ಬಿಜೆಪಿ ನಾಯಕಿ ಜಯಪ್ರದಾಗೆ ಜಾಮೀನುರಹಿತ ವಾರಂಟ್ ಹೊರಡಿಸಿದ ನ್ಯಾಯಾಲಯ

ರಾಂಪುರ(ಉತ್ತರಪ್ರದೇಶ), ಮಾ.7: ಕಳೆದ ವರ್ಷ ನಡೆದ ಲೋಕಸಭಾ ಚುನಾವಣೆಯ ವೇಳೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ಹಿರಿಯ ನಟಿ ಹಾಗೂ ಬಿಜೆಪಿ ನಾಯಕಿ ಜಯಪ್ರದಾ ವಿರುದ್ಧ ಉತ್ತರಪ್ರದೇಶದ ನ್ಯಾಯಾಲಯ ಜಾಮೀನುರಹಿತ ವಾರಂಟ್ ಹೊರಡಿಸಿದೆ.
2019ರ ಲೋಕಸಭಾ ಚುನಾವಣೆಯ ವೇಳೆಗೆ 57ರ ಹರೆಯದ ಬಿಜೆಪಿ ನಾಯಕಿ ಜಯಪ್ರದಾ ವಿರುದ್ಧ ಮಾದರಿ ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣದ ಮುಂದಿನ ವಿಚಾರಣೆಯನ್ನು ಎಪ್ರಿಲ್ 20ಕ್ಕೆ ಮುಂದೂಡಲಾಗಿದೆ.
ಸಾರ್ವತ್ರಿಕ ಚುನಾವಣೆಯಲ್ಲಿ ರಾಂಪುರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಜಯಪ್ರದಾ ವಿರುದ್ಧ ಸಮಾಜವಾದಿ ಪಕ್ಷದ ಅಭ್ಯರ್ಥಿ ಆಝಂ ಖಾನ್ ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಜಯ ಸಾಧಿಸಿದ್ದರು.
Next Story





