. ಪ್ರಸಕ್ತ ಸಾಲಿನಲ್ಲಿ 10 ಕೋಟಿ ರೂ. ನಿಗದಿ.
►ಸರ್ಕಾರದ ವತಿಯಿಂದ ಜನವರಿ 1 ರಂದು ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನ ಆಚರಣೆಗೆ ಕ್ರಮ.
►ಬೆಂಗಳೂರು ನಗರದ ನಾಲ್ಕೂ ದಿಕ್ಕಿನಲ್ಲಿ 60 ಕೋಟಿ ರೂ. ವೆಚ್ಚದಲ್ಲಿ ರವೀಂದ್ರ ಕಲಾಕ್ಷೇತ್ರದ ಮಾದರಿಯಲ್ಲಿ ಕಲಾಕ್ಷೇತ್ರಗಳ ನಿರ್ಮಾಣ.
►ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರದೇಶದಲ್ಲಿ 66 ಕೋಟಿ ರೂ. ವೆಚ್ಚದಲ್ಲಿ ನಾಡಪ್ರಭು ಕೆಂಪೇಗೌಡರ 100 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣ.
►ಸಂತ ಶಿಶುನಾಳ ಶರೀಫರ ಸಮಾಧಿಯಿರುವ ಹಾವೇರಿ ಜಿಲ್ಲೆ ಶಿಶುನಾಳದ ಅಭಿವೃದ್ಧಿಗೆ ಐದು ಕೋಟಿ ರೂ. ಅನುದಾನ.
►ಕರ್ನಾಟಕದ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪನವರ ಚಿತ್ರದುರ್ಗದ ಮನೆಯ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಐದು ಕೋಟಿ ರೂ. ಅನುದಾನ.
►ಖ್ಯಾತ ಸಾಹಿತಿ ಎಸ್. ಎಲ್. ಭೈರಪ್ಪನವರ ಹುಟ್ಟೂರು, ಹಾಸನ ಜಿಲ್ಲೆಯ ಸಂತೆಶಿವರ ಗ್ರಾಮದ ಅಭಿವೃದ್ಧಿಗೆ ಐದು ಕೋಟಿ ರೂ.
►ಲಂಬಾಣಿ ಸಂಸ್ಕೃತಿ ಭಾಷಾ ಅಕಾಡೆಮಿ ಸ್ಥಾಪನೆಗೆ 50 ಲಕ್ಷ ರೂ. ಅನುದಾನ
►ಚಿತ್ರಸಂತೆ ಕಾರ್ಯಕ್ರಮಕ್ಕೆ ಒಂದು ಕೋಟಿ ರೂ. ನೆರವು
►ಬೆಂಗಳೂರಿನಲ್ಲಿ ಒಟ್ಟು 500 ಕೋಟಿ ರೂ.ಗಳ ವೆಚ್ಚದಲ್ಲಿ ಖಾಸಗಿ ಸಹಭಾಗಿತ್ವದೊಂದಿಗೆ ಜಾಗತಿಕ ಗುಣಮಟ್ಟದ ಫಿಲಂ ಸಿಟಿ ಸ್ಥಾಪನೆ.
►ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಐದು ಕೋಟಿ ರೂ.
►ವಿವಿಧ ಮಠಗಳ ಅಭಿವೃದ್ಧಿಗೆ ಆರ್ಥಿಕ ಸಹಾಯ ನೀಡಲು ಸರ್ಕಾರದ ಕ್ರಮ.
►ಭಾರತದ ವಿವಿಧ ಪ್ರಸಿದ್ಧ ಪುಣ್ಯ ಕ್ಷೇತ್ರಗಳಲ್ಲಿ ಕರ್ನಾಟಕ ಸರ್ಕಾರವು ನಡೆಸುತ್ತಿರುವ ಅತಿಥಿಗೃಹಗಳ ಮೂಲಸೌಕರ್ಯ ಅಭಿವೃದ್ಧಿಗೆ 25 ಕೋಟಿ ರೂ. ಅನುದಾನ.
►ಹಾವೇರಿ ಜಿಲ್ಲೆಯಲ್ಲಿರುವ ಸರ್ವಜ್ಞ ಅಭಿವೃದ್ಧಿ ಪ್ರಾಧಿಕಾರದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರೋತ್ಸಾಹ.
►ರಾಜ್ಯದ 60 ವರ್ಷ ಮೀರಿದ ಬಡವರಿಗೆ ಉಚಿತವಾಗಿ ರಾಜ್ಯದ ಹಾಗೂ ದೇಶದ ಪ್ರಸಿದ್ಧ ತೀರ್ಥ ಕ್ಷೇತ್ರ ದರ್ಶಿಸಲು “ಜೀವನ ಚೈತ್ರ ಯಾತ್ರೆ” ಯೋಜನೆ ಜಾರಿ; 20 ಕೋಟಿ ರೂ. ಅನುದಾನ.
►ರಾಜ್ಯದಲ್ಲಿರುವ 25,000ಕ್ಕೂ ಹೆಚ್ಚು ಐತಿಹಾಸಿಕ ಮಹತ್ವವುಳ್ಳ ದೇವಸ್ಥಾನಗಳು, ಪ್ರಾಚೀನ ಸ್ಥಳಗಳು, ಸ್ಮಾರಕಗಳ ಪುನರುಜ್ಜೀವನಕ್ಕೆ “ಸಂರಕ್ಷಣಾ” ಯೋಜನೆ ಜಾರಿ.
►ಪ್ರವಾಸಿ ಸ್ನೇಹಿ ಯೋಜನೆಗಳನ್ನು ಒಳಗೊಂಡ ಹೊಸ ಪ್ರವಾಸೋದ್ಯಮ ನೀತಿ ಜಾರಿಗೆ ಕ್ರಮ.
►ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಬೆಟ್ಟದ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ 20 ಕೋಟಿ ರೂ. ಅನುದಾನ.
►ವೀರ ಮದಕರಿ ನಾಯಕ ಹಾಗೂ ಒನಕೆ ಓಬವ್ವರ ನೆನಪಿಸುವ ಚಿತ್ರದುರ್ಗದ ಸಮಗ್ರ ಅಭಿವೃದ್ಧಿಗೆ ಕ್ರಮ.
►ಐತಿಹಾಸಿಕ ಪ್ರವಾಸಿ ತಾಣ ಬಾದಾಮಿಯ ಸಮಗ್ರ ಅಭಿವೃದ್ಧಿಗೆ 25 ಕೋಟಿ ರೂ. ಅನುದಾನ.
►ಕರ್ನಾಟಕ ಪ್ರವಾಸೋದ್ಯಮ ಕಾರ್ಯಪಡೆಯ ಶಿಫಾರಸುಗಳಂತೆ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಕ್ರಮ. ಪ್ರವಾಸಿಗರನ್ನು ಸೆಳೆಯುವ ಜಾಹೀರಾತು ಮತ್ತು ಇತರ ಚಟುವಟಿಕೆಗಳಿಗೆ 100 ಕೋಟಿ ರೂ ಹಾಗೂ ರಾಜ್ಯದ ಪ್ರವಾಸೋದ್ಯಮದ ಸರ್ವತೋಮುಖ ಅಭಿವೃದ್ಧಿಗೆ 500 ಕೋಟಿ ರೂ. ಅನುದಾನ.
►ಪ್ರವಾಸಿ ಕ್ಷೇತ್ರಗಳಲ್ಲಿ ಹೆಚ್ಚಿನ ಹೂಡಿಕೆದಾರರನ್ನು ಆಕರ್ಷಿಸಲು “ಜಾಗತಿಕ ಪ್ರವಾಸೋದ್ಯಮ ಹೂಡಿಕೆದಾರರ ಸಮಾವೇಶ” (Global Tourism Investors Meet).
►ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಜೋಗ ಜಲಪಾತ ಮತ್ತು ಇತರ ಪ್ರವಾಸಿ ತಾಣಗಳಲ್ಲಿ ಮೂಲಸೌಕರ್ಯ ಒದಗಿಸಿ, ಟೂರಿಸಂ ಸಕ್ರ್ಯೂಟ್ ಅಭಿವೃದ್ಧಿಗೆ ಕ್ರಮ.
►ರಾಜ್ಯದಲ್ಲಿರುವ ಶೋಲಾ ಅರಣ್ಯಗಳ ಸರ್ವೇಕ್ಷಣೆ, ಜೀವ ವೈವಿಧ್ಯ ಸಂರಕ್ಷಣೆಗೆ ಐದು ಕೋಟಿ ರೂ. ಅನುದಾನ
►ತ್ಯಾವರೆಕೊಪ್ಪ ಹುಲಿ ಸಿಂಹಧಾಮದಲ್ಲಿರುವ ಮಿನಿ ಮೃಗಾಲಯ ಉನ್ನತೀಕರಿಸಲು ಐದು ಕೋಟಿ ರೂ.ಗಳ ಅನುದಾನ
►ರಾಮನಗರ ಜಿಲ್ಲೆಯ ರಣಹದ್ದು ಧಾಮದಲ್ಲಿ ಎರಡು ಕೋಟಿ ರೂ.ಗಳ ವೆಚ್ಚದಲ್ಲಿ ರಣಹದ್ದು ಸಂತಾನೋತ್ಪತ್ತಿ ಕೇಂದ್ರ ಸ್ಥಾಪನೆ.
►ಮಂಗಗಳ ಪುನರ್ವಸತಿಗೆ ಐದು ವರ್ಷಗಳಿಗೆ ಒಟ್ಟಾರೆ 6.25 ಕೋಟಿ ರೂ. ಅನುದಾನ. 2020-21ನೇ ಸಾಲಿನಲ್ಲಿ 1.25 ಕೋಟಿ ರೂ. ನೆರವು.
►ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದು ಕೋಟಿ ರೂ. ವೆಚ್ಚದಲ್ಲಿ ರಾಜ್ಯದ ಮೊದಲ ಕಡಲಧಾಮವನ್ನು Marine Eco Park) ಸ್ಥಾಪನೆ.
►ಸಂಸ್ಕೃತಿ, ಪರಂಪರೆ ಮತ್ತು ನೈಸರ್ಗಿಕ ಸಂಪನ್ಮೂಲಗಳ ವಲಯಕ್ಕೆ ನಿಗದಿಪಡಿಸಿದ ಒಟ್ಟಾರೆ ಅನುದಾನ – 4552 ಕೋಟಿ ರೂ.







