Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಜ್ಯ ಮಟ್ಟದ ಸಹ್ಯಾದ್ರಿ ವಿಜ್ ಕ್ವಿಝ್ :...

ರಾಜ್ಯ ಮಟ್ಟದ ಸಹ್ಯಾದ್ರಿ ವಿಜ್ ಕ್ವಿಝ್ : ‘ಮ್ಯಾಪ್ಸ್’ ವಿದ್ಯಾರ್ಥಿಗಳ ತಂಡ ಚಾಂಪಿಯನ್

ಉಜಿರೆ ಎಸ್‌ಡಿಎಂ ಕಾಲೇಜು ರನ್ನರ್‌ಅಪ್

ವಾರ್ತಾಭಾರತಿವಾರ್ತಾಭಾರತಿ6 March 2020 10:41 PM IST
share
ರಾಜ್ಯ ಮಟ್ಟದ ಸಹ್ಯಾದ್ರಿ ವಿಜ್ ಕ್ವಿಝ್ : ‘ಮ್ಯಾಪ್ಸ್’ ವಿದ್ಯಾರ್ಥಿಗಳ ತಂಡ ಚಾಂಪಿಯನ್

ಮಂಗಳೂರು, ಮಾ.6: ಸಹ್ಯಾದ್ರಿ ಇಂಜಿನಿಯರಿಂಗ್ ಆ್ಯಂಡ್ ಮ್ಯಾನೇಜ್‌ಮೆಂಟ್ ವ್ಯವಹಾರಿಕ ಆಡಳಿತ ವಿಭಾಗವು ನಗರದ ಹೊರವಲಯದ ಅಡ್ಯಾರ್ ಸಹ್ಯಾದ್ರಿ ಕಾಲೇಜ್ ಕ್ಯಾಂಪಸ್ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ 6ನೇ ಆವೃತ್ತಿಯ ಸಹ್ಯಾದ್ರಿ ವಿಜ್ ಕ್ವಿಝ್ ನಲ್ಲಿ ಮಂಗಳೂರು ಅಕಾಡಮಿ ಆಫ್ ಪ್ರೊಫೆಷನಲ್ ಸ್ಟಡೀಸ್ (ಮ್ಯಾಪ್ಸ್) ವಿದ್ಯಾರ್ಥಿಗಳ ತಂಡವು ಕ್ವಿಜ್‌ನ ಚಾಂಪಿಯನ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.

ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದ ಮಂಗಳೂರು ಎನ್‌ಐಪಿಎಂ ಅಧ್ಯಕ್ಷ ಮತ್ತು ಕಾರ್ಡೋಲೈಟ್‌ನ ಪ್ರಧಾನ ವ್ಯವಸ್ಥಾಪಕ ದಿವಾಕರ್ ಕದ್ರಿ, ವಿದ್ಯಾರ್ಥಿಗಳ ಪಾಲಿಗೆ ಇಂತಹ ಕ್ಷಣಗಳು ಅತಿಮುಖ್ಯ. ಓದಿನ ಜತೆಗೆ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿ ದೆಸೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ವಿದ್ಯಾರ್ಥಿಗಳು ಸದಾ ಸ್ಪರ್ಧಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದು ಎಂದರು.

ಅತ್ಯುತ್ತಮ ಅಂಕ ದಾಖಲಿಸಿದ ಮ್ಯಾಪ್ಸ್: ಮೊದಲ ಎರಡು ಸುತ್ತುಗಳಲ್ಲಿ ಮಂಗಳೂರು ಅಕಾಡಮಿ ಆಫ್ ಪ್ರೊಫೆಷನಲ್ ಸ್ಟಡೀಸ್ (ಮ್ಯಾಪ್ಸ್) ತಂಡವು ಮುನ್ನಡೆ ಸಾಧಿಸಿತ್ತು. ಅದರಂತೆ, ಕೊನೆಯ ಸುತ್ತಿನಲ್ಲೂ ಅತ್ಯುತ್ತಮ ಅಂಕ ದಾಖಲಿಸಿ ಚಾಂಪಿಯನ್‌ಆಗಿ ಹೊರಹೊಮ್ಮಿತು. ಚಾಂಪಿಯನ್ ತಂಡದಲ್ಲಿ ಸ್ಕಂದಕೃಷ್ಣ, ತ್ರಿಶೂಲ್ ಎಂ.ವಿ. ಮತ್ತು ಅನುರಾಗ್ ಇದ್ದರು. ವಿಜೇತ ತಂಡವು ಟ್ರೋಫಿ ಹಾಗೂ 25 ಸಾವಿರ ರೂ. ನಗದು ಬಹುಮಾನ ಪಡೆದುಕೊಂಡಿತು.

ರನ್ನರ್ ಅಪ್: ಸಹ್ಯಾದ್ರಿ ವಿಜ್ ಕ್ವಿಝ್ ರನ್ನರ್ ಅಪ್ ಪ್ರಶಸ್ತಿಯು ಉಜಿರೆ ಎಸ್‌ಡಿಎಂ ಕಾಲೇಜಿನ (ಸ್ವಾಯತ್ತ) ತಂಡದ ಪಾಲಾಯಿತು. ಸುಮಂತ್ ಕೆ, ಶ್ರೀರಾಮ ಮತ್ತು ವರ್ಗಿಸ್ ಥಾಮಸ್ ಉತ್ತಮ ಸ್ಪರ್ಧೆ ನೀಡಿದರೂ, ಮೊದಲ ಸ್ಥಾನ ಪಡೆಯುವ ಕನಸು ಈಡೇರಲಿಲ್ಲ. ವಿಜೇತ ತಂಡಕ್ಕೆ ಟ್ರೋಫಿ ಹಾಗೂ 15 ಸಾವಿರ ರೂ. ನಗದು ಬಹುಮಾನ ನೀಡಲಾಯಿತು.

ಮೂರನೇ ಸ್ಥಾನವು ನಿಟ್ಟೆಯ ಡಾ.ಎನ್‌ಎಸ್‌ಎಎಂ ಪ್ರಥಮ ದರ್ಜೆ ಕಾಲೇಜಿನ ತಂಡದ ಪಾಲಾಯಿತು. ಗಗನ್ ವಿ. ಪಲಿಮಾರ್, ಕೆ.ಗೌತಮ್ ಮತ್ತು ರಿಯಾ ಮೆನೆಜಸ್ ತಂಡವು ಟ್ರೋಫಿ ಹಾಗೂ 10 ಸಾವಿರ ರೂ. ನಗದು ಪ್ರಶಸ್ತಿ ಪಡೆಯಿತು.

ರಕ್ಷಿತ್ ಶೆಟ್ಟಿ ಕ್ವಿಜ್ ಮಾಸ್ಟರ್ ಆಗಿ ಕಾರ್ಯನಿರ್ವಹಿಸಿದರು. ಸಹ್ಯಾದ್ರಿ ಕಾಲೇಜಿನ ಪ್ರಾಚಾರ್ಯ ಶ್ರೀನಿವಾಸ್ ಕುಂಟೆ ಹಾಗೂ ವಸಂತ ಕೇದಿಗೆ, ಮುಖ್ಯ ಸಂಯೋಜಕ ಪ್ರೊ.ಪದ್ಮನಾಭ ಬಿ., ಡಾ.ವಿಶಾಲ್ ಸಮರ್ಥ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X