Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾ.8: `ಸ್ವಚ್ಛ ಉಬಾರ್- ತ್ಯಾಜ್ಯ ಮುಕ್ತ...

ಮಾ.8: `ಸ್ವಚ್ಛ ಉಬಾರ್- ತ್ಯಾಜ್ಯ ಮುಕ್ತ ಊರು' ಯೋಜನೆಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ5 March 2020 10:11 PM IST
share

ಉಪ್ಪಿನಂಗಡಿ, ಮಾ. 5: ರಾಮಕೃಷ್ಣ ಮಿಷನ್ ಮಂಗಳೂರು ಇದರ ಮಾರ್ಗದರ್ಶನದಲ್ಲಿ ಉಪ್ಪಿನಂಗಡಿ ಗ್ರಾಮ ಪಂಚಾಯತ್‍ನ ನೇತೃತ್ವದಲ್ಲಿ ಇದರ ನೇತೃತ್ವದಲ್ಲಿ 'ಸ್ವಚ್ಚ ಉಬಾರ್ - ತ್ಯಾಜ್ಯ ಮುಕ್ತ ಊರು' ಯೋಜನೆಯನ್ನು ಮಾರ್ಚ್ 8ರಂದು ಉಪ್ಪಿನಂಗಡಿಯಲ್ಲಿ ವಿದ್ಯುಕ್ತವಾಗಿ ಉದ್ಘಾಟಿಸಲಾಗುವುದು ಎಂದು ರಾಮಕೃಷ್ಣ ಮಿಷನ್ ಸ್ವಚ್ಚತಾ ಅಭಿಯಾನದ ಮುಖ್ಯ ಸಂಯೋಜಕ ಉಮಾನಾಥ್ ಕೋಟೆಕಾರ್ ತಿಳಿಸಿದರು.

 ಅವರು ಫೆ.5ರಂದು ಉಪ್ಪಿನಂಗಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಕರೆಯಲಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಚ್ಚತೆಯ ಪರಿಕಲ್ಪನೆ ಭಾರತೀಯರಲ್ಲಿ

ಶತಶತಮಾನಗಳಿಂದಲೂ ಮೂಡಿ ಬಂದಿದೆ. ಆದರೆ ಅದು ವೈಯಕ್ತಿಕ ನೆಲೆಗೆ ಮಾತ್ರ ಸೀಮಿತವಾಗಿದೆ. ಸಾಮೂಹಿಕ ಸ್ವಚ್ಚತೆಯ ಪರಿಕಲ್ಪನೆಯನ್ನು ಮೂಡಿಸುವ ನಿಟ್ಟಿನಲ್ಲಿ ರಾಮಕೃಷ್ಣ

ಮಿಷನ್ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು, ಮಂಗಳೂರು ನಗರದಲ್ಲಿ ಸ್ವಚ್ಚತೆಯ ಬಗ್ಗೆ ಯಶಸ್ವಿ ಕಾರ್ಯಕ್ರಮವನ್ನು ಕೈಗೊಂಡ ಹಿರಿಮೆಯೊಂದಿಗೆ ಗ್ರಾಮಾಂತರ ಪ್ರದೇಶದಲ್ಲಿ ಮೊತ್ತ ಮೊದಲ ಬಾರಿಗೆ ಯೋಜನೆಯನ್ನು ಕಾರ್ಯಾರಂಭಗೊಳಿಸಲು ಉಪ್ಪಿನಂಗಡಿಯನ್ನು ಆಯ್ಕೆ ಮಾಡಲಾಗಿದೆ. ಇದು ಜನತೆಗೆ ಸಹ್ಯವಾದ ಯೋಜನೆಯಾಗಿದೆ. ಇಲ್ಲಿ ಡಂಪಿಂಗ್ ಯಾರ್ಡ್ ಸಮಸ್ಯೆ ಇಲ್ಲ. 2000ದಿಂದ 3000 ಚದರ ಅಡಿ ಭೂಮಿ ಲಭಿಸಿದರೆ ಸಾಕು. ಹಸಿ ತ್ಯಾಜ್ಯವನ್ನು ಜೈವಿಕ ಗೊಬ್ಬರವನ್ನಾಗಿಯೂ, ಒಣ ತ್ಯಾಜ್ಯವನ್ನು ಮರು ಬಳಕೆಗೆ ಬಳಸಲ್ಪಡುವುದರೊಂದಿಗೆ ತ್ಯಾಜ್ಯದಿಂದಲೂ ಆದಾಯ ಪಡೆಯಬಹುದೆಂಬ ಭಾವನೆಯನ್ನು ಮೂಡಿಸಲಾಗುತ್ತದೆ ಎಂದರು.

ಜನತೆಯ ಸಹಕಾರ ಅಗತ್ಯ: ಉಪ್ಪಿನಂಗಡಿ ಗ್ರಾಮ ಪಂಚಾಯತ್ ಆಡಳಿತ ತೋರಿದ ಸ್ವಚ್ಚತೆಯ ಬಗೆಗಿನ ಕಾಳಜಿ ಮತ್ತು ಮುತುವರ್ಜಿಯ ಕಾರಣಕ್ಕೆ ರಾಮಕೃಷ್ಣ ಮಿಷನ್ ಉಪ್ಪಿನಂಗಡಿ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮವನ್ನು ಕೈಗೆತ್ತಿಕೊಂಡಿದೆ. ಈ ಕಾರ್ಯಕ್ರಮ ನೂರಕ್ಕೆ ನೂರರಷ್ಟು ಯಶಸ್ಸು ಸಾಧಿಸಲು ಇಲ್ಲಿನ ಜನತೆಯ ಸಹಕಾರ ಅತೀ ಅಗತ್ಯ. ತ್ಯಾಜ್ಯವನ್ನು ವಿಂಗಡಿಸಿ ನೀಡುವುದು, ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯದಿರುವುದು, ಸ್ವಚ್ಚತಾ ಕಾರ್ಯಕರ್ತರೊಂದಿಗೆ ಸಹಕರಿಸುವುದರಿಂದ ಯೋಜನೆಯ ಯಶಸ್ಸಿಗೆ ಸಹಕರಿಸಬೇಕು ಎಂದರು.

ಶ್ರೀ ರಾಮಕೃಷ್ಣ ಮಿಷನ್‍ನ ಶಿಕ್ಷಣ ಸಂಬಂಧ ಕಾರ್ಯಕ್ರಮಗಳ ಜವಾಬ್ದಾರಿ ವಹಿಸಿಕೊಂಡಿರುವ ರಂಜನ್ ಬೆಳ್ಳರಪಾಡಿ ಮಾತನಾಡಿ, "ಸ್ವಚ್ಚ ಉಬಾರ್-ತ್ಯಾಜ್ಯ ಮುಕ್ತ ಊರು" ಎಂಬ ಯೋಜನೆಯ ಬಗ್ಗೆ ಈಗಾಗಲೇ ಪೂರ್ವ ಸಿದ್ದತೆಗಳು ಸಿದ್ದವಾಗಿದೆ. ದಿನವಹಿ 500 ಕೆಜಿ ತ್ಯಾಜ್ಯವನ್ನು ಗೊಬ್ಬರವನ್ನಾಗಿಸುವ ಸಾಮರ್ಥ್ಯದ ಘಟಕವನ್ನು ರಚಿಸಲಾಗಿದೆ. ದ.ಕ. ಜಿಲ್ಲೆಯಲ್ಲಿಯೇ ಪ್ರಪ್ರಥಮ ಬಾರಿಗೆ ಉಪ್ಪಿನಂಗಡಿಯಲ್ಲಿ ಈ ಯೋಜನೆಯಲ್ಲಿ ಪರಿಸರ ಸ್ನೇಹಿ ವಾಹನ ಬಳಸಲಾಗುತ್ತದೆ ಎಂದರು.

 ಮಾರ್ಚ್ 8ರಂದು ರಾಮಕೃಷ್ಣ ಮಠ ಇದರ ಅಧ್ಯಕ್ಷರಾದ ಸ್ವಾಮಿ ಜಿತಕಾಮಾನಂದಜೀ ಮಹರಾಜ್ ಹಾಗೂ ಸ್ವಾಮಿ ಏಕಗಮ್ಯಾನಂದಜೀ ಇವರ ಉಪಸ್ಥಿತಿಯಲ್ಲಿ ಶಾಸಕ ಸಂಜೀವ ಮಠಂದೂರು ಯೋಜನೆಗೆ ಚಾಲನೆ ನೀಡಲಿದ್ದಾರೆ. ಉಪ್ಪಿನಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಕೆ. ಅಬ್ದುಲ್ ರಹಿಮಾನ್ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆರ್. ಸೆಲ್ವಮಣಿ, ಪುತ್ತೂರು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

 ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪಂಚಾಯತ್ ಸ್ವಚ್ಚಭಾರತ್ ಅಭಿಯಾನದ ಅಧಿಕಾರಿ ನವೀನ್, ಉಪ್ಪಿನಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಕೆ. ಅಬ್ದುಲ್ ರಹಿಮಾನ್, ಅಭಿವೃದ್ಧಿ ಅಧಿಕಾರಿ ಮಾಧವ, ಕುಡಿಯುವ ನೀರು ಮತ್ತು ನೈರ್ಮಲ್ಯ ಸಮಿತಿ ಉಪಾಧ್ಯಕ್ಷ ಜಯಂತ ಪೊರೋಳಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X