Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುದ್ದಿ ಮನೆಗಳ ಶೋಷಣೆ ಬಗ್ಗೆ ಧ್ವನಿ...

ಸುದ್ದಿ ಮನೆಗಳ ಶೋಷಣೆ ಬಗ್ಗೆ ಧ್ವನಿ ಎತ್ತಬೇಕಿದೆ: ದಿನೇಶ್ ಅಮೀನ್‌ ಮಟ್ಟು

ಪತ್ರಕರ್ತರ ವೃತ್ತಿ ತಲ್ಲಣವನ್ನು ತೆರೆದಿಟ್ಟ ವಿಚಾರಗೋಷ್ಠಿ

ವಾರ್ತಾಭಾರತಿವಾರ್ತಾಭಾರತಿ7 March 2020 8:07 PM IST
share
ಸುದ್ದಿ ಮನೆಗಳ ಶೋಷಣೆ ಬಗ್ಗೆ ಧ್ವನಿ ಎತ್ತಬೇಕಿದೆ: ದಿನೇಶ್ ಅಮೀನ್‌ ಮಟ್ಟು

ಮಂಗಳೂರು, ಮಾ. 7: ರಾಜ್ಯ ಮಟ್ಟದ ಪತ್ರಕರ್ತರ 35ನೆ ಸಮ್ಮೇಳನದಲ್ಲಿ ‘ಪತ್ರಕರ್ತರ ವೃತ್ತಿ ಸವಾಲು ಮತ್ತು ಸಾಮಾಜಿಕ ಹೊಣೆಗಾರಿಕೆ’ ಎಂಬ ವಿಷಯದಲ್ಲಿ ನಡೆದ ಗೋಷ್ಠಿ ಪತ್ರಿಕೋದ್ಯಮದ ಜತೆಯಲ್ಲೇ ವೃತ್ತಿನಿರತ ಪತ್ರಕರ್ತರು ಇಂದು ಎದುರಿಸುತ್ತಿರುವ ಸಂಕಷ್ಟಗಳನ್ನು ವಿಷದಪಡಿಸುವ ವೇದಿಕೆಯಾಗಿ ಮಾರ್ಪಟ್ಟಿತು.

ಗೋಷ್ಠಿಯಲ್ಲಿ ಪ್ರಾಸ್ತಾವಿಕ ಹಾಗೂ ವಿಷಯ ಮಂಡಿಸಿದ ಹಿರಿಯ ಪತ್ರಕರ್ತರೆಲ್ಲರೂ ಸುದ್ದಿ ಮನೆಗಳಲ್ಲಿ ಪತ್ರಕರ್ತರು ಎದುರಿಸುತ್ತಿರುವ ಸವಾಲು ಹಾಗೂ ವೃತ್ತಿ ತಲ್ಲಣಗಳ ಬಗ್ಗೆ ಆತಂಕ ವ್ಯಕ್ತಪಡಿಸಿದರು.

ದೇಶವನ್ನು ಕಾಡುತ್ತಿರುವ ಆರ್ಥಿಕ ಸಂಕಷ್ಟ, ನಿರುದ್ಯೋಗ ಸಮಸ್ಯೆ ಇಂದು ಸುದ್ದಿ ಮನೆಗಳಲ್ಲಿ ಕೆಲಸ ಮಾಡುತ್ತಿರುವ ಪತ್ರಕರ್ತರನ್ನೂ ಕಾಡುತ್ತಿದೆ. ಪತ್ರಕರ್ತ ತನ್ನ ವೃತ್ತಿಯನ್ನು ಉಳಿಸಿಕೊಳ್ಳುವ ಸವಾಲನ್ನು ಎದುರಿಸುತ್ತಿದ್ದು, ಈ ಬಗ್ಗೆ ಟ್ರೇಡ್ ಯೂನಿಯನ್‌ನಡಿ ನೋಂದಾವಣೆ ಗೊಂಡಿರುವ ರಾಜ್ಯ ಪತ್ರಕರ್ತರ ಸಂಘ ಧ್ವನಿ ಎತ್ತಬೇಕು ಎಂದು ಗೋಷ್ಠಿಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಸಲಹೆ ನೀಡಿದರು.

ಪತ್ರಕರ್ತನೊಬ್ಬ ಇಂದು ತನ್ನ ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡುವ ಪರಿಸ್ಥಿತಿ ಇಲ್ಲವಾಗಿದ್ದು, ತನ್ನ ವೃತ್ತಿಯನ್ನು ಉಳಿಸಿಕೊಳ್ಳುವುದೇ ದೊಡ್ಡ ಸವಾಲಾಗಿದೆ. ಒಂದು ರೀತಿಯಲ್ಲಿ ಕನ್ನಡ ಪತ್ರಿಕೋದ್ಯಮ ಸಾವಿನ ಮನೆ ತರ ಕಾಣುತ್ತಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಪತ್ರಕರ್ತರು ಕೆಲಸ ಕಳೆದುಕೊಂಡು ಬೀದಿಗೆ ಬೀಳುತ್ತಿದ್ದು, ಅವರ ಕುಟುಂಬಗಳು ಒಡೆದು ಹೋಗುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ ವೃತ್ತಿಯ ಸವಾಲಿನ ಬಗ್ಗೆ ಮಾತುಗಳು ನಿರ್ದಯಿಯಾಗಿ ಕಾಣುತ್ತದೆ. ಜಗತ್ತಿನ ಇತರ ಎಲ್ಲಾ ಶೋಷಣೆಗಳ ಬಗ್ಗೆ ಮಾತನಾಡುವವರು ಇಂದು ತಮ್ಮ ಶೋಷಣೆ ಬಗ್ಗೆ ಮಾತನಾಡಲಾಗದ ಪರಿಸ್ಥಿತಿ ಇದೆ. ಈ ಬಗ್ಗೆ ಪತ್ರಕರ್ತರ ಸಂಘ ಧ್ವನಿ ಎತ್ತೇಕಾಗಿದೆ ಎಂದು ಅವರು ಹೇಳಿದರು.

ಜ್ಞಾನ ಭಂಡಾರವಿಂದು ಬೆರಳ ತುದಿಯಲ್ಲಿದೆ. ತಂತ್ರಜ್ಞಾನ ಮುಂದುವರಿದೆ. ಅದರ ಜತೆಯಲ್ಲೇ 35 ವರ್ಷಗಳ ಹಿಂದೆ ಪತ್ರಕರ್ತರು, ಮಾಧ್ಯಮಕ್ಕೆ ಇದ್ದ ಗೌರವ ಇಂದು ಇದೆಯೇ ಎಂದು ಪ್ರಶ್ನಿಸುವಂತಾಗಿದೆ. ಎಲ್ಲಾ ವೃತ್ತಿಗಳಂತೆ ಪತ್ರಿಕೋದ್ಯಮವೂ ಇಂದು ಉದ್ಯಮವಾಗಿದೆ. ಇಂದಿನ ಪತ್ರಿಕೋದ್ಯಮಕ್ಕೆ ಸುದ್ದಿ ಮುಖ್ಯವಾಗಿಲ್ಲ. ಗ್ರಾಹಕರು ಮುಖ್ಯವಾಗಿದ್ದಾರೆ. ರಾಜಕಾರಣಿಗಳು, ಉದ್ಯಮಿಗಳು ಇಂದು ಪತ್ರಿಕೋದ್ಯಮ ಪ್ರವೇಶಿಸುತ್ತಿದ್ದಾರೆ. ಉದ್ಯಮಿಗಳಿಗಿಂತಲೂ ರಾಜಕಾರಣಿಗಳ ಪತ್ರಿಕೋದ್ಯಮ ಪ್ರವೇಶ ಅಪಾಯಕಾರಿ ಬೆಳವಣಿಗೆ ಎಂದು ಅವರು ಹೇಳಿದರು.

ಸಾಮಾಜಿಕ ಹೊಣೆಗಾರಿಕೆ ಇಲ್ಲದ ವೃತ್ತಿ ಅಪರಾಧ ಎಂದು ವಿಶ್ಲೇಷಿಸಿದ ಅವರು, ಸ್ವಾವಲಂಬಿಯಾಗಿ ಮಾಧ್ಯಮ ಹೇಗೆ ಕಟ್ಟಬೇಕು ಎಂಬುದರ ಬಗ್ಗೆ ಚಿಂತನೆ ಮಾಡಬೇಕಿದೆ ಎಂದರು.

ಟಿವಿ 9ನ ನಾ ವಿನಯ್ ಮಾತನಾಡಿ, ಮುದ್ರಣ, ಇಲೆಕ್ಟ್ರಾನಿಕ್ ಮಾಧ್ಯಮದಲ್ಲಿ ಪತ್ರಕರ್ತರನ್ನು ನಿರ್ದಯವಾಗಿ ಕೆಲಸದಿಂದ ತೆಗೆದು ಹಾಕುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು. ಕಳೆದ ಆರೇಳು ತಿಂಗಳ ಅವಧಿಯಲ್ಲಿ ಸುಮಾರು 300ರಷ್ಟು ಪತ್ರಕರ್ತರು ಕೆಲಸವನ್ನು ಕಳೆದುಕೊಂಡಿದ್ದಾರೆ ಎಂದು ಹೇಳಿದ ಅವರು, ವೃತ್ತಿಯಿಂದ ಹೊರಬಂದ ಮೇಲೆ ಅವರನ್ನು ಯಾರೂ ಮಾತನಾಡಿಸದಂತಾಗಿದೆ. ಅನಗತ್ಯವಾಗಿ ಕೆಲಸ ಕಳೆದುಕೊಂಡವರಿಗೆ ಪತ್ರಕರ್ತರ ಸಂಘವು ಸಮ್ಮೇಳನದ ಮೂಲಕ ವೇದಿಕೆಯನ್ನು ಸೃಷ್ಟಿಸುವಂತಾಬೇಕು ಎಂದು ಅವರು ಹೇಳಿದರು.

ಕನ್ನಡ ಪ್ರಭ ಸಂಪಾದಕ ರವಿ ಹೆಗಡೆ, ಕಂ.ಕ. ಮೂರ್ತಿ, ರವಿಕಾಂತ ಕುಂದಾಪುರ ಅವರು ಪತ್ರಕರ್ತರ ಸಂಕಷ್ಟಗಳ ಕುರಿತಂತೆಯೇ ಗೋಷ್ಠಿ ಯಲ್ಲಿ ಗಮನ ಸೆಳೆದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಿದ್ದರು. ನವೀನ್ ಶೆಟ್ಟಿ ಎಡ್ಮೆಮಾರ್ ಗೋಷ್ಠಿಯನ್ನು ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X