ಭಟ್ಕಳ: ಇಬ್ಬರು ಮಹಿಳಾ ಪತ್ರಕರ್ತೆಯರಿಗೆ ಪ್ರಶಸ್ತಿ

ಭಟ್ಕಳ: ಮಾರ್ಚ 7 ಹಾಗೂ 8ರಂದು ಮಂಗಳೂರಿನಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ 35ನೇ ಸಮ್ಮೇಳನದಲ್ಲಿ ಯಶೋದಮ್ಮ ಜಿ. ನಾರಾಯಣ ಪ್ರಶಸ್ತಿಗೆ ಭಾಜನರಾಗಿರುವ ವಿದ್ಯಾ ಕೊಡ್ಲಕೆರೆ ಹಾಗೂ ಅತ್ಯುತ್ತಮ ಕೃಷಿ ವರದಿಗೆ ಯಜಮಾನ್ ಟಿ. ನಾರಾಯಣಪ್ಪ ಸ್ಮಾರಕ ಪ್ರಶಸ್ತಿಗೆ ಭಾಜನರಾಗಿರುವ ಸಂಧ್ಯಾ ಆರ್. ಹೆಗಡೆ ಶಿರಸಿ ಇವರನ್ನು ಉತ್ತರ ಕನ್ನಡ ಜಿಲ್ಲಾ ಕಾರ್ಯನಿತರ ಪತ್ರಕರ್ತರ ಸಂಘ ಅಭಿನಂದಿಸಿದೆ.
ಉತ್ತರ ಕನ್ನಡ ಜಿಲ್ಲೆಯ ಇಬ್ಬರು ಮಹಿಳಾ ಪತ್ರಕರ್ತರು ಪ್ರಶಸ್ತಿಯನ್ನು ಸ್ವೀಕರಿಸುತ್ತಿರುವುದು ಜಿಲ್ಲಾ ಸಂಘಕ್ಕೆ ಹೆಮ್ಮೆಯ ವಿಷಯವಾಗಿದ್ದು ಇನ್ನೂ ಹೆಚ್ಚಿನ ಪ್ರಶಸ್ತಿ ಅವರಿಗೆ ದೊರೆಯುವಂತಾಗಲಿ. ಜಿಲ್ಲೆಯಿಂದ ಇನ್ನೂ ಹೆಚ್ಚಿನ ಪ್ರತಿಭೆಗಳು ಪತ್ರಿಕಾ ಮಾಧ್ಯಮದಲ್ಲಿ ತಮ್ಮ ಪ್ರತಿಭೆಯನ್ನು ಬೆಳಗಲಿ ಎಂದು ಜಿಲ್ಲಾಧ್ಯಕ್ಷ ರಾಧಾಕೃಷ್ಣ ಭಟ್ಟ, ಪ್ರಧಾನ ಕಾರ್ಯದರ್ಶಿ ನರಸಿಂಹ ಅಡಿ ಹಾಗೂ ರಾಜ್ಯ ಸಮಿತಿ ಸದಸ್ಯ ಜಿ. ಸುಬ್ರಾಯ ಭಟ್ಟ ಬಕ್ಕಳ ಶುಭ ಕೋರಿದ್ದಾರೆ.
Next Story





