ಸರ್ವಾಂಗೀಣ ಅಭಿವೃದ್ಧಿಯೆ ನಮ್ಮ ಗುರಿ: ಮುಖ್ಯಮಂತ್ರಿ

ಬೆಂಗಳೂರು, ಮಾ.5: ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯೆ ನಮ್ಮ ಗುರಿ. ಸಾಮಾಜಿಕ ನ್ಯಾಯದೊಂದಿಗೆ ಸರ್ವರಿಗೂ ಸಮಬಾಳು ಮತ್ತು ಸಮಪಾಲು ನೀಡುವ ಧ್ಯೇಯ ನಮ್ಮ ದಾರಿ. ಸರ್ವೋದಯದ ಗಮ್ಯದತ್ತ, ಅಂತ್ಯೋದಯದ ಹಾದಿಯಲ್ಲಿ ನಮ್ಮ ಸರಕಾರ ಸಾಗಿದೆ ಎಂದು ಬಜೆಟ್‌ನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಎಲ್ಲರನ್ನೂ ಒಳಗೊಂಡ ಪ್ರಗತಿ ಸಾಧಿಸಲು ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು ಮತ್ತು ಮಕ್ಕಳು, ಹಿರಿಯ ನಾಗರಿಕರು ಹಾಗೂ ವಿಕಲಚೇತನರಿಗೆ ವಿಶೇಷ ಗಮನದೊಂದಿಗೆ ಅಭಿವೃದ್ಧಿ ಹಾಗೂ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
Next Story





