"ಕೊರೋನ ವೈರಸ್ ಹರಡುವ ಮೊದಲು ಒಳಚರಂಡಿ ಕಾಮಗಾರಿ ಪೂರ್ಣಗೊಳಿಸಿ"

ಬೆಂಗಳೂರು, ಮಾ.6: ಅರಸೀಕೆರೆ ನಗರದ ಜನರಿಗೆ ಮಾರಕ ‘ಕೊರೋನ ವೈರಸ್’ ಹರಡುವ ಮೊದಲು ಸಮರ್ಪಕ ಒಳಚರಂಡಿ ವ್ಯವಸ್ಥೆ ಕಲ್ಪಿಸಬೇಕೆಂದು ಜೆಡಿಎಸ್‌ನ ಹಿರಿಯ ಸದಸ್ಯ ಕೆ.ಎಂ. ಶಿವಲಿಂಗೇಗೌಡ ಆಗ್ರಹಿಸಿದ ಪ್ರಸಂಗ ನಡೆಯಿತು.
ಶುಕ್ರವಾರ ವಿಧಾನಸಭೆ ಪ್ರಶ್ನೋತ್ತರ ವೇಳೆಯಲ್ಲಿ ನಗರದ ಒಳಚರಂಡಿ ಕಾಮಗಾರಿ ವಿಳಂಬಕ್ಕೆ ಸಂಬಂಧಿಸಿದಂತೆ ಪ್ರಶ್ನಿಸಿದ ಅವರು, ಕಾಮಗಾರಿ ವಿಳಂಬದಿಂದ ನಗರದ ಜನರು ಮೂಗು ಮುಚ್ಚಿಕೊಂಡು ಸಂಚರಿಸುವ ಸ್ಥಿತಿ ಇದೆ. ಕೂಡಲೇ ಒಳಚರಂಡಿ ವ್ಯವಸ್ಥೆ ಕಾಮಗಾರಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಕೋರಿದರು.
ಇದಕ್ಕೆ ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜು ಪರವಾಗಿ ಉತ್ತರ ನೀಡಿದ ಕಾನೂನು ಸಚಿವ ಮಾಧುಸ್ವಾಮಿ, ಈ ಸಂಬಂಧ ಶೀಘ್ರವೇ ಖುದ್ದು ಸ್ಥಳ ಪರಿಶೀಲನೆ ನಡೆಸಿ, ಅಧಿಕಾರಿಗಳ ಸಭೆ ನಡೆಸಿ ನಗರದ ಒಳಚರಂಡಿ ಕಾಮಗಾರಿ ತ್ವರಿತಗತಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
Next Story





