Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರೈಲು ಯೋಜನೆಗೆ ಅಗತ್ಯ ಭೂಮಿ, ಹಣಕಾಸು...

ರೈಲು ಯೋಜನೆಗೆ ಅಗತ್ಯ ಭೂಮಿ, ಹಣಕಾಸು ನೆರವು: ಸಿಎಂ ಯಡಿಯೂರಪ್ಪ

ಯಶವಂತಪುರ-ಕಾರವಾರ-ವಾಸ್ಕೋ ರೈಲು ಮಾರ್ಗಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ7 March 2020 6:01 PM IST
share
ರೈಲು ಯೋಜನೆಗೆ ಅಗತ್ಯ ಭೂಮಿ, ಹಣಕಾಸು ನೆರವು: ಸಿಎಂ ಯಡಿಯೂರಪ್ಪ

ಬೆಂಗಳೂರು, ಮಾ.7: ರಾಜ್ಯ ಸರಕಾರವು ರೈಲ್ವೆ ಯೋಜನೆಗಳಿಗೆ ಅಗತ್ಯ ಭೂಮಿ, ಹಣಕಾಸಿನ ನೆರವು ಸೇರಿದಂತೆ ಎಲ್ಲ ರೀತಿಯ ಸಹಕಾರ ನೀಡಲು ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ಶನಿವಾರ ನಗರದ ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಯಶವಂತಪುರ- ಕಾರವಾರ-ವಾಸ್ಕೋ ಮಾರ್ಗದ ನಡುವೆ ಸಂಚರಿಸುವ ನೂತನ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿಸಿ ಮಾತನಾಡಿದ ಅವರು, ಕೇಂದ್ರ ಸರಕಾರದಿಂದ ಮಂಜೂರಾಗುವ ಎಲ್ಲ ಯೋಜನೆಗಳನ್ನು ಕಾಲಮಿತಿಯೊಳಗೆ ಅನುಷ್ಠಾನಗೊಳಿಸುತ್ತಿದ್ದೇವೆಂದು ತಿಳಿಸಿದರು.

ಈ ಹಿಂದೆ ಇದೇ ರೈಲು ಮಂಗಳೂರು ನಗರದ ಮೂಲಕ ವಾಸ್ಕೋಗೆ ತಲುಪಬೇಕಾಗಿತ್ತು. ಇದರಿಂದ ಹೆಚ್ಚಿನ ಸಮಯ ತೆಗೆದುಕೊಳ್ಳುತ್ತಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ನೂತನ ರೈಲು ನೀಡಬೇಕೆಂಬುದು ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ಸಂಸದರು, ಶಾಸಕರು ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಿದ ಪರಿಣಾಮವಾಗಿ ಯಶವಂತಪುರ-ಕಾರವಾರ ಮಾರ್ಗವಾಗಿ ವಾಸ್ಕೋಗೆ ನೂತನ ರೈಲು ಸಂಚಾರ ಆರಂಭವಾಗಿದೆ ಎಂದು ಅವರು ಹೇಳಿದರು.

ರೈಲ್ವೆ ಯೋಜನೆಗಳಿಗೆ ರಾಜ್ಯದಿಂದ ಭೂಮಿ ಅರ್ಧ ವೆಚ್ಚವನ್ನು ನೀಡುವುದಾಗಿ ಆಶ್ವಾಸನೆ ನೀಡಿದ್ದೆ. ಈ ಮೂಲಕ ರಾಜ್ಯದ ರೈಲ್ವೆ ಯೋಜನೆಗಳಿಗೆ ಸದಾ ಬೆಂಬಲ ಕೊಡುತ್ತೇವೆ. ಮುಂಬರುವ ದಿನಗಳಲ್ಲಿ ರಾಜ್ಯಕ್ಕೆ ಇನ್ನಷ್ಟು ಹೊಸ ರೈಲ್ವೆ ಯೋಜನೆಗಳು ಲಭಿಸಲಿ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ಯಶವಂತಪುರ-ಕಾರವಾರ ಮಾರ್ಗವಾಗಿ ವಾಸ್ಕೋಗೆ ತಲುಪಲು ಹೊಸ ರೈಲು ಬೇಕೆಂದು ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿತ್ತು. ಈ ಭಾಗದ ಜನತೆಗೆ ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವ ಸುರೇಶ್ ಅಂಗಡಿ ಸೇರಿದಂತೆ ಮತ್ತಿತರರು ಸ್ಪಂದಿಸಿ ರೈಲ್ವೆ ಸಂಚಾರಕ್ಕೆ ಅನುಮತಿ ನೀಡಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು. ಬಾಕ್ಸ್

ವಾಸ್ಕೊ ರೈಲು ಮಾರ್ಗ

ಯಶವಂತಪುರ-ಕಾರವಾರ-ವಾಸ್ಕೊ ಮಾರ್ಗದ ರೈಲು ಪ್ರತಿದಿನ ಸಂಜೆ 6 ಗಂಟೆಗೆ ಯಶವಂತಪುರದಿಂದ ಹೊರಟು ಕುಣಿಗಲ್ ಮೂಲಕ ರಾತ್ರಿ 9.15ಕ್ಕೆ ಹಾಸನ ತಲುಪಿ, ಬೆಳಗಿನ ಜಾವ 3ಕ್ಕೆ ಪಡೀಲ್ ತಲುಪಲಿದೆ. 5ಕ್ಕೆ ಉಡುಪಿ, 5.30ಕ್ಕೆ ಕುಂದಾಪುರ, 8.30ಕ್ಕೆ ಕಾರವಾರ ತಲುಪಿದ ಬಳಿಕ 10.30ಕ್ಕೆ ವಾಸ್ಕೊ ತಲುಪಲಿದೆ. ಅದೇ ರೀತಿ ವಾಸ್ಕೊದಿಂದ ಸಂಜೆ 5.30ಕ್ಕೆ ಹೊರಟು, 7.25ಕ್ಕೆ ಕಾರವಾರ, 9.30ಕ್ಕೆ ಕುಂದಾಪುರ, ರಾತ್ರಿ 10 ಗಂಟೆಗೆ ಉಡುಪಿ ತಲುಪಿ, ಬೆಳಗ್ಗೆ 8 ಗಂಟೆಗೆ ಯಶವಂತಪುರ ರೈಲ್ವೆ ನಿಲ್ದಾಣಕ್ಕೆ ತಲುಪಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X