Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊರೋನ ವೈರಸ್ ಬಗ್ಗೆ ಸುಳ್ಳು ಸುದ್ದಿ...

ಕೊರೋನ ವೈರಸ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದರೆ ಕ್ರಮ: ಡಿಎಚ್‌ಓ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ5 March 2020 9:43 PM IST
share
ಕೊರೋನ ವೈರಸ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದರೆ ಕ್ರಮ: ಡಿಎಚ್‌ಓ ಎಚ್ಚರಿಕೆ

ಉಡುಪಿ, ಮಾ.5: ಕೊರೋನ ವೈರಸ್‌ನಿಂದ ಹರಡುವ ರೋಗದ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳು, ವದಂತಿಗಳನ್ನು ಹಬ್ಬಿಸ ಲಾಗುತ್ತಿದೆ. ಇಂತಹ ವ್ಯಕ್ತಿಗಳ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ಎಚ್ಚರಿಸಿದ್ದಾರೆ.

ಗುರುವಾರ ಸಂಜೆ ತಮ್ಮ ಕಚೇರಿಯಲ್ಲಿ ಕರೆದ ತುರ್ತು ಪತ್ರಿಕಾಗೋಷ್ಠಿಯಲ್ಲಿ ಅವರು ಜಿಲ್ಲೆಯಲ್ಲಿ ಕೊರೋನ ವೈರಸ್ ನಿಯಂತ್ರಣದ ಕುರಿತಂತೆ ಇಲಾಖೆ ಕೈಗೊಂಡಿರುವ ಕ್ರಮಗಳ ಕುರಿತು ವಿವರಿಸಿದರು.

ಸಾರ್ವಜನಿಕ ಜಾಲತಾಣಗಳಲ್ಲಿ ಬರುವ ಸುಳ್ಳುಸುದ್ದಿ ಹಾಗೂ ವದಂತಿ ಗಳನ್ನು ಸಾರ್ವಜನಿಕರು ನಂಬದಂತೆ ಮನವಿ ಮಾಡಿದ ಅವರು, ಇದರಿಂದ ಗಾಬರಿಗೊಳ್ಳುವ ಅಥವಾ ಆತಂಕಕ್ಕೊಳಗಾಗುವ ಅಗತ್ಯವಿಲ್ಲ. ಆದರೆ ಈ ರೋಗದ ಲಕ್ಷಣಗಳನ್ನು ಅರಿತುಕೊಂಡು ಅಗತ್ಯ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳುವಂತೆ ಸಲಹೆ ನೀಡಿದರು.

ಬುಧವಾರ ಇಸ್ರೇಲ್‌ನಿಂದ ಉಡುಪಿಗೆ ಆಗಮಿಸಿರುವ ಸುಮಾರು 75 ವರ್ಷದ ವ್ಯಕ್ತಿಗೆ ಕೆಮ್ಮು ಹಾಗೂ ಶೀತದ ತೊಂದರೆ ಇದ್ದು, ಹೀಗಾಗಿ ರೋಗಲಕ್ಷಣಗಳ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಗೆ ಕರೆ ತಂದು ಅಲ್ಲಿರುವ ಪ್ರತ್ಯೇಕತಾ ವಾರ್ಡ್‌ಗೆ ಸೇರಿಸಲಾಗಿದೆ. ಇಂದು ಬೆಳಗ್ಗೆ ಆತನ ಗಂಟಲು ದ್ರವವನ್ನು ಪರೀಕ್ಷೆಗಾಗಿ ಬೆಂಗಳೂರಿಗೆ ಕಳುಹಿಸಲಾಗಿದೆ. ವರದಿ ಬಂದ ಬಳಿಕವಷ್ಟೇ ಅವರಿಗೆ ಕೊರೋನ ಸೋಂಕು ಇದೆಯೋ ಇಲ್ಲವೋ ಎಂಬುದನ್ನು ಖಚಿತ ಪಡಿಸಿಕೊಂಡು ಮುಂದಿನ ಚಿಕಿತ್ಸೆ ಕುರಿತು ಆಲೋಚಿಸಲಾಗುವುದು ಎಂದು ಹೇಳಿದರು.

ಉಡುಪಿಯಲ್ಲಿ ಶಂಕಿತ ಕೊರೋನ ವೈರಸ್ ಪೀಡಿತ ರೋಗಿಗಳಿಗೆ ಚಿಕಿತ್ಸೆಗಾಗಿ ದಾಖಲು ಮಾಡಲು ಜಿಲ್ಲಾ ಆಸ್ಪತ್ರೆಯಲ್ಲಿ 5 ಹಾಸಿಗೆಗಳ ಪ್ರತ್ಯೇಕ ವಾರ್ಡ್‌ನ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಎರಡು ಹಾಸಿಗೆಗಳ ಐಸಿಯು ಹಾಗೂ ಮೂರು ವೆಂಟಿಲೇಟರ್‌ಗಳ ವ್ಯವಸ್ಥೆ ಮಾಡಲಾಗಿದೆ. ಕುಂದಾಪುರ ಮತ್ತು ಕಾರ್ಕಳ ತಾಲೂಕು ಆಸ್ಪತ್ರೆಗಳಲ್ಲೂ ತಲಾ ಮೂರು ಹಾಸಿಗೆಗಳ ಪ್ರತ್ಯೇಕ ವಾರ್ಡ್ ವ್ಯವಸ್ಥೆ ಮಾಡಲಾಗಿದೆ. ಇಲ್ಲಿ ರೋಗಿಗಳ ಚಿಕಿತ್ಸೆಗೂ ಸಂಪೂರ್ಣ ಸುರಕ್ಷತಾ ಉಡುಗೆ-ತೊಡುಗೆ ತೊಟ್ಟ ವೈದ್ಯರು, ನರ್ಸ್ ಸೇರಿದಂತೆ ಇತರ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ ಎಂದು ಡಾ.ಸೂಡ ತಿಳಿಸಿದರು.

ಕೊರೋನ ವೈರಸ್ ಹರಡುವುದನ್ನು ತಡೆಯುವ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯ ನಿರ್ದೇಶನದಂತೆ ಜಿಲ್ಲೆಯಲ್ಲಿ ಈಗಾಗಲೇ ತುರ್ತು ಕಾರ್ಯಪಡೆ ರಚಿಸಲು ಕ್ರಮ ಕೈಗೊಳ್ಳಲಾಗಿದ್ದು, ಎಲ್ಲಾ ಆಸ್ಪತ್ರೆಗಳ ವೈದ್ಯಕೀಯ ಹಾಗೂ ಅರೆ ವೈದ್ಯಕೀಯ ಸಿಬ್ಬಂದಿಗಳು ಸೇರಿದಂತೆ ಪಂಚಾಯತ್ ಪಿಡಿಓಗಳಿಗೆ ಈ ಕುರಿತು ಸಂಪೂರ್ಣ ಮಾಹಿತಿ ಹಾಗೂ ತರಬೇತಿ ನೀಡಲಾಗಿದೆ. ಹಾಗೂ ಜಿಲ್ಲಾಸ್ಪತ್ರೆಯಲ್ಲಿ ಅಗತ್ಯ ಔಷಧ ಮತ್ತು ಮಾಸ್ಕ್‌ಗಳು ಸೇರಿದಂತೆ ಎಲ್ಲಾ ವೈಯಕ್ತಿಕ ರಕ್ಷಣಾ ಸಾಮಗ್ರಿಗಳ ದಾಸ್ತಾು ಇದೆ ಎಂದು ಅವರು ನುಡಿದರು.

ಕೊರೋನ ವೈರಸ್‌ನ ಲಕ್ಷಣಗಳು ಮತ್ತು ರೋಗ ಹರಡದಂತೆ ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಜಿಲ್ಲೆಯಾದ್ಯಂತ ಜನಸಾಮಾನ್ಯರಿಗೆ ಅರಿವು ಮೂಡಿಸಲು ಆರೋಗಯ ಇಲಾಖೆ ವ್ಯಾಪಕ ಕ್ರಮ ಕೈಗೊಂಡಿದೆ. ಉಡುಪಿ ಬಸ್‌ನಿಲ್ದಾಣ, ರೈಲ್ವೆ ನಿಲ್ದಾಣ, ಮಲ್ಪೆಬೀಚ್, ಕೊಲ್ಲೂರು ದೇವಸ್ಥಾನ ಮುಂತಾದ ಪ್ರಮುಖ ಸ್ಥಳಗಳಲ್ಲಿ ಹೋರ್ಡಿಂಗ್, ಪೋಸ್ಟರ್‌ಗಳನ್ನು ಅಳವಡಿಸಲಾಗಿದೆ. ಆರೋಗ್ಯ ಕಾರ್ಯಕರ್ತರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಮನೆಮನೆಗೆ ಕರಪತ್ರಗಳನ್ನು ಹಂಚಲು ಕ್ರು ಕೈಗೊಳ್ಳಲಾಗುತ್ತಿದೆ ಎಂದರು.

ಕೊರೋನ ರೋಗ ಲಕ್ಷಣಗಳ ಕುರಿತು ಜಿಲ್ಲೆಯಲ್ಲಿ ವ್ಯಾಪಕವಾಗಿ ಪ್ರಚಾರ ನೀಡಲಾಗುತ್ತದೆ. ಹೊರರಾಜ್ಯ ಮತ್ತು ಹೊರದೇಶದಿಂದ ಬರುವವರ ಮೇಲೆ ಹಾಗೂ ಅವರ ಆರೋಗ್ಯ ಸ್ಥಿತಿಯ ಮೇಲೆ ನಿಗಾ ವಹಿಸುವಂತೆ ಇಲಾಖೆಯ ಸಿಬ್ಬಂದಿಗಳಿಗೆ ಸೂಚಿಸಲಾಗಿದೆ. ವಿದೇಶದಿಂದ ಆಗಮಿಸುವವರು ಸೂಕ್ತ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳುವಂತೆ ಹಾಗೂ ರೋಗ ಲಕ್ಷಣ ಕಂಡು ಬಂದಲ್ಲಿ ಕೂಡಲೇ ಆರೋಗ್ಯ ಇಲಾಖೆಗೆ ಮಾಹಿತಿ ನೀಡುವಂತೆ ತಿಳಿಸಿದರು.

ಮಣಿಪಾಲಕ್ಕೆ ಹೊರದೇಶದಿಂದ ಬರುವ ವಿದ್ಯಾರ್ಥಿಗಳ ಕುರಿತಂತೆ ಮಾಹೆ ವಿಶ್ವವಿದ್ಯಾನಿಲಯದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಂಪೂರ್ಣ ಮಾಹಿತಿ ಗಳನ್ನು ಕಲೆಹಾಕಲಾಗುತ್ತಿದೆ ಎಂದರು.

ಕೊರೋನಾ ವೈರಸ್ ಕುರಿತಂತೆ ಸಾರ್ವಜನಿಕರು ಯಾವುದೇ ರೀತಿಯ ಭಯಭೀತಿಗೊಳಗಾಗದೇ,ಯಾವುದೇ ಸಮಸ್ಯೆಗಳಿದ್ದಲ್ಲಿ ಆರೋಗ್ಯ ಇಲಾಖೆಯ ಉಚಿತ ಹೆಲ್ಪ್‌ಲೈನ್ ಸಂಖ್ಯೆ 104 ಅಥವಾ 080-2228541/ 22374658 ಅಥವಾ ಉಡುಪಿ ಜಿಲ್ಲಾ ಸರ್ವೇಕ್ಷಣಾ ಘಟಕ ದೂ.ಸಂ. 0820-2525561 ನ್ನು ಸಂಪರ್ಕಿಸುವಂತೆ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ವಾಸುದೇವ ಉಪಾಧ್ಯಾಯ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮರಾವ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X