ಪುನಶ್ಚೇತನ ಅರಿವು ಕಾರ್ಯಾಗಾರ
ಉಡುಪಿ, ಮಾ.7: ಜಿಲ್ಲಾಡಳಿತ ಉಡುಪಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಉಡುಪಿ ಜಿಲ್ಲೆ, ಜಿಲ್ಲಾ ಸಣ್ಣ ಕೈಗಾರಿಕಾ ಸಂಘ ಉಡುಪಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಉಡುಪಿ, ಕೌಶಲ್ಯಾಭಿವೃದ್ಧಿ, ಉದ್ದಿಮೆಶೀಲತೆ ಹಾಗೂ ಜೀವನೋಪಾಯ ಇಲಾಖೆ ಉಡುಪಿ ಮತ್ತು ಯೂತ್ ಫಾರ್ ಜಾಬ್ಸ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಅಂಗವಿಕಲತೆ-ಉದ್ಯೋಗ ಮತ್ತು ಪುನಶ್ಚೇತನ ಬಗ್ಗೆ ಅರಿವು ಕಾರ್ಯಾಗಾರವು ಮಾ.10ರಂದು ಅಪರಾಹ್ನ 3 ಗಂಟೆಗೆ ಮಣಿಪಾಲದ ಅಲೆವೂರು ರಸ್ತೆಯ ಶಿವಳ್ಳಿ ಕೈಗಾರಿಕಾ ಪ್ರದೇಶದ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಸಭಾಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಜಿ. ಜಗದೀಶ್ ಉದ್ಘಾಟಿಸಲಿದ್ದು, ಜಿಲ್ಲಾ ಸಣ್ಣ ಕೈಗಾರಿಕೆಗಳ ಅಸೋಸಿಯೇಶನ್ ಉಡುಪಿ ಜಿಲ್ಲೆಯ ಅಧ್ಯಕ್ಷ ಐ. ಆರ್. ಫೆರ್ನಾಂಡಿಸ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story





